ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಸದ್ಯಕ್ಕೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಮಾರಾಟವಾಗುತ್ತಿರುವ ಎಲೆಕ್ಟ್ರಿಕ್ ಕಾರ್ ಆಗಿದೆ. ಆದರೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಮೇಲೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ದೆಹಲಿ ಸರ್ಕಾರವು ಹಠಾತ್ತನೆ ರದ್ದುಪಡಿಸಿದೆ.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ದೆಹಲಿ ಸರ್ಕಾರವು ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಅರ್ಹ ವಾಹನಗಳ ಪಟ್ಟಿಯಿಂದಲೂ ತೆಗೆದುಹಾಕಿದೆ. ಪೂರ್ತಿಯಾಗಿ ಚಾರ್ಜ್ ಆದ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯು 312 ಕಿ.ಮೀಗಳವರೆಗೆ ಚಲಿಸುತ್ತದೆ ಎಂದು ಟಾಟಾ ಮೋಟಾರ್ಸ್ ಹೇಳಿಕೊಂಡಿದೆ. ಆದರೆ ಈ ವ್ಯಾಪ್ತಿ ಲಭ್ಯವಿಲ್ಲವೆಂದು ಹಲವರು ದೂರು ನೀಡುತ್ತಲೇ ಇದ್ದರು.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಈ ದೂರುಗಳ ಹಿನ್ನೆಲೆಯಲ್ಲಿ ದೆಹಲಿ ರಾಜ್ಯ ಸರ್ಕಾರವು ಈ ಕ್ರಮ ಕೈಗೊಂಡಿದೆ. ಈ ಮಾಹಿತಿಯನ್ನು ದೆಹಲಿ ರಾಜ್ಯ ಸಾರಿಗೆ ಸಚಿವ ಕೈಲಾಶ್ ಕೆಲಾಡ್ ಖಚಿತಪಡಿಸಿದ್ದಾರೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಕಂಪನಿ ಹೇಳುತ್ತಿರುವಷ್ಟು ವ್ಯಾಪ್ತಿ ಲಭ್ಯವಿಲ್ಲವೆಂದು ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಮಾಲೀಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್‌ ಕಂಪನಿಗೆ ಈಗಾಗಲೇ ನೋಟಿಸ್ ಕಳುಹಿಸಲಾಗಿದೆ.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ದೆಹಲಿ ರಾಜ್ಯ ಸಾರಿಗೆ ಇಲಾಖೆಯ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಸಬ್ಸಿಡಿಗೆ ಅರ್ಹವಾದ ವಾಹನಗಳ ಪಟ್ಟಿಯಿಂದಲೂ ತೆಗೆದುಹಾಕಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಈ ಕ್ರಮಗಳು ದೆಹಲಿಯಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗಳ ಮಾರಾಟದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ವಾಯುಮಾಲಿನ್ಯದ ಸಮಸ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ದೆಹಲಿ ರಾಜ್ಯ ಸರ್ಕಾರವು ಸಬ್ಸಿಡಿ ನೀಡುತ್ತದೆ. ಸಾಕಷ್ಟು ಸಂಖ್ಯೆಯ ಗ್ರಾಹಕರು ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಸಲು ಆಸಕ್ತಿ ಹೊಂದಿದ್ದರು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ದೆಹಲಿ ಸರ್ಕಾರವು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ ಖರೀದಿಸಲು ಇನ್ನು ಮುಂದೆ ಸಬ್ಸಿಡಿ ನೀಡದೇ ಇರುವುದರಿಂದ ಗ್ರಾಹಕರು ಪೂರ್ಣ ಮೊತ್ತವನ್ನುಪಾವತಿಸಬೇಕಾಗುತ್ತದೆ. ಇದರಿಂದಾಗಿ ದೆಹಲಿಯಲ್ಲಿ ಈ ಎಸ್‌ಯುವಿಯ ಮಾರಾಟವು ಕುಸಿಯುವ ಸಾಧ್ಯತೆಗಳಿವೆ.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಭಾರತದಲ್ಲಿ ಎಆರ್‌ಎಐ ವಾಹನಗಳನ್ನು ಪರೀಕ್ಷಿಸಿ ಅವುಗಳ ಮೈಲೇಜ್ ಅಥವಾ ವ್ಯಾಪ್ತಿಯ ಬಗ್ಗೆ ಪ್ರಮಾಣೀಕರಿಸುತ್ತದೆ. ಆದರೆ ಬಹುತೇಕ ಬಾರಿ ಎಆರ್‌ಎಐ ನೀಡುವ ವರದಿಯು ನೈಜತೆಯಲ್ಲಿ ಬದಲಾಗುತ್ತದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಎಸಿ ಬಳಕೆ ಹಾಗೂ ಚಾಲಕನ ಚಾಲನಾ ಶೈಲಿಯಿಂದಾಗಿ ಮೈಲೇಜ್ ಬದಲಾಗಬಹುದು. ಇದರಿಂದಾಗಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಯ ವ್ಯಾಪ್ತಿಯೂ ಸಹ ಬದಲಾಗಿರುವ ಸಾಧ್ಯತೆಗಳಿವೆ.

ಗ್ರಾಹಕರ ದೂರು ಹಿನ್ನೆಲೆ...ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಸಬ್ಸಿಡಿ ರದ್ದು

ಸದ್ಯಕ್ಕೆ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗೆ ನೇರ ಸ್ಪರ್ಧೆ ನೀಡುವ ಯಾವುದೇ ಕಾರುಗಳಿಲ್ಲ. ಮಹೀಂದ್ರಾ ಕಂಪನಿಯ ಎಕ್ಸ್‌ಯು‌ವಿ 300 ಎಲೆಕ್ಟ್ರಿಕ್ ಎಸ್‌ಯುವಿಯು ಮಾರಾಟಕ್ಕೆ ಲಭ್ಯವಾದ ನಂತರ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿಗೆ ಪೈಪೋಟಿ ನೀಡಲಿದೆ.

Most Read Articles

Kannada
English summary
Delhi government cancels subsidy on Tata Nexon electric SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X