ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೋಟಾರ್ ವಾಹನಗಳಿಗೆ, ಪಾದಚಾರಿಗಳಿಗೆ ಹಾಗೂ ಸೈಕಲ್ ಸವಾರರಿಗೆ ಪ್ರತ್ಯೇಕ ಪಥಗಳನ್ನು ನಿರ್ಮಿಸಲು ದೆಹಲಿ ಸರ್ಕಾರವು ಮುಂದಾಗಿದೆ. ಈ ಮೂಲಕ ದೆಹಲಿಯನ್ನು ಸೈಕ್ಲಿಸ್ಟ್ ಹಾಗೂ ಪಾದಚಾರಿ ಸ್ನೇಹಿ ನಗರವನ್ನಾಗಿಸಲು ನಿರ್ಧರಿಸಲಾಗಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ದೆಹಲಿ ಮಾಸ್ಟರ್ ಪ್ಲ್ಯಾನ್ 2041ರ ಕರಡು ವರದಿಯು ಈ ಬಗ್ಗೆ ಮಾಹಿತಿ ನೀಡಿದೆ. ದೆಹಲಿ ಮಾಸ್ಟರ್ ಪ್ಲ್ಯಾನ್ 2041ರ ಕರಡು ವರದಿಯನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ತಮ್ಮ ಸಲಹೆ ಅಥವಾ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಕರಡು ವರದಿಯಲ್ಲಿ ವಿವಿಧ ಅಂಶಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ಸಾರ್ವಜನಿಕ ಸಾರಿಗೆಯು ಅಗ್ಗದ ಆಯ್ಕೆ ಮಾತ್ರ ಆಗಿರದೆ ಜನರಿಗೆ ಅನುಕೂಲಕರವಾದ ಹಾಗೂ ಸುರಕ್ಷಿತವಾದ ಆಯ್ಕೆಯಾಗಿರಬೇಕು. ಜೊತೆಗೆ ಜನರ ಆರೋಗ್ಯಕ್ಕೂ ಪ್ರಯೋಜನಕಾರಿಯಾಗಬೇಕು ಎಂಬುದನ್ನು ಗಮನಿಸಬೇಕು.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ದೆಹಲಿಯು ವಾಯುಮಾಲಿನ್ಯದಿಂದ ಹೆಚ್ಚು ತತ್ತರಿಸಿರುವ ನಗರಗಳಲ್ಲಿ ಒಂದು ಎಂಬುದು ಗಮನಿಸಬೇಕಾದ ಸಂಗತಿ. ಇದರಿಂದಾಗಿ ದೆಹಲಿಯ ನಿವಾಸಿಗಳು ಬಳಲುವಂತಾಗಿದೆ. ಪೆಟ್ರೋಲ್, ಡೀಸೆಲ್ ಎಂಜಿನ್ ಮೂಲಕ ಸಾಗುವ ವಾಹನಗಳು ಹೊರಸೂಸುವ ಹೊಗೆ ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ಈ ಕಾರಣಕ್ಕೆ ಮೋಟಾರ್ ವಾಹನಗಳ ಬದಲು ಜನರಿಗೆ ಸೈಕಲ್ ಬಳಸುವಂತೆ ಹೇಳಲಾಗುತ್ತಿದೆ. ವಿಶ್ವದ ಹಲವು ದೇಶಗಳು ಈಗ ಇದೇ ರೀತಿಯ ಕ್ರಮಗಳನ್ನುಕೈಗೊಳ್ಳುತ್ತಿವೆ. ಇವುಗಳ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯೂ ಹೆಚ್ಚುತ್ತಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚು ಪ್ರೋತ್ಸಾಹ ನೀಡಲಾಗುತ್ತಿದೆ. ಈ ಕರಡು ವರದಿಯ ಪ್ರಕಾರ ಪೆಟ್ರೋಲ್, ಡೀಸೆಲ್ ಎಂಜಿನ್ ಹೊಂದಿಲ್ಲದ ವಾಹನಗಳಿಗೆ ಹೆಚ್ಚು ಮೂಲಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ಅಂದರೆ ಪಾದಚಾರಿ ಮಾರ್ಗ ಹಾಗೂ ಬೈಸಿಕಲ್ ಟ್ರ್ಯಾಕ್‌ಗಳಂತಹ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಈ ಮಾರ್ಗಗಳು ಪರಿಸರ ಸ್ನೇಹಿಯಾಗುವುದರ ಜೊತೆಗೆ ಪಾದಚಾರಿಗಳಿಗೆ ಹಾಗೂ ಸೈಕ್ಲಿಸ್ಟ್'ಗಳಿಗೆ ನೆರವಾಗುತ್ತವೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ಮೋಟಾರ್ ವಾಹನ, ಸೈಕಲ್ ಹಾಗೂ ಪಾದಚಾರಿಗಳಿಗೆ ಪ್ರತ್ಯೇಕ ಮಾರ್ಗಗಳನ್ನು ಸ್ಥಾಪಿಸುವುದರಿಂದ ಅಪಘಾತಗಳ ಸಂಖ್ಯೆಯು ಸಹ ಕಡಿಮೆಯಾಗುತ್ತದೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನ ನೀತಿಯಲ್ಲಿ ಉಳಿದ ರಾಜ್ಯಗಳಿಗಿಂತ ಒಂದು ಹೆಜ್ಜೆ ಮುಂದಿದೆ.

ಪಾದಚಾರಿಗಳಿಗೆ, ಸೈಕಲ್ ಸವಾರರಿಗೆ ಸಿಹಿ ಸುದ್ದಿ ನೀಡಿದ ದೆಹಲಿ ಸರ್ಕಾರ

ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡುತ್ತದೆ. ಇದರಿಂದಾಗಿ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಜನರು ಉತ್ಸುಕರಾಗಿದ್ದಾರೆ. ದೇಹಲಿಯು ಭಾರತದ ಎಲೆಕ್ಟ್ರಿಕ್ ವಾಹನ ರಾಜಧಾನಿಯಾಗಿ ಹೊರಹೊಮ್ಮಿದರೆ ಅಚ್ಚರಿ ಪಡಬೇಕಾಗಿಲ್ಲ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Delhi Government to make seperate path for cyclists and pedestrians. Read in Kannada.
Story first published: Thursday, June 10, 2021, 20:30 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X