Just In
Don't Miss!
- News
ಪೊಲೀಸ್ ಆಯುಕ್ತರ ಕಚೇರಿಯಿಂದ ಕಾಲ್ ಬರುತ್ತೆ
- Education
MCL Recruitment 2021: 8 ಸಾಮಾನ್ಯ ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Sports
ಐಪಿಎಲ್ 2021: ರಾಜಸ್ಥಾನ್ ರಾಯಲ್ಸ್ ಜೊತೆ ಇಶ್ ಸೋಧಿ ಒಪ್ಪಂದ
- Lifestyle
ಅರಿಶಿನದ ಈ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ, ನೀವೂ ಶಾಕ್ ಆಗ್ತೀರಾ!
- Finance
30,000 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಕ್ಯಾಪ್ಜೆಮಿನಿ
- Movies
ರಾಬರ್ಟ್ ಸಂಭ್ರಮ: ವಿನಯದಿಂದ ತೆಲುಗು ಅಭಿಮಾನಿಗಳ ಮನಸು ಕದ್ದ ದರ್ಶನ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬೈಕ್ ಸವಾರರೇ ಎಚ್ಚರ: ರೇರ್ ವೀವ್ ಮಿರರ್ ಬಳಸದಿದ್ದರೂ ಬೀಳಲಿದೆ ದಂಡ
ರಸ್ತೆ ಸುರಕ್ಷತೆಯನ್ನು ಸುಧಾರಿಸಲು ದೆಹಲಿ ಪೊಲೀಸರು ಸಂಚಾರ ನಿಯಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಅಭಿಯಾನದಡಿಯಲ್ಲಿ ಕಾರಿನಲ್ಲಿ ಸೀಟ್ ಬೆಲ್ಟ್ ಬಳಸದ ಪ್ರಯಾಣಿಕರಿಗೆ ಹಾಗೂ ದ್ವಿಚಕ್ರ ವಾಹನಗಳಲ್ಲಿ ರೇರ್ ವೀವ್ ಮಿರರ್ ಬಳಸದವರಿಗೆ ಟ್ರಾಫಿಕ್ ಪೊಲೀಸರು ದಂಡ ವಿಧಿಸುತ್ತಿದ್ದಾರೆ.

ಮೋಟಾರು ವಾಹನ ಕಾಯ್ದೆ 1989ರನ್ವಯ ಕಾರಿನಲ್ಲಿ ಪ್ರಯಾಣಿಸುವವರೆಲ್ಲರೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಇದರ ಜೊತೆಗೆ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವವರು ರೇರ್ ವೀವ್ ಮಿರರ್ ಬಳಸುವುದು ಕಡ್ಡಾಯವಾಗಿದೆ. ದ್ವಿಚಕ್ರ ವಾಹನ ಚಾಲಕರು ತಮ್ಮ ವಾಹನಗಳಲ್ಲಿರುವ ರೇರ್ ವೀವ್ ಮಿರರ್'ಗಳನ್ನು ತೆಗೆದು ಹಾಕುತ್ತಿದ್ದಾರೆ.

ದ್ವಿಚಕ್ರ ವಾಹನಗಳಲ್ಲಿ ರೇರ್ ವೀವ್ ಮಿರರ್ ಇಲ್ಲದೇ ಇರುವುದರಿಂದ ಹಿಂದಿನಿಂದ ಬರುವ ವಾಹನಗಳನ್ನು ಗುರುತಿಸಲಾಗುವುದಿಲ್ಲ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತವೆ. ಕಳೆದ ವರ್ಷ ಇಂತಹ ಹಲವು ಪ್ರಕರಣಗಳು ನಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಈ ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಸವಾರರು ರೇರ್ ವೀವ್ ಇಲ್ಲದಿರುವ ಕಾರಣಕ್ಕೆ ಅಪಘಾತಕ್ಕೀಡಾಗಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ರೇರ್ ವೀವ್ ಮಿರರ್'ಗಳಿದ್ದರೆ ಹಿಂದೆ ಬರುವ ವಾಹನಗಳನ್ನು ಗುರುತಿಸಬಹುದು. ಕಾರಿನ ಹಿಂಭಾಗದಲ್ಲಿ ಕುಳಿತುಕೊಳ್ಳುವ ಜನರು ಸೀಟ್ಬೆಲ್ಟ್ಗಳನ್ನು ಧರಿಸುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಕಾರು ಚಾಲನೆ ವೇಳೆಯಲ್ಲಿ ಚಾಲಕನಷ್ಟೇ ಕಾರಿನಲ್ಲಿರುವವರು ಸಹ ಸೀಟ್ ಬೆಲ್ಟ್ ಧರಿಸುವುದು ಮುಖ್ಯ. ರಸ್ತೆ ಅಪಘಾತವಾದಾಗ ಸೀಟ್ ಬೆಲ್ಟ್ ಧರಿಸಿದರೆ ಗಂಭೀರ ಗಾಯಗಳಾಗುವುದನ್ನು ತಪ್ಪಿಸಬಹುದು. ಸೀಟ್ ಬೆಲ್ಟ್ ಬಳಸದವರು ತೊಂದರೆಗೊಳಗಾಗುವ ಸಾಧ್ಯತೆ ಹೆಚ್ಚು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಪೂರ್ವ ದೆಹಲಿ ಪೊಲೀಸರು ಜನವರಿ 13ರಿಂದ 23ರವರೆಗೆ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಅಭಿಯಾನವನ್ನು ನಡೆಸುತ್ತಿದ್ದಾರೆ. ಈ ಅಭಿಯಾನದಲ್ಲಿ ಕಾರುಗಳಲ್ಲಿ ಸೀಟ್ಬೆಲ್ಟ್ ಹಾಗೂ ದ್ವಿಚಕ್ರ ವಾಹನಗಳಲ್ಲಿ ರೇರ್ ವೀವ್ ಮಿರರ್ ಬಳಸುವುದರ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ಈ ನಿಯಮಗಳನ್ನು ಉಲ್ಲಂಘಿಸುವವರಿಗೆ ಪೊಲೀಸರು ಮೋಟಾರು ವಾಹನ ಕಾಯ್ದೆ (1989)ಅಡಿಯಲ್ಲಿ ದಂಡ ವಿಧಿಸುತ್ತಿದ್ದಾರೆ. ದೆಹಲಿಯಲ್ಲಿ ವಾಹನಗಳಲ್ಲಿ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಹೆಚ್ಎಸ್ಆರ್ಪಿ) ಬಳಕೆಯನ್ನು ಕಡ್ಡಾಯಗೊಳಿಸಲಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಹೆಚ್ಎಸ್ಆರ್ಪಿ ಹೊಂದಿಲ್ಲದ ವಾಹನಗಳನ್ನು ತಡೆದು ದಂಡ ವಿಧಿಸಲಾಗುತ್ತಿದೆ. ಹೆಚ್ಎಸ್ಆರ್ಪಿಗಳು ಸಾಮಾನ್ಯ ನಂಬರ್ ಪ್ಲೇಟ್ ನಂತೆ ಕಂಡು ಬಂದರೂ ಅದರಲ್ಲಿರುವ ತಾಂತ್ರಿಕ ಲಕ್ಷಣಗಳು ವಿಭಿನ್ನವಾಗಿವೆ.

ಹೆಚ್ಎಸ್ಆರ್ಪಿಯಲ್ಲಿ ಕ್ರೋಮಿಯಂ ಹೊಲೊಗ್ರಾಮ್ ಸ್ಟಿಕ್ಕರ್ ಬಳಸಲಾಗುತ್ತದೆ. ಈ ಸ್ಟಿಕ್ಕರ್'ನಲ್ಲಿ ವಾಹನಕ್ಕೆ ಸಂಬಂಧಿಸಿದ ರಿಜಿಸ್ಟೇಷನ್ ನಂಬರ್, ಎಂಜಿನ್ ನಂಬರ್ ಹಾಗೂ ಚಾಸಿಸ್ ನಂಬರ್'ಗಳನ್ನು ಅಳವಡಿಸಲಾಗಿರುತ್ತದೆ.