ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ದಿನಂಪ್ರತಿ ಸಾವಿರರಾರು ಜನ ಬಲಿ ಪಡೆಯುತ್ತಿರುವ ಮಹಾಮಾರಿ ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಆತಂಕದಲ್ಲಿ ದಿನದೂಡುವಂತಾಗಿದ್ದು, ವೈರಸ್ ತಡೆಯುವುದಕ್ಕಾಗಿ ಹಲವಾರು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಭಾರತದಲ್ಲೂ ಈಗಾಗಲೇ ಕರೋನಾ ವೈರಸ್ ತಡೆಗಾಗಿ ಹಲವು ಕಠಿಣ ಕ್ರಮಗಳೊಂದಿಗೆ 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಿದ್ದು, ಆರಂಭದಲ್ಲೇ ಸಾಮಾಜಿಕ ಅಂತರ ಕುರಿತ ಮಾಡಿದ ಜಾಗೃತಿ ಕ್ರಮಗಳು ವೈರಸ್ ಹರಡುವಿಕೆಯ ತೀವ್ರತೆಯನ್ನು ತಗ್ಗಿಸಲು ಸಹಕಾರಿಯಾಗಿದೆ. ಹೀಗಿದ್ದರೂ ಕೂಡಾ ಭಾರತದಲ್ಲಿ ಲಾಕ್ ಡೌನ್ ಉಲ್ಲಂಘನೆ ಪ್ರಕರಣಗಳಿಂದ ಕರೋನಾ ವೈರಸ್ 3ನೇ ಹಂತದಲ್ಲಿ ಲಕ್ಷಾಂತರ ಜನಕ್ಕೆ ವ್ಯಾಪಿಸುವ ಆತಂಕ ಎದುರಾಗಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಇದರಿಂದ ಎಲ್ಲಾ ರಾಜ್ಯಗಳ ಪೊಲೀಸ್ ಇಲಾಖೆಗಳು ಪ್ರಾಣದ ಹಂಗು ತೊರೆದು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಲ್ಲಿ ಶ್ರಮಿಸುತ್ತಿದ್ದರೆ ಸೋಂಕಿತರ ಪ್ರಾಣ ರಕ್ಷಣೆಗೆ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯು ಹಗಲಿರಳು ದುಡಿಯುತ್ತಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಹೀಗಿರುವಾಗ ಲಾಕ್ ಡೌನ್ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳೊಂದಿಗೆ ಲಾಠಿ ರುಚಿ ಸಹ ತೋರಿಸುತ್ತಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಇದರ ಜೊತೆಗೆ ಸಾರ್ವಜನಿಕರಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪೊಲೀಸ್ ಸಿಬ್ಬಂದಿಯು ಅನಾವಶ್ಯಕವಾಗಿ ಹೊರಗೆ ತಿರುಗುವವರ ವಿರುದ್ಧದ ಕೇಸ್ ದಾಖಲಿಸುತ್ತಿರುವುದಲ್ಲದೇ ವೈರಸ್ ಹರಡದಂತೆ ಏನೆಲ್ಲಾ ಮುನ್ನಚ್ಚೆರಿಕೆ ವಹಿಸಬೇಕೆಂಬುವುದನ್ನು ಅಚ್ಚುಕಟ್ಟಾಗಾಗಿ ಸಾರ್ವಜನಿಕರಿಗೆ ತಿಳಿಹೇಳುತ್ತಿದ್ದಾರೆ. ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಮಾತ್ರವಲ್ಲದೇ ನಗರ ಪ್ರದಕ್ಷಿಣೆ ಮೂಲಕವೂ ಜಾಗೃತಿ ಮೂಡಿಸುತ್ತಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಈ ನಡುವೆ ರಾಜಧಾನಿ ದೆಹಲಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ಪೊಲೀಸ್ ಇಲಾಖೆಯು ಲಾಕ್ ಡೌನ್ ಯಶಸ್ವಿಗೊಳಿಸಲು ಪ್ರತ್ಯೇಕ ಪ್ಯಾಟ್ರೋಲ್ ವಾಹನಗಳೊಂದಿಗೆ ಗಸ್ತು ನಿರ್ವಹಣೆ ಮಾಡುತ್ತಿದ್ದು, ವೈರಸ್ ಕುರಿತು ಜಾಗೃತಿಯೊಂದಿಗೆ ಲಾಕ್ ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಶುರುಮಾಡಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ವಲಯವಾರು ಕಾರ್ಯಾಚರಣೆ ನಡೆಸಿರುವ ದೆಹಲಿ ಪೊಲೀಸರು ಲಾಕ್ ಡೌನ್ ಉಲ್ಲಂಘಿಸಿ ತಿರುಗುವವರ ವಿರುದ್ಧ ಕಠಿಣ ಕ್ರಮ ಜರಗಿಸುತ್ತಿದ್ದು, ಈಗಾಗಲೇ ಸಾವಿರಾರು ವಾಹನಗಳನ್ನು ಜಪ್ತಿಗೊಳಿಸಲಾಗಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ದೆಹಲಿಯಲ್ಲಿ ಮಾತ್ರವಲ್ಲದೇ ಕರ್ನಾಟಕದಲ್ಲೂ ಸಹ ಸುಮಾರು 9 ಸಾವಿರ ವಾಹನಗಳನ್ನು ಲಾಕ್ ಡೌನ್ ನಿಯಮ ಉಲ್ಲಂಘನೆ ಆರೋಪದಡಿ ಜಪ್ತಿ ಮಾಡಲಾಗಿದ್ದು, ಲಾಕ್ ಡೌನ್ ಮುಗಿದ ನಂತರವೇ ವಾಹನಗಳನ್ನು ಹಿಂದಿರುಗಿಸುವುದಾಗಿ ಹೇಳಲಾಗಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಆದರೆ ವೈರಸ್ ಹೆಚ್ಚಾಗಿರುವ ಹಿನ್ನಲೆಯಲ್ಲಿ ಜಾರಿಗೆ ತರಲಾಗಿರುವ ಲಾಕ್ ಡೌನ್ ಉಲ್ಲಂಘಿಸಿ ಹೊರಗೆ ತಿರುಗು ಮೂಲಕ ಅಪಾಯವನ್ನು ತಮಗೆ ತಾವೇ ಅಪಾಯ ತಂದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕಿರುವ ಸಾರ್ವಜನಿಕರು ಅಗತ್ಯ ಸಂದರ್ಭಗಳನ್ನು ಸಂದರ್ಭಗಳನ್ನು ಹೊರತುಪಡಿಸಿ ಮನೆಯಲ್ಲೇ ಸುರಕ್ಷಿತವಾಗಿರಬೇಕಿದೆ.

ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ದ ವಿಶೇಷ ಕಾರ್ಯಾಚರಣೆಗಿಳಿದ ದೆಹಲಿ ಪೊಲೀಸರು..

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 1 ಮಿನಿಯನ್ (10 ಲಕ್ಷ) ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 54 ಸಾವಿರ ಜನ ಪ್ರಾಣಕಳೆದುಕೊಂಡಿದ್ದಾರೆ. 10 ಲಕ್ಷ ಜನರಲ್ಲಿ ಇದುವರೆಗೆ ಸುಮಾರು 2.20 ಲಕ್ಷ ಜನ ಗುಣಮುಖರಾಗಿದ್ದು, ಶೇ.5 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

Most Read Articles

Kannada
Read more on ಪೊಲೀಸ್ police
English summary
Delhi Police Special Launches Patrol For Spread Awareness To Public About Covid-19. Read in Knnada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more