ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಕರೋನಾ ವೈರಸ್, ಇಡೀ ಜಗತ್ತನ್ನು ಅಪಾಯಕ್ಕೆ ದೂಡಿದೆ. ಚೀನಾದ ವುಹಾನ್‌ ನಗರದಿಂದ ಹರಡಿದ ಕೋವಿಡ್ -19 ವೈರಸ್, ವಿಶ್ವದ ಬಲಿಷ್ಠ ರಾಷ್ಟ್ರಗಳನ್ನೇ ಅಲುಗಾಡುವಂತೆ ಮಾಡಿದೆ. ಅಮೆರಿಕಾ, ಇಟಲಿ, ಸ್ಪೇನ್, ಫ್ರಾನ್ಸ್ ಹಾಗೂ ಇಂಗ್ಲೆಂಡ್‌ನಂತಹ ದೇಶಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಕೋವಿಡ್ -19 ವೈರಸ್ ಹರಡುವುದನ್ನು ತಡೆಯಲು ವಿಶ್ವದ ವಿವಿಧ ದೇಶಗಳು ಲಾಕ್‌ಡೌನ್ ಜಾರಿಗೊಳಿಸಿವೆ. ಇದರಿಂದಾಗಿ ಜನ ಸಾಮಾನ್ಯರ ಜೀವನವು ಸಂಕಷ್ಟಕ್ಕೆ ಸಿಲುಕಿದೆ. ಭಾರತದಲ್ಲಿ 2ನೇ ಹಂತದ ಲಾಕ್‌ಡೌನ್ ಅನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ದೀರ್ಘಕಾಲದ ಲಾಕ್‌ಡೌನ್‌ನಿಂದಾಗಿ ಕಾರ್ಮಿಕರಿಗೆ ಯಾವುದೇ ಕೆಲಸವಿಲ್ಲದಂತಾಗಿದೆ.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅವರ ನೆರವಿಗೆ ಧಾವಿಸಿವೆ. ಲಾಕ್‌‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವವರಲ್ಲಿ ಆಟೋ ಚಾಲಕರು ಸಹ ಸೇರಿದ್ದಾರೆ. ರೈಲು, ಬಸ್‌ಗಳ ಜೊತೆಗೆ ಆಟೋಗಳ ಸೇವೆಯನ್ನು ರದ್ದುಪಡಿಸಲಾಗಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಇದರಿಂದಾಗಿ ಆಟೋ ಚಾಲಕರು ಆದಾಯವಿಲ್ಲದೆ ತೊಂದರೆಗೀಡಾಗಿದ್ದಾರೆ. ಪ್ರತಿದಿನದ ಆದಾಯವನ್ನು ನಂಬಿಕೊಂಡಿರುವ ಆಟೋ ಚಾಲಕರ ಜೀವನವು ಅತಂತ್ರಕ್ಕೆ ಸಿಲುಕಿದೆ. ತಮ್ಮ ನೆರವಿಗೆ ಧಾವಿಸುವಂತೆ ಆಟೋ ಚಾಲಕರು ಸರ್ಕಾರಕ್ಕೆ ಬೇಡಿಕೆಯಿಟ್ಟಿದ್ದರು.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಆಟೋ ಚಾಲಕರ ಬೇಡಿಕೆಗೆ ಸ್ಪಂದಿಸಿದ್ದ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರು ಪ್ರತಿಯೊಬ್ಬ ಆಟೋ ಚಾಲಕರಿಗೆ ಪ್ರತಿ ತಿಂಗಳು ರೂ.5,000 ನೀಡುವುದಾಗಿ ತಿಳಿಸಿದ್ದರು. ಇದರಂತೆ ದೆಹಲಿ ರಾಜ್ಯ ಸರ್ಕಾರವು ಆಟೋ ಚಾಲಕರ ಬ್ಯಾಂಕ್ ಖಾತೆಗಳಿಗೆ ತಲಾ 5000 ರೂಪಾಯಿಗಳನ್ನು ಪಾವತಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಸುಮಾರು 23 ಸಾವಿರ ಆಟೋ ಚಾಲಕರ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆ ಯೋಜನೆಯ ಮೂಲಕ ತಲಾ 5000 ರೂಪಾಯಿ ಜಮಾ ಮಾಡಲಾಗಿದೆ. ದೆಹಲಿಯ ಸಾರಿಗೆ ಸಚಿವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಈ ಬಗ್ಗೆ ಮಾತನಾಡಿರುವ ಕೈಲಾಶ್ ಗೆಲಾಡ್‌ರವರು ಒಟ್ಟು 1.60 ಲಕ್ಷ ಅರ್ಜಿಗಳನ್ನು ಸರ್ಕಾರವು ಸ್ವೀಕರಿಸಿತ್ತು. ಈ ಪೈಕಿ 23 ಸಾವಿರ ಆಟೋ ಚಾಲಕರಿಗೆ ನೇರ ವರ್ಗಾವಣೆ ಯೋಜನೆಯ ಮೂಲಕ 5000 ರೂಪಾಯಿ ಜಮಾ ಮಾಡಲಾಗಿದೆ. ಅವರ ಆಧಾರ್ ಹಾಗೂ ಬ್ಯಾಂಕ್ ಖಾತೆ ಸಂಖ್ಯೆಯನ್ನು ಪರಿಶೀಲಿಸಿದ ನಂತರ ಹಣ ಪಾವತಿಸಲಾಗಿದೆ ಎಂದು ಹೇಳಿದರು.

MOSTREAD: ನಟ ವಿಕ್ರಮ್‌ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ದೆಹಲಿ ಸರ್ಕಾರದ ಈ ಕ್ರಮವು ಆಟೋ ಚಾಲಕರಿಗೆ ಸಂತಸವನ್ನುಂಟು ಮಾಡಿದೆ. ಈ ಬಗ್ಗೆ ಮಾತನಾಡಿದ ಆಟೋ ಚಾಲಕ ರಾಹುಲ್ ಕುಮಾರ್‌ರವರು ತಾವು ಅರ್ಜಿ ಸಲ್ಲಿಸಿದ ಮೂರು ದಿನಗಳಲ್ಲಿ ತಮ್ಮ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗಿದೆ ಎಂದು ಹೇಳಿದರು.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಲಾಕ್‌ಡೌನ್‌ ವೇಳೆಯಲ್ಲಿ ಸರ್ಕಾರವು 5 ಸಾವಿರ ರೂಪಾಯಿಗಳನ್ನು ನೀಡುತ್ತಿರುವುದು ನಿಜಕ್ಕೂ ದೊಡ್ಡ ವಿಷಯ. ತಂತ್ರಜ್ಞಾನದ ಕೊರತೆಯಿಂದಾಗಿ ಕೆಲವು ಆಟೋ ಚಾಲಕರು ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮತ್ತೊಬ್ಬ ಆಟೋ ಚಾಲಕ ಶಿವಕುಮಾರ್ ಹೇಳಿದರು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಇದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ರವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಕೆಲವು ಆಟೋ ಚಾಲಕರಿಗೆ ಪ್ರಯೋಜನಗಳನ್ನು ಹೇಗೆ ಪಡೆಯುವುದು ಎಂದು ತಿಳಿದಿಲ್ಲ. ಅಂಥವರಿಗಾಗಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆಂದು ಅವರು ಹೇಳಿದರು.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಲಾಕ್‌ಡೌನ್ ಸಮಯದಲ್ಲಿ ಸರ್ಕಾರದಿಂದ 5000 ರೂಪಾಯಿಗಳನ್ನು ಪಡೆಯುವುದರಿಂದ ಆಟೋ ಚಾಲಕರು ಹಾಗೂ ಅವರ ಕುಟುಂಬದವರಿಗೆ ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ. ಭಾರತದಲ್ಲಿ ಲಾಕ್‌ಡೌನ್ ಕಾರಣಕ್ಕೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5,000..!

ಆಟೋ, ಬಸ್ ಸೇವೆ ಮಾತ್ರವಲ್ಲದೆ ರೈಲು ಹಾಗೂ ವಾಯು ಸೇವೆಗಳನ್ನು ಸಹ ರದ್ದುಪಡಿಸಲಾಗಿದೆ. ಇದರ ಜೊತೆಗೆ ಕಾರುಗಳು ಹಾಗೂ ಬೈಕುಗಳು ರಸ್ತೆಗಿಳಿಯುತ್ತಿಲ್ಲ. ಇದರಿಂದಾಗಿ ಪೆಟ್ರೋಲ್, ಡೀಸೆಲ್ ಮಾರಾಟವು ತೀವ್ರವಾಗಿ ಕುಸಿದಿದೆ.

ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್‌ಗಾಗಿ ಬಳಸಲಾಗಿದೆ.

Most Read Articles

Kannada
English summary
Rs.5000 transferred into 23000 auto rickshaw drivers bank accounts. Read in Kannada.
Story first published: Tuesday, April 21, 2020, 15:22 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X