Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ
ಕರೋನಾ ವೈರಸ್ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಸೇವೆಗಳನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಹೀಗಾಗಿ ಊಟದಿಂದ ಔಷಧಿಗಳವರೆಗೆ ಎಲ್ಲವೂ ಆನ್‌ಲೈನ್ ಬುಕ್ಕಿಂಗ್'ಗಳಿಗೆ ಬದಲಾಗಿವೆ.

ಈ ಮೊದಲೇ ಆನ್‌ಲೈನ್ ಸೇವೆಗಳು ಲಭ್ಯವಿದ್ದರೂ ಕಳೆದ ವರ್ಷದಿಂದ ಈಚೆಗೆ ಇವುಗಳ ಬಳಕೆಯು ಹೆಚ್ಚಾಗಿದೆ. ಆನ್‌ಲೈನ್ ಸೇವೆಗಳು ನೇರ ಸಂಪರ್ಕವನ್ನು ಕಡಿಮೆ ಮಾಡಿ ಡಿಜಿಟಲ್ ಚಟುವಟಿಕೆಗಳನ್ನು ಉತ್ತೇಜಿಸುತ್ತವೆ. ಈ ಕಾರಣಕ್ಕೆ ಹೆಚ್ಚಿನ ಜನರು ಆನ್‌ಲೈನ್ ಸೇವೆಗಳನ್ನು ಬಳಸುತ್ತಿದ್ದಾರೆ.

ಕರೋನಾ ವೈರಸ್‌ನಿಂದ ಜನರನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಆನ್‌ಲೈನ್ ಸೇವೆಗಳಿಗೆ ಉತ್ತೇಜನ ನೀಡುತ್ತಿವೆ. ಈಗ ರಾಷ್ಟ್ರ ರಾಜಧಾನಿ ದೆಹಲಿ ಸಾರಿಗೆ ಇಲಾಖೆಯು ಎಲ್ಲಾ ಸೇವೆಗಳನ್ನು ಆನ್‌ಲೈನ್ ಮೂಲಕ ನೀಡಲಿದೆ ಎಂದು ವರದಿಯಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ನೇರ ಸಂಪರ್ಕವನ್ನು ಶೀಘ್ರದಲ್ಲೇ ತೆಗೆದುಹಾಕಿ ಎಲ್ಲಾ ಸೇವೆಯನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ದೆಹಲಿಯ ಸಾರಿಗೆ ಇಲಾಖೆಯು ತಿಳಿಸಿದೆ. ಮುಂದಿನ ಮಾರ್ಚ್‌ನಿಂದ ಆನ್‌ಲೈನ್ ಸೇವೆಯನ್ನು ಆರಂಭಿಸಲಾಗುವುದು.

ದೆಹಲಿ ಸಾರಿಗೆ ಇಲಾಖೆಯ 70 ಸೇವೆಗಳ ಪೈಕಿ 68 ಸೇವೆಗಳನ್ನು ಇಂಟರ್'ನೆಟ್ ಮೂಲಕವೇ ಪಡೆಯಬಹುದು. ಕೆಲವು ಮುಖ್ಯವಾದ ಸೇವೆಗಳನ್ನು ನೇರವಾಗಿ ಪಡೆಯುವುದನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಸೇವೆಗಳನ್ನು ಆನ್‌ಲೈನ್ ಮೂಲಕ ಪಡೆಯಬಹುದು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ವಿಳಾಸ ಬದಲಾವಣೆ, ದಾಖಲೆಯ ಪ್ರತಿಗಾಗಿ ಅರ್ಜಿ, ಅಂತರರಾಷ್ಟ್ರೀಯ ಚಾಲಕರ ಪರವಾನಗಿ ಪಡೆಯುವುದು, ಮಾಲೀಕತ್ವದ ವರ್ಗಾವಣೆ ಸೇರಿದಂತೆ ವಿವಿಧ ಸೇವೆಗಳನ್ನು ಆನ್‌ಲೈನ್‌ನಲ್ಲಿಯೇ ಪಡೆಯಬಹುದು. ಇದಕ್ಕಾಗಿ ಇನ್ನು ಮುಂದೆ ಆರ್‌ಟಿಒ ಕಚೇರಿಗೆ ಬರುವುದು ಬೇಡ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಈ ಹೊಸ ಪ್ರಕ್ರಿಯೆಯು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲಿದೆ ಎಂಬುದು ಸರ್ಕಾರದ ಅಭಿಪ್ರಾಯ. ಈ ಸೇವೆಗಳ ಇನ್ನಿತರ ಸೇವೆಗಳನ್ನು ಸಹ ನಿಧಾನವಾಗಿಆನ್‌ಲೈನ್ ಸೇವೆಗೆ ಸೇರಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲ್ಲಾ ಸೇವೆಗಳನ್ನು ಆನ್‌ಲೈನ್‌ಗೆ ಬದಲಿಸಿದ ನಂತರ ಸಾರ್ವಜನಿಕರು ಫಿಟ್‌ನೆಸ್ ಪ್ರಮಾಣ ಪತ್ರ, ಚಾಲಕರ ಪರವಾನಗಿ ಪರೀಕ್ಷೆಯಂತಹ ಪ್ರಮುಖ ಕಾರ್ಯಗಳಿಗಾಗಿ ಮಾತ್ರ ಕಚೇರಿಗೆ ಬರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ ದೆಹಲಿ ಸರ್ಕಾರವು ವಿದ್ಯಾರ್ಥಿಗಳಿಗೆ ಚಾಲನಾ ಪರವಾನಗಿ ನೀಡಲು ಆಯಾ ಕಾಲೇಜು ಹಾಗೂ ಶಾಲಾ ಮುಖ್ಯಸ್ಥರಿಗೆ ಅಧಿಕಾರ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಆರ್‌ಟಿಒ ಅಥವಾ ಮಧ್ಯವರ್ತಿಗಳನ್ನು ಆಶ್ರಯಿಸುವುದು ತಪ್ಪಲಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಆನ್‌ಲೈನ್ ಸೇವೆಯಿಂದಾಗಿ ಜನರ ಸಮಯ ಉಳಿತಾಯವಾಗುತ್ತದೆ. ಜೊತೆಗೆ ಸಾರಿಗೆ ವೆಚ್ಚವನ್ನು ಸಹ ಉಳಿಸಬಹುದು. ಮುಖ್ಯವಾಗಿ ಭ್ರಷ್ಟಾಚಾರವನ್ನು ತಡೆಗಟ್ಟಬಹುದು. ಈ ಬಗ್ಗೆ ಇಟಿ ಆಟೋ ವರದಿ ಪ್ರಕಟಿಸಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.