ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಕರೋನಾ ವೈರಸ್ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ಸೇವೆಗಳನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಹೀಗಾಗಿ ಊಟದಿಂದ ಔಷಧಿಗಳವರೆಗೆ ಎಲ್ಲವೂ ಆನ್‌ಲೈನ್ ಬುಕ್ಕಿಂಗ್'ಗಳಿಗೆ ಬದಲಾಗಿವೆ.

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಈ ಮೊದಲೇ ಆನ್‌ಲೈನ್ ಸೇವೆಗಳು ಲಭ್ಯವಿದ್ದರೂ ಕಳೆದ ವರ್ಷದಿಂದ ಈಚೆಗೆ ಇವುಗಳ ಬಳಕೆಯು ಹೆಚ್ಚಾಗಿದೆ. ಆನ್‌ಲೈನ್ ಸೇವೆಗಳು ನೇರ ಸಂಪರ್ಕವನ್ನು ಕಡಿಮೆ ಮಾಡಿ ಡಿಜಿಟಲ್ ಚಟುವಟಿಕೆಗಳನ್ನು ಉತ್ತೇಜಿಸುತ್ತವೆ. ಈ ಕಾರಣಕ್ಕೆ ಹೆಚ್ಚಿನ ಜನರು ಆನ್‌ಲೈನ್ ಸೇವೆಗಳನ್ನು ಬಳಸುತ್ತಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಕರೋನಾ ವೈರಸ್‌ನಿಂದ ಜನರನ್ನು ರಕ್ಷಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹ ಆನ್‌ಲೈನ್ ಸೇವೆಗಳಿಗೆ ಉತ್ತೇಜನ ನೀಡುತ್ತಿವೆ. ಈಗ ರಾಷ್ಟ್ರ ರಾಜಧಾನಿ ದೆಹಲಿ ಸಾರಿಗೆ ಇಲಾಖೆಯು ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕ ನೀಡಲಿದೆ ಎಂದು ವರದಿಯಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ನೇರ ಸಂಪರ್ಕವನ್ನು ಶೀಘ್ರದಲ್ಲೇ ತೆಗೆದುಹಾಕಿ ಎಲ್ಲಾ ಸೇವೆಯನ್ನು ಡಿಜಿಟಲೀಕರಣಗೊಳಿಸಲಾಗುವುದು ಎಂದು ದೆಹಲಿಯ ಸಾರಿಗೆ ಇಲಾಖೆಯು ತಿಳಿಸಿದೆ. ಮುಂದಿನ ಮಾರ್ಚ್‌ನಿಂದ ಆನ್‌ಲೈನ್ ಸೇವೆಯನ್ನು ಆರಂಭಿಸಲಾಗುವುದು.

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ದೆಹಲಿ ಸಾರಿಗೆ ಇಲಾಖೆಯ 70 ಸೇವೆಗಳ ಪೈಕಿ 68 ಸೇವೆಗಳನ್ನು ಇಂಟರ್'ನೆಟ್ ಮೂಲಕವೇ ಪಡೆಯಬಹುದು. ಕೆಲವು ಮುಖ್ಯವಾದ ಸೇವೆಗಳನ್ನು ನೇರವಾಗಿ ಪಡೆಯುವುದನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕ ಪಡೆಯಬಹುದು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ವಿಳಾಸ ಬದಲಾವಣೆ, ದಾಖಲೆಯ ಪ್ರತಿಗಾಗಿ ಅರ್ಜಿ, ಅಂತರರಾಷ್ಟ್ರೀಯ ಚಾಲಕರ ಪರವಾನಗಿ ಪಡೆಯುವುದು, ಮಾಲೀಕತ್ವದ ವರ್ಗಾವಣೆ ಸೇರಿದಂತೆ ವಿವಿಧ ಸೇವೆಗಳನ್ನು ಆನ್‌ಲೈನ್‌ನಲ್ಲಿಯೇ ಪಡೆಯಬಹುದು. ಇದಕ್ಕಾಗಿ ಇನ್ನು ಮುಂದೆ ಆರ್‌ಟಿಒ ಕಚೇರಿಗೆ ಬರುವುದು ಬೇಡ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಈ ಹೊಸ ಪ್ರಕ್ರಿಯೆಯು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲಿದೆ ಎಂಬುದು ಸರ್ಕಾರದ ಅಭಿಪ್ರಾಯ. ಈ ಸೇವೆಗಳ ಇನ್ನಿತರ ಸೇವೆಗಳನ್ನು ಸಹ ನಿಧಾನವಾಗಿಆನ್‌ಲೈನ್ ಸೇವೆಗೆ ಸೇರಿಸಲಾಗುವುದು ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಎಲ್ಲಾ ಸೇವೆಗಳನ್ನು ಆನ್‌ಲೈನ್‌ಗೆ ಬದಲಿಸಿದ ನಂತರ ಸಾರ್ವಜನಿಕರು ಫಿಟ್‌ನೆಸ್ ಪ್ರಮಾಣ ಪತ್ರ, ಚಾಲಕರ ಪರವಾನಗಿ ಪರೀಕ್ಷೆಯಂತಹ ಪ್ರಮುಖ ಕಾರ್ಯಗಳಿಗಾಗಿ ಮಾತ್ರ ಕಚೇರಿಗೆ ಬರಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಇದರ ಜೊತೆಗೆ ದೆಹಲಿ ಸರ್ಕಾರವು ವಿದ್ಯಾರ್ಥಿಗಳಿಗೆ ಚಾಲನಾ ಪರವಾನಗಿ ನೀಡಲು ಆಯಾ ಕಾಲೇಜು ಹಾಗೂ ಶಾಲಾ ಮುಖ್ಯಸ್ಥರಿಗೆ ಅಧಿಕಾರ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಪಡೆಯಲು ಆರ್‌ಟಿಒ ಅಥವಾ ಮಧ್ಯವರ್ತಿಗಳನ್ನು ಆಶ್ರಯಿಸುವುದು ತಪ್ಪಲಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಭ್ರಷ್ಟಾಚಾರ ನಿಯಂತ್ರಣಕ್ಕೆ ಹೊಸ ಕ್ರಮ ಕೈಗೊಂಡ ಸಾರಿಗೆ ಇಲಾಖೆ

ಆನ್‌ಲೈನ್ ಸೇವೆಯಿಂದಾಗಿ ಜನರ ಸಮಯ ಉಳಿತಾಯವಾಗುತ್ತದೆ. ಜೊತೆಗೆ ಸಾರಿಗೆ ವೆಚ್ಚವನ್ನು ಸಹ ಉಳಿಸಬಹುದು. ಮುಖ್ಯವಾಗಿ ಭ್ರಷ್ಟಾಚಾರವನ್ನು ತಡೆಗಟ್ಟಬಹುದು. ಈ ಬಗ್ಗೆ ಇಟಿ ಆಟೋ ವರದಿ ಪ್ರಕಟಿಸಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Delhi Transport Department to give services through online. Read in Kannada.
Story first published: Monday, February 22, 2021, 10:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X