Just In
- 7 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 10 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 10 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 12 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಷಾರಾಮಿ ಆಡಿ ಎ8 ಎಲ್ ಕಾರು ಖರೀದಿಸಿದ ನಿರ್ದೇಶಕ ಕರಣ್ ಜೋಹರ್
ಬಾಲಿವುಡ್ನ ಜನಪ್ರಿಯ ನಿರ್ಮಾಪಕ ಹಾಗೂ ನಿರ್ದೇಶಕರಾಗಿರುವ ಕರಣ್ ಜೋಹಾರ್ ಅವರದ್ದು ಭಿನ್ನ ವ್ಯಕ್ತಿತ್ವ, ಇವರು ಹಲವು ಬಾಲಿವುಡ್ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಅಲ್ಲದೇ ಜನಪ್ರಿಯ ನಿರ್ದೇಶಕ ಕೂಡ ಆಗಿದ್ದಾರೆ.
ಅಷ್ಟೇ ಅಲ್ಲದೇ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ, ಅನೇಕ ಟಾಕ್ಶೋ ಕಾರ್ಯಕ್ರಮಗಳಲ್ಲಿ ನಿರೂಪಕನಾಗಿಯು ಕೂಡ ಮನೆಮಾತಾದರು. ಕಾಫಿ ವಿತ್ ಕರಣ್ ಶೋ ಮೂಲಕ ಅವರು ಹೆಚ್ಚು ಸುದ್ದಿಯಾಗಿದ್ದರು. ಈ ಪ್ರತಿಭಾವಂತ ಮತ್ತು ಜನಪ್ರಿಯ ನಿರ್ದೇಶಕ ಕರಣ್ ಜೋಹರ್ ಅನೇಕ ವಿವಾದಗಳನ್ನೂ ಮೈಮೇಲೆ ಎಳೆದುಕೊಂಡ್ಡು ಸುದ್ದಿಯಾಗಿದ್ದರು. ಆದರೆ ಇದೀಗ ಕರಣ್ ಜೋಹರ್ ಐಷಾರಾಮಿ ಆಡಿ ಆಡಿ ಎ8 ಎಲ್ ಸಲೂನ್ ಕಾರನ್ನು ಖರೀದಿಸಿ ಸುದ್ದಿಯಾಗಿದ್ದಾರೆ.
ಎ8 ಎಲ್ ಆಡಿ ಕಂಪನಿಯ ಪ್ರಮುಖ ಐಷಾರಾಮಿ ಸಲೂನ್ ಆಗಿದೆ. ಇನ್ನು ಕರಣ್ ಜೋಹಾರ್ ಅವರ ಬಳಿ ಜಾಗ್ವಾರ್ ಎಕ್ಸ್ಜೆ ಎಲ್, ಮರ್ಸಿಡಿಸ್-ಮೇಬ್ಯಾಕ್ ಎಸ್-ಕ್ಲಾಸ್ ಮತ್ತು ಇತರ ಐಷಾರಾಮಿ ಕಾರುಗಳನ್ನು ಕೂಡ ಹೊಂದಿದ್ದಾರೆ.
ಇನ್ನು ಟೆಲಿವಿಷನ್ನ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಮೊದಲ ಬಾರಿಗೆ ಒಟಿಟಿಯಲ್ಲಿ ಪ್ರಥಮ ಪ್ರದರ್ಶನಗೊಳ್ಳಲಿದೆ. ಆದರೆ ಚಾನೆಲ್ನಲ್ಲಿ ಅಲ್ಲ. ಮೊದಲ ಆರು ವಾರಗಳವರೆಗೆ ಈ ಕಾರ್ಯಕ್ರಮವನ್ನು ನಿರ್ದೇಶಕ ಕರಣ್ ಜೋಹರ್ ನಡೆಸಿಕೊಲಿದ್ದಾರೆ.
ನಿರ್ದೇಶಕ ಕರಣ್ ಜೋಹರ್ ಅವರು ಖರೀದಿಸಿದ ಆಡಿ ಆಡಿ ಎ8 ಎಲ್ ಕಾರಿನ ಬಗ್ಗೆ ಹೇಳುವುದಾದರೆ, ಜರ್ಮನಿಯ ಐಷಾರಾಮಿ ಕಾರು ತಯಾರಕರಾದ ಆಡಿ ಕಂಪನಿಯು ತನ್ನ ಎ8 ಎಲ್ ಕಾರನ್ನು ಭಾರತದಲ್ಲಿ ಕಳೆದ ವರ್ಷ ಪರಿಚಯಿಸಿದ್ದರು.
ಈ ಆಡಿ ಎ8 ಎಲ್ ಕಾರು 37 ಎಂಎಂ ಉದ್ದ ಮತ್ತು 17 ಎಂಎಂ ಎತ್ತರವನ್ನು ಹೊಂದಿದೆ. ಈ ಐಷಾರಾಮಿ ಸಲೂನ್ ಮಾದರಿಯು ಆಕರ್ಷಕ ಲುಕ್ ಅನ್ನು ಹೊಂದಿದೆ. ಹೊಸ ಕಾರಿನ ಮುಂಭಾಗ ಗ್ರಿಲ್ ಅನ್ನು ಹೊಂದಿದೆ, ಸ್ಲಿಕ್ ಹೆಚ್ಡಿ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್ಲ್ಯಾಂಪ್ಗಳನ್ನು ಹೊಂದಿದ್ದು, ಇದನ್ನು ಕ್ರೋಮ್ಗಳಿಂದ ಅಲಂಕರಿಸಲಾಗಿದೆ.
ಅಂದವಾಗಿ ವಿನ್ಯಾಸಗೊಳಿಸಲಾದ ಸ್ಲಿಮ್ ಎಲ್ಇಡಿ ಟೇಲ್ ಲ್ಯಾಂಪ್ಗಳನ್ನು ಹಿಂಭಾಗದಲ್ಲಿ ನೀಡಲಾಗಿದೆ. ಕಾರಿನ ಇಂಟಿರಿಯರ್ನಲ್ಲಿ ವರ್ಚುವಲ್ ಕಾಕ್ಪಿಟ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಮಧ್ಯದ ಕನ್ಸೋಲ್ನಲ್ಲಿ 10.1 ಇಂಚಿನ ಇನ್ಫೋಟೇನ್ಮೆಂಟ್ ಟಚ್ಸ್ಕ್ರೀನ್ ಮತ್ತು ಕ್ಲೈಮೆಂಟ್ ಕಂಟ್ರೂಲ್ ಮತ್ತು ಮಲ್ಟಿಮೀಡಿಯಾ ಸ್ಕ್ರೀನ್ ಅನ್ನು ಕೂಡ ಹೊಂದಿದೆ.
ಈ ಆಡಿ ಎ8 ಎಲ್ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ಕಾರಿನಲ್ಲಿ ಸುರಕ್ಷತೆಗಾಗಿ 8 ಏರ್ಬ್ಯಾಗ್ಗಳು, ಇಬಿಡಿಯೊಂದಿಗೆ ಎಬಿಎಸ್, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸಾರ್ಗಳು ಮತ್ತು 360 ಡಿಗ್ರಿ ಕ್ಯಾಮೆರಾ ಜೊತೆಯಲ್ಲಿ 3ಡಿ ವ್ಯೂ ಅನ್ನು ಒಳಗೊಂಡಿದೆ.
ಈ ಐಷಾರಾಮಿ ಕಾರಿನ ರೇರ್ ಸೀಟಿನಲ್ಲಿ ಮನರಂಜನೆಗಾಗಿ ಡ್ಯುಯಲ್ ಟಚ್ಸ್ಕ್ರೀನ್ ಅನ್ನು ಅಳವಡಿಸಲಾಗಿದೆ. ಫ್ರಂಟ್ ಸೀಟಿನಲ್ಲಿ ಫುಟ್ ಮಸಾಜರ್ಗಳನ್ನು ಹೊಂದಿದೆ. ಆಡಿ ಎ8 ಎಲ್ ಕಾರು ಲಾಂಗ್ ವ್ಹೀಲ್ ಬೇಸ್ ಅನ್ನು ಹೊಂದಿದೆ.
ಈ ಆಡಿ ಎ8 ಎಲ್ ಕಾರು 3.0 ಲೀಟರ್ ವಿ6 ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 336 ಬಿಹೆಚ್ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ನೊಂದಿಗೆ 8 ಸ್ಫೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
ಈ ಐಷಾರಾಮಿ ಆಡಿ ಎ8 ಎಲ್ ಕಾರು ಕೇವಲ 5.7 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಆಡಿ ಎಲ್8 ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಎಂಡಬ್ಲ್ಯು 7 ಸೀರೀಸ್ ಫೇಸ್ಲಿಫ್ಟ್, ಮರ್ಸಿಡಿಸ್ ಬೆಂಝ್ ಎಸ್-ಕ್ಲಾಸ್, ಲೆಕ್ಸಕ್ಸ್ ಎಲ್ಎಸ್ 500ಹೆಚ್ ಮತ್ತು ಎಕ್ಸ್ಜೆ ಕಾರುಗಳಿಗೆ ಪೈಪೋಟಿ ನೀಡುತ್ತದೆ.