ಪ್ರತಿಭೆ ಯಾರ ಸ್ವತ್ತು ಅಲ್ಲ... ಉಡುಗೊರೆಯಾಗಿ ನಿರ್ದೇಶಕನನ್ನು ಹುಡಿಕಿಬಂತು ದುಬಾರಿ ಕಾರು
ಸೆಲೆಬ್ರಿಟಿಗಳು ಇತ್ತೀಚೆಗೆ ತಮ್ಮ ಚಿತ್ರಗಳು ಯಶಸ್ವಿಯಾದ್ರೆ ಸಾಕು ನಿರ್ದೇಶಕರಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡುವುದು ಸಾಮಾನ್ಯವಾಗಿಬಿಟ್ಟಿದೆ. ಇತ್ತೀಚೆಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರ ಮಗ ಹಾಗೂ ನಟ ಉದಯನಿಧಿ ಸ್ಟಾಲಿನ್ ಅವರು ದುಬಾರಿ ಮಿನಿ ಕೂಪರ್ ಕಾರನ್ನು ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ.
ನಟ ಉದಯನಿಧಿ ಸ್ಟಾಲಿನ್ ಅವರು ನಟಿಸಿದ್ದ ಮಾಮಣ್ಣನನ್ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ಮಿನಿ ಕೂಪರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಮಾಮಣ್ಣನನ್ ಚಿತ್ರ ಕಳೆದ ಜೂನ್ 29 ರಂದು ಬಿಡುಗಡೆಯಾಗಿತ್ತು. ಚಿತ್ರವು ಥಿಯೇಟರ್‌ಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಉತ್ತಮ ವಿಮರ್ಶೆಗಳನ್ನು ಕೂಡ ಪಡೆದುಕೊಂಡಿದೆ.

ಇದು ನಟ ಉದಯನಿಧಿ ಸ್ಟಾಲಿನ್ ಅವರ ಕೊನೆಯ ಚಿತ್ರ ಎಂದು ಅವರು ಘೋಷಿಸಿದ್ದಾರೆ. ಈ ಸಿನಿಮಾದ ನಂತರ ಬೇರೆ ಸಿನಿಮಾಗಳಲ್ಲಿ ನಟಿಸುವುದಿಲ್ಲ, ಪೂರ್ಣಾವಧಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಅಂದಹಾಗೆ ಉದಯನಿಧಿ ಸ್ಟಾಲಿನ್ ಅವರು ಸದ್ಯ ರಾಜಕೀಯದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ತಮಿಳುನಾಡು ಕ್ಯಾಬಿನೆಟ್ ಮಂತ್ರಿಯಾಗಿದ್ದಾರೆ.
ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ನೀಡಿದ ಈ ಮಿನಿ ಕೂಪರ್ ಅತ್ಯಂತ ದುಬಾರಿ ಕಾರುಗಳಲ್ಲಿ ಒಂದಾಗಿದೆ. ಮಿನಿ ಕೂಪರ್‌ಗೆ ಸಂಬಂಧಿಸಿದಂತೆ, ಈ ಕಾರು 3850 ಎಂಎಂ ಉದ್ದ, 1727 ಎಂಎಂ ಅಗಲ, 1414 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2495 ಎಂಎಂ ವೀಲ್‌ಬೇಸ್ ಹೊಂದಿದೆ. ಈ ಕಾರಿನಲ್ಲಿ ಒಟ್ಟು 211 ಲೀಟರ್ ಬೂಟ್ ಸ್ಪೇಸ್ ನೀಡಲಾಗಿದೆ.

ಈ ಕಾರಿನ ಪ್ರಮುಖ ಮಾಹಿತಿ ಎಂದರೆ ಒಟ್ಟು ಮೂರು ಬಾಗಿಲುಗಳನ್ನು ಹೊಂದಿದ್ದು, ನಾಲ್ಕು ಜನರಿಗೆ ಆಸನ ಸೌಲಭ್ಯವಿದೆ. ಈ ಕಾರು ಒಟ್ಟು 44 ಲೀಟರ್ ಪೆಟ್ರೋಲ್ ಟ್ಯಾಂಕ್ ಹೊಂದಿದ್ದು ಫುಲ್ ಟ್ಯಾಂಕ್‌ನಲ್ಲಿ 748 ಕಿ.ಮೀ ಮೈಲೇಜ್‌ನೊಂದಿಗೆ ಲೀಟರ್‌ಗೆ 17 ಕಿ.ಮೀ ವರೆಗೆ ಮೈಲೇಜ್ ನೀಡುವ ಸಾಮರ್ಥ್ಯವನ್ನು ಹೊಂದಿದೆ.
ಮಿನಿ ಕೂಪರ್ ಕೇವಲ ಒಂದು ರೂಪಾಂತರದ ಪೆಟ್ರೋಲ್ ಎಂಜಿನ್‌ನೊಂದಿಗೆ ಬರುತ್ತದೆ. ಈ ಕಾರಿನಲ್ಲಿ 2.0 ಲೀಟರ್ 1998 ಸಿಸಿ 4 ಸಿಲಿಂಡರ್ ಇನ್‌ಲೈನ್ ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 189 bhp ಪವರ್ ಮತ್ತು 280 Nm ಟಾರ್ಕ್ ಅನ್ನು ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ. ಇದನ್ನು ಆಟೋಮ್ಯಾಟಿಕ್ ಡ್ಯುಯಲ್ ಕ್ಲಚ್ 7 ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಕಾರಿನಲ್ಲಿ ಸ್ಪೋರ್ಟ್ಸ್ ಮೋಡ್ ಆಯ್ಕೆಯೂ ಇದೆ. ಬ್ರೇಕಿಂಗ್ ವಿಷಯದಲ್ಲಿ, ಈ ಕಾರಿನ ಮುಂಭಾಗ ಮತ್ತು ಹಿಂಭಾಗದ ಟೈರ್‌ಗಳಲ್ಲಿ ಡಿಸ್ಕ್ ಬ್ರೇಕ್‌ಗಳನ್ನು ಅಳವಡಿಸಲಾಗಿದೆ. ಈ ಕಾರು ಭಾರತದಲ್ಲಿ 40 ಲಕ್ಷ ರೂ.ಗಳ ಎಕ್ಸ್ ಶೋ ರೂಂ ಬೆಲೆಯಲ್ಲಿ ಲಭ್ಯವಿದೆ. ಇನ್ನು ಆನ್ ರೋಡ್ ಬೆಲೆ 45 ಲಕ್ಷ ರೂ. ವರೆಗೆ ಹೋಗುತ್ತದೆ. ಒಟ್ಟಾರೆಯಾಗಿ ಇದು ಹ್ಯಾಚ್‌ಬ್ಯಾಕ್ ಕಾರುಗಳಲ್ಲಿಯೇ ಅತ್ಯಂತ ದುಬಾರಿ ಕಾರು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








