Petrol - Diesel Price: ದೀಪಾವಳಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ, ಪೆಟ್ರೋಲ್ - ಡೀಸೆಲ್ ಬೆಲೆ ರೂ.10 ಇಳಿಕೆ?

ದೀಪಾವಳಿ (Diwali) ಹಬ್ಬ ಸಮೀಪಿಸುತ್ತಿದ್ದು, ಕೇಂದ್ರ ಸರ್ಕಾರ (Central Government) ದೇಶದ ಜನರಿಗೆ ದೊಡ್ಡ ಸಿಹಿಸುದ್ದಿ ನೀಡಲು ಮುಂದಾಗಿದೆ. ಪೆಟ್ರೋಲ್ (Petrol), ಡೀಸೆಲ್ (diesel) ದರವನ್ನು ಇಳಿಸಿ, ವಾಹನ ಸವಾರರ ಜೇಬಿನ ಹೊರೆಯನ್ನು ಒಂದಷ್ಟು ಕಡಿಮೆಗೊಳಿಸಲು ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮಾರುಕಟ್ಟೆಯ ಪರಿಸ್ಥಿತಿಗೆ ಅನುಗುಣವಾಗಿ, ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ತೈಲೋತ್ಪನ್ನ ಕಂಪನಿಗಳು ನಿರ್ಧರಿಸಲಿದ್ದು, ಪ್ರತಿದಿನವು ಬೆಲೆಯನ್ನು ಪರಿಷ್ಕರಿಸುವ ಅಧಿಕಾರವನ್ನು ಹೊಂದಿವೆ. ಆದರೆ, ಮೇ.22 2022 ರ ಬಳಿಕ ಅಂದರೆ ಬರೋಬ್ಬರಿ 1.4 ವರ್ಷಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸುವುದು ಅಥವಾ ಇಳಿಸುವುದು ಮಾಡಿಲ್ಲ.

Petrol - Diesel Price: ದೀಪಾವಳಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ, ಪೆಟ್ರೋಲ್ - ಡೀಸೆಲ್ ಬೆಲೆ ರೂ.10 ಇಳಿಕೆ?

ಇದೀಗ, ದೀಪಾವಳಿಗೂ ಮುನ್ನವೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಗೊಳಿಸಲು ಕೇಂದ್ರ ಸರ್ಕಾರ ಯೋಜಿಸುತ್ತದೆ ಎಂದು ಹೇಳಲಾಗಿದೆ. ಪ್ರತಿ ಲೀಟರ್ ಗೆ ಸುಮಾರು 10 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಈ ಸಂಬಂಧ ತೈಲ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ (Ministry of Petroleum and Natural Gas) ಅಧಿಕಾರಿಗಳು ತೈಲೋತ್ಪನ್ನ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

2021 ರಲ್ಲಿಯೂ ಕೇಂದ್ರ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂಪಾಯಿಯನ್ನು ಕಡಿಮೆ ಮಾಡಿತ್ತು. ಈ ಬಾರಿ ಪಂಚರಾಜ್ಯ ಚುನಾವಣೆ (ತೆಲಂಗಾಣ, ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ಮಿಜೋರಾಂ) ಹಾಗೂ ಮುಂಬರುವ ಲೋಕಸಭಾ ಚುನಾವಣಾ ದೃಷ್ಟಿಯಿಂದ ಬಹುತೇಕ ಇಂಧನ ದರ ಇಳಿಸಬಹುದು ಎಂದು ತಜ್ಞರು ವಿಶ್ಲೇಷಿಸುತ್ತಿದ್ದಾರೆ.

ಸದ್ಯ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.96.72, ಲೀಟರ್ ಡೀಸೆಲ್ ಬೆಲೆ ರೂ.89.62, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ ರೂ.106.31 ಮತ್ತು 1 ಲೀ. ಡೀಸೆಲ್ ಬೆಲೆ ರೂ.94.27, ಕೋಲ್ಕತ್ತಾದಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.106.03, ಲೀಟರ್ ಡೀಸೆಲ್ ಬೆಲೆ ರೂ.92.76 ಇದೆ.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು ನೋಡುವುದಾದರೆ, ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.101.94, ಲೀಟರ್ ಡೀಸೆಲ್ ಬೆಲೆ ರೂ.87.89, ಮೈಸೂರಿನಲ್ಲಿ ಲೀಟರ್ ಪೆಟ್ರೋಲ್ ದರ ರೂ.101.50 ಮತ್ತು 1 ಲೀ. ಡೀಸೆಲ್ ಬೆಲೆ ರೂ.87.49, ಮಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ದರ ರೂ.101.50, ಲೀಟರ್ ಡೀಸೆಲ್ ಬೆಲೆ ರೂ.87.49 ಇದೆ.

ಆಗೊಮ್ಮೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಇಳಿಕೆ ಮಾಡಿದರೆ, ಮಧ್ಯಮ ವರ್ಗದ ದುಡಿಯುವ ವರ್ಗದ ಜನರಿಗೆ ದೊಡ್ಡಮಟ್ಟದಲ್ಲಿ ಅನುಕೂಲವಾಗಲಿದೆ. ಚುನಾವಣಾ ದೃಷ್ಟಿಯಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಆಡಳಿತಾರೂಢ ಬಿಜೆಪಿ ಸರ್ಕಾರ ಇಂಧನ ದರವನ್ನು ಕಡಿಮೆಗೊಳಿಸಬಹುದು ಎಂದು ತಜ್ಞರ ಅಭಿಪ್ರಾಯವಾಗಿದ್ದು, ಕೆಲವೇ ದಿನಗಳಲ್ಲಿ ಎಲ್ಲದಕ್ಕೂ ಸ್ಪಷ್ಟ ಚಿತ್ರಣ ಸಿಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, November 4, 2023, 15:40 [IST]
English summary
Diwali pm modi government reduce petrol diesel price 10 rupees
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+