ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕುಡಿದು ವಾಹನ ಚಲಾಯಿಸಿದ ಆರೋಪದಡಿ 35 ಜನರನ್ನು ಬಂಧಿಸಲಾಗಿದೆ. ಇತ್ತೀಚಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೊಸ ವರ್ಷದ ಸಂದರ್ಭದಲ್ಲಿ ಕುಡಿದು ವಾಹನ ಚಾಲನೆ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ ಕಡಿಮೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಕಳೆದ ವರ್ಷ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಮುಂಬೈನಲ್ಲಿ 677 ಜನರು ಕುಡಿದು ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದಿದ್ದರು. ಹೀಗೆ ಸಿಕ್ಕಿ ಬಿದ್ದವರ ಡ್ರೈವಿಂಗ್ ಲೈಸೆನ್ಸ್ ಅನ್ನು ನ್ಯಾಯಾಲಯವು ಆರು ತಿಂಗಳ ಕಾಲ ಅಮಾನತುಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕುಡಿದು ವಾಹನ ಚಾಲನೆ ಮಾಡಿದವರ ಸಂಖ್ಯೆ ಗಮನಾರ್ಹವಾಗಿ ಕುಸಿದಿದೆ.

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಕರೋನಾ ವೈರಸ್ ಹಿನ್ನೆಲೆಯಲ್ಲಿ ಮುಂಬೈನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 11ರಿಂದ ಬೆಳಿಗ್ಗೆ 6ರವರೆಗೆ ಅನಗತ್ಯವಾಗಿ ಮನೆಯಿಂದ ಹೊರ ಬರದಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಈ ರಾತ್ರಿ ಕರ್ಫ್ಯೂ ಜನವರಿ 5ರವರೆಗೆ ಜಾರಿಯಲ್ಲಿರುತ್ತದೆ. ರಾತ್ರಿ ಕರ್ಫ್ಯೂ ಇರುವ ಕಾರಣ ಜನರು ಬೇಗನೆ ಮನೆ ಸೇರಿಕೊಂಡು ಮನೆಯೊಳಗೆ ಇರಲು ಬಯಸುತ್ತಾರೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದವರ ಸಂಖ್ಯೆ ಕಡಿಮೆಯಾಗಲು ಇದು ಸಹ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಸದಾ ಜನ ಜಂಗುಳಿಯಿಂದ ಕೂಡಿರುತ್ತಿದ್ದ ಮುಂಬೈನ ಬೀದಿಗಳಲ್ಲಿ ರಾತ್ರಿ ವೇಳೆಯಲ್ಲಿ ಜನರೇ ಇಲ್ಲದಂತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವುದರಿಂದ ಉಂಟಾಗುವ ಅಪಾಯಗಳ ಬಗ್ಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಇದರ ಜೊತೆಗೆ ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಇದು ಸಹ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಕುಡಿದು ವಾಹನ ಚಾಲನೆ ಮಾಡಿದವರ ಸಂಖ್ಯೆ ಕಡಿಮೆಯಾಗಲು ಕಾರಣವಾಗಿರಬಹುದು.

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಭಾರತದಲ್ಲಿ ಉಂಟಾಗುವ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳಿಗೆ ಕುಡಿದು ವಾಹನ ಚಾಲನೆ ಮಾಡುವುದು ಸಹ ಪ್ರಮುಖ ಕಾರಣವಾಗಿದೆ. ಹೊಸ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಜನರು ವಯಸ್ಸಿನ ಹಂಗಿಲ್ಲದೇ ಕುಡಿದು ವಾಹನ ಚಾಲನೆ ಮಾಡುತ್ತಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಆದ್ದರಿಂದ ಆ ದಿನ ಹೆಚ್ಚಿನ ಸಂಖ್ಯೆಯ ಅಪಘಾತಗಳು ಸಂಭವಿಸುತ್ತವೆ. ಆದರೆ ದೇಶದ ಹಲವು ನಗರಗಳಲ್ಲಿ ಕರೋನಾ ವೈರಸ್ ಕಾರಣದಿಂದಾಗಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿತ್ತು.

ಕರೋನಾ ವೈರಸ್ ಎಫೆಕ್ಟ್: ಡ್ರಿಂಕ್ ಅಂಡ್ ಡ್ರೈವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಕುಸಿತ

ಭಾರತದ ಹಲವು ನಗರಗಳು 2020ರ ಡಿಸೆಂಬರ್ 31ರಂದು ರಾತ್ರಿ ಜನರ ಓಡಾಟವಿಲ್ಲದೇ ನಿರ್ಜನವಾಗಿದ್ದವು. ಕರ್ನಾಟಕವು ಸಹ ಇದರಿಂದ ಹೊರತಾಗಿಲ್ಲ. ಬೆಂಗಳೂರಿನಲ್ಲಿ ಡಿಸೆಂಬರ್ 31ರಂದು ಮಧ್ಯಾಹ್ನ 12 ಗಂಟೆಯಿಂದಲೇ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Drink and drive cases reduced this time on 31st December. Read in Kannada.
Story first published: Saturday, January 2, 2021, 8:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X