ದೃಶ್ಯಂ ಚಿತ್ರ ನಟನಿಂದ ದುಬಾರಿ ಬೆಲೆಯ 'ಮಹೀಂದ್ರಾ ಥಾರ್' ಖರೀದಿ.. ಯಾರೀತ?

ಜಯಶಂಕರ್ ಕರಿಮುಟ್ಟಂ (Jayashankar Karimuttam) ಜನಪ್ರಿಯ ಮಲಯಾಳಂ ನಟರಾಗಿ ಗುರುತಿಸಿಕೊಂಡಿದ್ದು, ತಮ್ಮ ಪೋಷಕ ಪಾತ್ರಗಳಿಂದಲೇ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. 'ವಧು ಡಾಕ್ಟರನ್' ಚಿತ್ರದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟ ಅವರು, ಕಳೆದ 30 ವರ್ಷಗಳಿಂದ ಸಿನಿರಂಗದಲ್ಲಿ ಫುಲ್ ಆಕ್ಟಿವ್ ಇದ್ದಾರೆ. ಜೊತೆಗೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಟ ಜಯಶಂಕರ್ ಅವರಿಗೆ ಭ್ರಮರಂ, ಪಲುಂಕ್, ದೃಶ್ಯಂ-2 ಮತ್ತು ಜಲ್ಲಿಕಟ್ಟು ಚಿತ್ರಗಳು ಸಾಕಷ್ಟು ಖ್ಯಾತಿ ತಂದುಕೊಟ್ಟಿವೆ.

ಸದ್ಯ, ನಟ ಜಯಶಂಕರ್ ಕರಿಮುಟ್ಟಂ ಹೊಚ್ಚ ಹೊಸ ಮಹೀಂದ್ರಾ ಥಾರ್ (Mahindra Thar) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಜಯಶಂಕರ್ ಅವರು ಶೋರೂಂ ತೆರಳಿ, ಅಲ್ಲಿ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ನಂತರದಲ್ಲಿ ಹೊಸ ಕಾರಿನ ಕೀ ಪಡೆಯುತ್ತಿರುವುದನ್ನು ಕಾಣಬಹುದು. ನೂತನ ಎಸ್‌ಯುವಿ ತೆಗೆದುಕೊಂಡಿದ್ದಕ್ಕೆ ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Drishyam-2 Film Actor Jaishankar Buys New Mahindra Thar Details

ಸದ್ಯ, ನಟ ಜಯಶಂಕರ್ ಕರಿಮುಟ್ಟಂ ಅವರು ತೆಗೆದುಕೊಂಡಿದ್ದಾರೆ ಎನ್ನಲಾದ 3-ಡೋರ್ ಮಹೀಂದ್ರಾ ಥಾರ್ ಎಸ್‌ಯುವಿ, ರೂ.12.99 ಲಕ್ಷದಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ಎಲ್ಎಕ್ಸ್ ಮತ್ತು ಎಎಕ್ಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ. ರೆಡ್ ರೇಜ್, ಡೀಪ್ ಗ್ರೇ, ಸ್ಟೆಲ್ತ್ ಬ್ಲ್ಯಾಕ್ ಮತ್ತು ಎವರೆಸ್ಟ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳನ್ನು ಹೊಂದಿದೆ.

ಈ ಕಾರು 1.5-ಲೀಟರ್ ಡಿಸೇಲ್, 2.2-ಲೀಟರ್ ಡಿಸೇಲ್ ಹಾಗೂ 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15.2 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. 57 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.

ನೂತನ ಕಾರಿನ 4 ಜನರು ಸುಲಭವಾಗಿ ಓಡಾಟ ನಡೆಸಬಹುದು. ಇದು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 4-ಪವರ್ ವಿಂಡೋಗಳು, ಕೀಲೆಸ್ ಎಂಟ್ರಿ, ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು, ಮತ್ತು ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ಕೂಡ ಗ್ರಾಹಕರಿಗೆ ಸಿಗುತ್ತದೆ: ಇದೊಂದು 5-ಡೋರ್ ಎಸ್‌ಯುವಿಯಾಗಿದೆ. ರೂ.12.99 ಲಕ್ಷದಿಂದ ರೂ.22.49 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಸರ್ಕ್ಯೂಲರ್ ಫಾಗ್ ಲೈಟ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲೈಟ್‌ಗಳನ್ನು ಪಡೆದಿದೆ.

ಈ ಥಾರ್ ರಾಕ್ಸ್ ಎಸ್‌ಯುವಿಯಲ್ಲಿ 5 ಮಂದಿ ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಪನೋರಮಿಕ್ ಸನ್‌ರೂಫ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, January 13, 2025, 15:41 [IST]
English summary
Drishyam 2 film actor jaishankar buys new mahindra thar details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+