ಅಮ್ಮನಿಗೆ ಏಕ್ ನಂಬರ್ Hyundai Creta ಕಾರು ಉಡುಗೊರೆ ನೀಡಿದ ಡ್ರೋನ್ ಪ್ರತಾಪ್, ಬೆಲೆ ಎಷ್ಟು.. ವಿಶೇಷತೆಗಳೇನು?
ಕನ್ನಡದ ಬಿಗ್ ಬಾಸ್ (Bigg Boss) ಸೀಸನ್ 10 ಡ್ರೋನ್ ಪ್ರತಾಪ್ (Drone Prathap) ಅವರಿಗೆ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ಆ ಶೋನಲ್ಲಿ ರನ್ನರ್ ಅಪ್ ಕೂಡ ಆಗಿದ್ದರು. ಈಗ ಭರ್ಜರಿ ಬ್ಯಾಚುಲರ್ಸ್ (Bharjari Bachelors) ಸೀಸನ್ 2ರ ಸ್ಪರ್ಧಿಯಾಗಿದ್ದಾರೆ. ಈ ನಡುವೆ ತಮ್ಮ ತಾಯಿಗೆ ದುಬಾರಿ ಬೆಲೆಯ ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta) ಕಾರನ್ನು ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ಅದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ.
ಈ ಕುರಿತಂತೆ ಡ್ರೋನ್ ಪ್ರತಾಪ್ ಅವರೇ ಸ್ವತಃ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. 'ಅಪ್ಪ - ಅಮ್ಮನಿಗೆ ಏನೆಂದರೂ ಕೊಡಿಸಬೇಕೆಂಬ ಆಸೆಯಿತ್ತು. ಹಾಗಾಗಿ, ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದೇನೆ' ಎಂದು ಹೇಳಿದ್ದಾರೆ. ಹೊಸ ಕಾರನ್ನು ಕಂಡಕೊಂದಲೇ ಪ್ರತಾಪ್ ಅವರ ತಾಯಿಯ ಕಣ್ಣುಗಳು ತುಂಬಿ ಬಂದವು. ಜೊತೆಗೆ ಕೇಕ್ ಕಟ್ ಮಾಡಿಯೂ ಸಂಭ್ರಮಿಸಲಾಯಿತು.

ಹ್ಯುಂಡೈ ಕ್ರೆಟಾ ವಿಶೇಷತೆಗಳೇನು:
ಇದೊಂದು ಎಸ್‌ಯುವಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಳಿಸಲಾಗುತ್ತದೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಜೂನ್ ತಿಂಗಳು 'ಕ್ರೆಟಾ' ನಂಬರ್ 1 ಸ್ಥಾನದಲ್ಲಿದೆ. ಬರೋಬ್ಬರಿ 15,786 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದ್ದು, ರೂ.11.11 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.
ಈ ಕಾರು ಇ, ಇಎಕ್ಸ್, ಎಸ್, ಎಸ್(ಒ) ಹಾಗೂ ಎಸ್ಎಕ್ಸ್ ಸೇರಿದಂತೆ 7 ಆಕರ್ಷಕ ರೂಪಾಂತರಗಳೊಂದಿಗೂ (ವೇರಿಯೆಂಟ್) ಸಿಗುತ್ತದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಅದು ನೋಡುಗರನ್ನು ಸೆಳೆಯುವಂತಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ಫಿಯರಿ ರೆಡ್, ರೇಂಜರ್ ಖಾಕಿ, ಟೈಟಾನ್ ಗ್ರೇ, ಸ್ಟಾರಿ ನೈಟ್ ಹಾಗೂ ಟೈಟಾನ್ ಗ್ರೇ ಮ್ಯಾಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. ಜೊತೆಗೆ 4330 ಎಂಎಂ ಉದ್ದ, 1790 ಉದ್ದ ಮತ್ತು 1635 ಎಂಎಂ ಎತ್ತರವು ಇದೆ. 190 ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2610 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ ಹ್ಯುಂಡೈ ಕ್ರೆಟಾ ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ & 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 17 ರಿಂದ 21.8 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್‌ಪ್ಲೇ, ಡುಯಲ್ - ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಕ್ರೆಟಾ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಹೊಂದಿದೆ.


Click it and Unblock the Notifications








