TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಕುಡಿತ ಮತ್ತಿನಲ್ಲಿ ಟ್ರಾಫಿಕ್ ಪೊಲೀಸರಿಗೆ ಹಿಗ್ಗಾಮುಗ್ಗ ಥಳಿಸಿದ ವಕೀಲ..!
ರಸ್ತೆ ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡಿದ್ದಲ್ಲದೆ ಅದನ್ನು ಪ್ರಶ್ನಿಸಿದ ಟ್ರಾಫಿಕ್ ಪೊಲೀಸರ ಮೇಲೆಯೇ ಬೈಕ್ ಸವಾರನೊಬ್ಬ ಹಿಗ್ಗಾಮುಗ್ಗ ಥಳಿಸಿರುವ ಘಟನೆ ನಡೆದಿದ್ದು, ಬೈಕ್ ಸವಾರನ ಅವಾಂತರದಿಂದಾಗಿ ಪೇದೆಯೊಬ್ಬರು ಆಸ್ಪತ್ರೆ ಸೇರುವಂತವಾಗಿದೆ.
ರಸ್ತೆ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡುವುದು ಮೊದಲೇ ತಪ್ಪು. ಹೀಗಿರುವಾಗ ಬೈಕ್ ಸವಾರನೊಬ್ಬ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ಬೈಕ್ ಚಾಲನೆ ಮಾಡಿದ್ದಲ್ಲದೆ ಅದನ್ನು ಪ್ರಶ್ನಿಸಿದ ಟ್ರಾಫಿಕ್ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ನಗರದ ಹದಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಹೆಲ್ಮೆಟ್ ಹಾಕದೆ ಬೈಕ್ ಸವಾರಿ ಮಾಡಿದ್ದರ ವಿರುದ್ಧ ದಂಡ ಹಾಕಲು ಮುಂದಾಗಿದ್ದ ಟ್ರಾಫಿಕ್ ಪೊಲೀಸರ ಮೇಲೆ ಈ ರೀತಿ ಹಲ್ಲೆ ನಡೆದಿದೆ.
ಟ್ರಾಫಿಕ್ ಎಎಸ್ಐ ಅಂಜಿನಪ್ಪ ಮತ್ತು ಪೇದೆ ಸಿದ್ದೇಶ್ ಎಂಬುವರ ಮೇಲೆ ಬೈಕ್ ಸವಾರ ರುದ್ರಪ್ಪ ಎಂಬಾತ ಹಲ್ಲೆ ಮಾಡಿದ್ದು, ಕುಡಿತ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬುಧವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಟ್ರಾಫಿಕ್ ಪೊಲೀಸರು ಹದಡಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ರುದ್ರೇಶ್ ಬೈಕನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಇದಕ್ಕೆ ಸಿಟ್ಟಾದ ರುದ್ರೇಶ್ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾನೆ.
ವೃತ್ತಿಯಲ್ಲಿ ವಕೀಲ ಎಂದು ಹೇಳಲಾಗುತ್ತಿರುವ ರುದ್ರಪ್ಪ, ಕುಡಿದು ವಾಹನ ಚಾಲನೆ ಮಾಡುತ್ತಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹೆಲ್ಮೆಟ್ ಇಲ್ಲದ ಕಾರಣಕ್ಕೆ ಬೈಕ್ ತಡೆದಿದ್ದ ಟ್ರಾಫಿಕ್ ಪೊಲೀಸರಿಗೆ ರುದ್ರಪ್ಪ ಕುಡಿದು ಬೈಕ್ ಚಾಲನೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದರು.
ಹೀಗಾಗಿ ರುದ್ರಪ್ಪ ವಿರುದ್ಧ ಕಾನೂನು ಪ್ರಕಾರ ಡ್ರಂಕ್ ಅಂಡ್ ಡ್ರೈವ್ ಕೇಸ್ ಜಡಿಯಲು ಮುಂದಾದಾಗ ಪೊಲೀಸರ ಜೊತೆಗೆ ಜಗಳಕ್ಕೆ ಇಳಿದ ರುದ್ರಪ್ಪ ಕೈಗೆ ಸಿಕ್ಕಿದ ವಸ್ತುಗಳಿಂದ ಹಲ್ಲೆ ಮಾಡಿದ್ದಾನೆ. ಜನದಟ್ಟಣೆಯ ಮಧ್ಯೆಯು ಪೊಲೀಸರ ಮೇಲೆ ಹಲ್ಲೆ ಮಾಡುತ್ತಿದ್ದರು ಅಲ್ಲಿನ ಸ್ಥಳೀಯರು ಮಾತ್ರ ಅದನ್ನು ತಡೆಯಲು ಮುಂದಾಗಿಲ್ಲ.
MOST READ: ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು
ರಸ್ತೆ ಬದಿಯಲ್ಲಿ ಮಾರಾಟಕ್ಕೆ ಈಡಲಾಗಿದ್ದ ಮಣ್ಣಿನ ಪಾತ್ರೆಗಳಿಂದಲೇ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಲ್ಲದೇ, ಸಿಪಿಐ ಕತ್ತಿಗೆ ಕೈ ಹಾಕಿ ನೆಲಕ್ಕೆ ಉರುಳಿಸಿದ್ದಾನೆ. ಈ ವೇಳೆ ಪೇದೆ ಸಿದ್ದೇಶ್ ಅವರ ತಲೆಯ ಭಾಗಕ್ಕೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳೀಯರ ಪ್ರಕಾರ ಮಧ್ಯಾಹ್ನದ ಹೊತ್ತಿನಲ್ಲಿ ಡ್ರಂಕ್ ಅಂಡ್ ಡ್ರೈವ್ ಚೆಕ್ ಮಾಡುತ್ತಿರುವುದಕ್ಕೆ ವಿರೋಧಿಸಿದ್ದ ರುದ್ರಪ್ಪ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದಾನೆ. ಆಗ ಸಿಟ್ಟಿಗೆದ್ದ ಸಿಪಿಐ ಅವರು ರುದ್ರಪ್ಪಗೆ ಸ್ಟೆಷನ್‌ಗೆ ಬರುವಂತೆ ತಾಕೀತು ಮಾಡಿದ್ದಾರೆ. ಇಷ್ಟಕ್ಕೆ ಕುಪಿತಗೊಂಡ ರುದ್ರಪ್ಪ ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾನೆ
ಕಂಬಿ ಹಿಂದೆ ಸೇರಿದ ವಕೀಲ
ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರುದ್ರಪ್ಪನನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದು, ಕರ್ತವ್ಯಕ್ಕೆ ಅಡ್ಡಿ, ಹಲ್ಲೆ, ಜೀವಬೇದರಿಕೆ ಕೇಸ್ ಜಡಿದು ಕಂಬಿ ಹಿಂದೆ ಕೂರಿಸಿದ್ದಾರೆ.
MOST READ: ಟ್ರಾಫಿಕ್ ಪೊಲೀಸ್‍ರಿಂದ ತಪ್ಪಿಸಿಕೊಳ್ಳಬಹುದು ಆದ್ರೆ ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ.!
ಆದ್ರೆ ಅದೇನೆ ಇರಲಿ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ ಮಾಡುವುದು ಕಾನೂನು ಪ್ರಕಾರ ತಪ್ಪು. ಜೊತೆಗೆ ವೃತ್ತಿಯಲ್ಲಿ ವಕೀಲ ಎಂದು ಹೇಳಲಾಗುತ್ತಿರುವ ರುದ್ರೇಶ್ ಕಾನೂನು ಪಾಲನೆ ಮಾಡುವುದನ್ನು ಬಿಟ್ಟು ಈ ರೀತಿಯಾಗಿ ವರ್ತಿಸಿರುವುದು ಅವಿವೇಕಿತನದ ಪರಮಾವಧಿ ಎಂದ್ರೆ ತಪ್ಪಾಗುವುದಿಲ್ಲ.
ಪ್ರತಿ ಚಾರ್ಚ್‌ಗೆ 250 ಕಿ.ಮಿ ಮೈಲೇಜ್ ನೀಡಬಲ್ಲ ರೆನಾಲ್ಟ್ ಕ್ವಿಡ್ ಎಲೆಕ್ಟ್ರಿಕ್ ಕಾರಿನ ಫೋಟೋ ಗ್ಯಾಲರಿ..!