ರೂ.3 ಕೋಟಿ ಮೌಲ್ಯದ ಕಾರು ಖರೀದಿಸಿದ ನಟ ದುಲ್ಕರ್ ಸಲ್ಮಾನ್: ಫ್ಯಾನ್ಸಿ ನಂಬರ್‌ಗಾಗಿ ರೂ.1.85 ಲಕ್ಷ ಖರ್ಚು
ಮಮ್ಮುಟ್ಟಿ ಮತ್ತು ಮಗ ದುಲ್ಕರ್ ಸಲ್ಮಾನ್ ದೊಡ್ಡ ಕಾರು ಪ್ರೇಮಿಗಳಾಗಿದ್ದಾರೆ. ಅವರು ತಮ್ಮ ಗ್ಯಾರೇಜ್‌ನಲ್ಲಿ ಹೊಸ ಐಷಾರಾಮಿ ಮತ್ತು ವಿಂಟೇಜ್ ಕಾರುಗಳ ಸಂಗ್ರಹವನ್ನು ಹೊಂದಿದ್ದಾರೆ.ಇದೀಗ ಅವರ ಗ್ಯಾರೇಜ್‌ನಲ್ಲಿ ಹೊಸ ಐಷಾರಾಮಿ ಕಾರ್ ಸೇರ್ಪಡೆಯಾಗಿದೆ. ದುಲ್ಕರ್ ಸಲ್ಮಾನ್ ಹೊಸ Mercedes Maybach GLS600 ಎಸ್‍ಯುವಿಯನ್ನು ಖರೀದಿಸಿದ್ದಾರೆ.
ಮೆಗಾಸ್ಟಾರ್ ಮಮ್ಮುಟ್ಟಿ ಮತ್ತು ಅವರ ಮಗ ದುಲ್ಕರ್ ಸಲ್ಮಾನ್ ಮಲಯಾಳಂ ಚಿತ್ರರಂಗದಲ್ಲಿ ಹೆಚ್ಚು ಕಾರ್ ಕ್ರೇಜ್ ಹೊಂದಿರುವ ನಟರಾಗಿದ್ದಾರೆ. ಇತ್ತೀಚೆಗೆ, ದುಲ್ಕರ್ ಬಿಬಿಸಿಯ ಟಾಪ್ ಗೇರ್ ಮ್ಯಾಗಜೀನ್‌ನ ಕವರ್ ಪೇಜ್‌ನಲ್ಲಿ ಕಾಣಿಸಿಕೊಂಡ ಮೊದಲ ದಕ್ಷಿಣ ಭಾರತದ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಟ ದುಲ್ಕರ್ ಸಲ್ಮಾನ್ ಭಾರತ ಚಿತ್ರರಂಗದ ಟ್ರೇಂಡ್ ಆಗಿರುವ ಸುಮಾರು ರೂ.3 ಕೋಟಿ ಮೌಲ್ಯದ Mercedes Maybach GLS600 ಕಾರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ದುಲ್ಕರ್ ಮೊದಲ ಮೇಬ್ಯಾಚ್ ಮಾಲೀಕ ಎಂಬುದು ಕೂಡ ವಿಶೇಷ.ಇದು ದೇಶದಲ್ಲಿ ಮಾರಾಟದಲ್ಲಿರುವ ಅತ್ಯಂತ ಪ್ರಾಯೋಗಿಕ ಐಷಾರಾಮಿ ವಾಹನಗಳಲ್ಲಿ ಒಂದಾಗಿದೆ. ನಟ ದುಲ್ಕರ್ ಅವರ ಹೊಸ Mercedes-Benz Maybach GLS 600 ಎಸ್‍ಯುವಿ ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ನೋಂದಣಿಯಾಗಿದೆ. ನಟ ತನ್ನ ನೆಚ್ಚಿನ ಸಂಖ್ಯೆ 369 ಅನ್ನು ಪಡೆಯಲು ಅವರು ಹರಾಜಿನ ಮೂಲಕ 1.85 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರೆ.
ದುಲ್ಕರ್ ಸಲ್ಮಾನ್ ಮಲಯಾಳಂ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾಗಿದ್ದಾರೆ, ಇವರು ಮಲಯಾಳಂನಲ್ಲಿ ಮಾತ್ರವಲ್ಲದೆ ತೆಲುಗು ಮತ್ತು ತಮಿಳಿನ ಕೆಲವು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಇವರ ಸ್ಟೈಲ್ ಮತ್ತು ನಟನೆಯಿಂದಾಗಿ ಇವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ದೊಡ್ಡ ಅಭಿಮಾನಿ ವರ್ಗವನ್ನು ಹೊಂದಿರುವ ದುಲ್ಕರ್ ಸಲ್ಮಾನ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಡಿಕ್ಯೂ ಎಂದು ಕರೆಯುತ್ತಾರೆ.

Mercedes Maybach GLS600 ಬಾಲಿವುಡ್ ಸಿನಿ ರಂಗದ ಹಲವಾರು ಸೆಲೆಬ್ರಿಟಿಗಳು ಈ ಕಾರನ್ನು ಖರೀದಿಸಿದ್ದಾರೆ. ಮರ್ಸಿಡಿಸ್ ಬೆಂಝ್ ಕಂಪನಿಯು Mercedes Maybach GLS600 ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ 2021 ರಲ್ಲಿ ಬಿಡುಗಡೆಗೊಳಿಸಿತು. ಅಂದಿನಿಂದ ಈ ವಾಹನವು ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಮರ್ಸಿಡಿಸ್-ಮೇಬ್ಯಾಕ್ ಕಾರಿಗೆ ಬುಕಿಂಗ್ ಅನ್ನು ತೆರೆದ ತಕ್ಷಣ, ಅದು ಸಂಪೂರ್ಣವಾಗಿ ಬುಕ್ ಆಗುತ್ತದೆ.
Mercedes-Maybach ಕಾರುಗಳನ್ನು CBU ಮಾದರಿಗಳಾಗಿ ಭಾರತಕ್ಕೆ ಆಮದು ಮಾಡಿಕೊಳ್ಳುವುದರಿಂದ, ಭಾರತದ ಮಾರುಕಟ್ಟೆಗೆ ಬರುವ ವಾಹನದ ಕೆಲವೇ ಸೀಮಿತ ಯುನಿಟ್ ಗಳಾಗಿವೆ. ಗ್ರಾಹಕರ ಬೇಡಿಕೆಯೆಂತೆ 4 ಸೀಟರ್ ಅಥವಾ 5 ಸೀಟರ್ ಮಾದರಿಯೊಂದಿಗೆ ಖರೀದಿ ಮಾಡಬಹುದಾಗಿದೆ. ಇನ್ನು ಈ Mercedes Maybach GLS600 ಅತ್ಯಾಧುನಿಕ ಸೌಲಭ್ಯಗಳೊಂದಿಗೆ ತನ್ನ ಸರಣಿ ಕಾರುಗಳಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಇದು ಸುಧಾರಿತ ತಂತ್ರಜ್ಞಾನ ಮತ್ತು ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿದೆ.

ಈ ಎಸ್‍ಯುವಿಯ ಒಟ್ಟಾರೆ ವಿನ್ಯಾಸವು ಐಷಾರಾಮಿ ಮತ್ತು ಪ್ರೀಮಿಯಂ ಆಗಿದೆ. ಇದರಲ್ಲಿ ದೊಡ್ಡದಾದ ವರ್ಟಿಕಲ್ ಸ್ಲ್ಯಾಟ್ ಗ್ರಿಲ್, ವಿಂಡೋ ಲೈನ್, ಸೈಡ್-ಸ್ಟೆಪ್, ಮುಂಭಾಗ ಮತ್ತು ಹಿಂಭಾಗದ ಬಂಪರ್‌ಗಳಲ್ಲಿ ಡಿಸೈನ್ ಆಕ್ಸೆಂಟ್, ರೂಫ್ ರೈಲ್ಸ್ ಮತ್ತು ಸ್ಪೋರ್ಟಿ ಎಕ್ಸಾಸ್ ನೋಟ್ ಹೊಂದಿದೆ. ಈ Mercedes Maybach GLS600 ಕಾರಿ ಹಿಂಭಾಗದಲ್ಲಿ ಫೋರ್ಡರ್‌ಗಳಲ್ಲಿ ರೆಫ್ರಿಜರೇಟರ್ ಅನ್ನು ಸಹ ಒಳಗೊಂಡಿದೆ.
ಈ ಐಷಾರಾಮಿ ಎಸ್‍ಯುವಿಯಲ್ಲಿ 4.0 ಲೀಟರ್ ವಿ8 ಪೆಟ್ರೋಲ್ ಎಂಜಿನ್ ಅಳವಡಿಸಲಾಗಿದೆ. ಈ ಎಂಜಿನ್ 9 ಜಿ-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 550ಬಿಎಚ್‌ಪಿ ಮತ್ತು 730ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ಹೊಸ ಎಂಜಿನ್‌ನಲ್ಲಿ 21ಬಿಎಚ್‌ಪಿ ಮತ್ತು 249ಎನ್ಎಂ ಟಾರ್ಕ್ ಕೊಡುಗೆ ನೀಡುವ ಸಂಯೋಜಿತ ಇಕ್ಯೂ ಬೂಸ್ಟ್ ಸ್ಟಾರ್ಟರ್-ಜನರೇಟರ್ ಅನ್ನು ಸಹ ಹೊಂದಿದೆ. ಈ ಎಸ್‍ಯುವಿಯು 250 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.


Click it and Unblock the Notifications








