ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಬಳಕೆಯು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗುವ ಸಾಧ್ಯತೆಯಿದ್ದು, ದೇಶಾದ್ಯಂತ ಅದಕ್ಕೆ ಸಂಬಂಧಿಸಿದ ಮೂಲಸೌಕರ್ಯ ಹೆಚ್ಚಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆ ರೂಪಿಸಿಕೊಂಡಿದೆ.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಈಗಾಗಲೇ ದೇಶದಲ್ಲಿ 10.60 ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಅಲ್ಲದೇ ಚಾರ್ಜಿಂಗ್ ನೆಟ್‌ವರ್ಕ್‌ ದತ್ತಾಂಶವನ್ನು ಹಂಚಿಕೊಂಡ ಅವರು, ದೇಶದಲ್ಲಿ 1,742 ಚಾರ್ಜಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳು

ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ರಸ್ತೆಬದಿ ಸೌಲಭ್ಯಗಳಾಗಿ ಒದಗಿಸಲು ಗುತ್ತಿಗೆದಾರರಿಗೆ ನಿರ್ದೇಶನ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಇಂತಹ 39 ಯೋಜನೆಗಳನ್ನು ಅಭಿವೃದ್ಧಿಪಡಿಸುತ್ತಿದೆ, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆದ್ದಾರಿಯ ಉದ್ದಕ್ಕೂ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಲಭ್ಯವಾಗಲಿದೆ ಎಂದು ಗಡ್ಕರಿ ಮಾಹಿತಿ ನೀಡಿದರು.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಈಗಾಲೇ ಎನ್ಎಚ್ಐಎ ಮುಂಬೈ-ದೆಹಲಿ ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಜಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಸಂಬಂಧ 90 ಸ್ಥಳಗಳನ್ನ ಗುರುತಿಸಿದೆ. ಇದರ ಜೊತೆಗೆ ಹೊಸ ಎಕ್ಸ್‌ಪ್ರೇಸ್‌ವೇ ಮತ್ತು ಹೈವೇಗಳಲ್ಲಿ 400 ಜಾರ್ಚಿಂಗ್ ಸ್ಟೇಷನ್‌ಗಳನ್ನ ಸ್ಥಾಪಿಸಲಾಗುತ್ತದೆ. ಇನ್ನುಳಿದ ಸ್ಟೇಷನ್‌ಗಳನ್ನು ಇತರ ಹೆದ್ದಾರಿಗಳ ಮೂಲಕ ಸ್ಥಾಪಿಸಲಾಗುತ್ತದೆ.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ರಾಜ್ಯಸಭೆಯಲ್ಲಿ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (ಸಿಆರ್ಐಎಫ್) ಮತ್ತು ಅಂತಾರಾಜ್ಯ ರಸ್ತೆ ಯೋಜನೆಗಳ (ಸಿಐಆರ್ಎಫ್) ಅಡಿಯಲ್ಲಿ ಕ್ರಮವಾಗಿ 20,268.45 ಕೋಟಿ ರೂ. ಮತ್ತು 1,189.94 ಕೋಟಿ ರೂ.ನ ಯೋಜನೆಗಳು ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಹೆದ್ದಾರಿಗಳಲ್ಲಿ ಟೋಲ್ ಬೂತ್‌ಗಳು ಕಡಿಮೆ ಇರಬೇಕು

ಭಾರತದಲ್ಲಿ ಈಗಿರುವ ಹೆದ್ದಾರಿಗಳು ಅಥವಾ ಎಕ್ಸ್‌ಪ್ರೆಸ್‌ವೇಗಳನ್ನು ಬಳಸಿಕೊಳ್ಳಲು ಟೋಲ್ ತೆರಿಗೆಯನ್ನು ಪದೇ ಪದೇ ಪಾವತಿಸುವ ಸಮಸ್ಯೆಯನ್ನು ಶೀಘ್ರದಲ್ಲೇ ತೊಡೆದುಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು, ಸರ್ಕಾರಿ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿರುವ ಟೋಲ್ ಬೂತ್‌ಗಗಳಿಂದ 60 ಕಿ.ಮೀ ದೂರದಲ್ಲಿರುವ ಇತರ ಎಲ್ಲಾ ಟೋಲ್ ಬೂತ್‌ಗಳನ್ನು ತೆರವುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಟೋಲ್ ಬೂತ್‌ನಿಂದ 60 ಕಿ.ಮೀ ವ್ಯಾಪ್ತಿಯಲ್ಲಿರುವ ಇತರ ಟೋಲ್ ಬೂತ್‌ಗಳನ್ನು ತೆರವುಗೊಳಿಸುವ ಕೆಲಸವನ್ನು ಸರ್ಕಾರ ಮೂರು ತಿಂಗಳಲ್ಲಿ ಪೂರ್ಣಗೊಳಿಸಲಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಇದು ಪ್ರಯಾಣಿಕರ ಮೇಲಿನ ಅತಿಯಾದ ಟೋಲ್ ತೆರಿಗೆಯ ಹೊರೆಯನ್ನು ಕಡಿಮೆ ಮಾಡುತ್ತದೆ. ಹೆದ್ದಾರಿ ಮೂಲಕ ಪ್ರಯಾಣಿಸಲು ಕೈಗೆಟುಕುವಂತೆ ಮಾಡುತ್ತದೆ ಎಂದು ಹೇಳಿದರು. ಪ್ರಯಾಣಿಕರಿಂದ ಟೋಲ್ ಸಂಗ್ರಹಿಸುವ ಅಕ್ರಮ ಟೋಲ್ ಬೂತ್‌ಗಳ ಮೇಲೆ ಸರ್ಕಾರ ನಿಗಾ ವಹಿಸಿದ್ದು, ಶೀಘ್ರದಲ್ಲೇ ಅವುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವುದಾಗಿ ಕೇಂದ್ರ ಸಚಿವ ಗಡ್ಕರಿ ಹೇಳಿದರು.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಸದನದಲ್ಲಿ ಹೇಳಿಕೆ ನೀಡಿರುವ ಗಡ್ಕರಿ, "ಹೆದ್ದಾರಿಗಳಲ್ಲಿ ಅಕ್ರಮವಾಗಿ ಪ್ರಯಾಣಿಕರಿಂದ ಟೋಲ್ ಸಂಗ್ರಹಿಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ, ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ 60 ಕಿ.ಮೀ ದೂರದಲ್ಲಿ ಕೇವಲ ಒಂದು ಟೋಲ್ ಬೂತ್ ಮಾತ್ರ ಇರುವಂತೆ ಮಾಡುವುದಾಗಿ ಅವರು ಭರವಸೆ ನೀಡಿದರು.

 ಎಲೆಕ್ಟ್ರಿಕ್ ವಾಹನ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ: 10.60 ಲಕ್ಷ ದಾಟಿದ ಇವಿ ವಾಹನ ನೋಂದಣಿ

ಯಾವುದೇ ರಾಷ್ಟ್ರೀಯ ಹೆದ್ದಾರಿಯಲ್ಲಿ 60 ಕಿಲೋಮೀಟರ್ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಬೂತ್‌ಗಳನ್ನು ಹೊಂದಿರುವುದು ಕಾನೂನುಬಾಹಿರ. ದೇಶದ ಹಲವಾರು ಪ್ರಮುಖ ಹೆದ್ದಾರಿಗಳಲ್ಲಿ 60 ಕಿ.ಮೀ ವ್ಯಾಪ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಬೂತ್‌ಗಳನ್ನು ನಡೆಸಲಾಗುತ್ತಿದೆ ಎಂದು ಸಾರಿಗೆ ಸಚಿವಾಲಯವು ಸಾರ್ವಜನಿಕರಿಂದ ಆಗಾಗ್ಗೆ ದೂರುಗಳನ್ನು ಸ್ವೀಕರಿಸುತ್ತಿತ್ತು. ಇದರಿಂದ ಪ್ರಯಾಣಿಕರು ಆಗಾಗ್ಗೆ ಕಾಯುವ ಮೂಲಕ ಟೋಲ್ ಪಾವತಿಸುವಂತೆ ಮಾಡುವುದು ಮಾತ್ರವಲ್ಲದೆ, ಹೆದ್ದಾರಿಯಲ್ಲಿ ಪ್ರಯಾಣಿಸುವ ವೆಚ್ಚವೂ ಹೆಚ್ಚಿಸುತ್ತಿದೆ.

More from DriveSpark

Article Published On: Friday, March 25, 2022, 12:54 [IST]
English summary
Electric vehicle registration crosses 10 60 lakh nitin gadkari
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+