ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಪೆಟ್ರೋಲ್, ಡೀಸೆಲ್ ವಾಹನಗಳು ಚಲಿಸುವಾಗ ಶಬ್ದವನ್ನುಂಟು ಮಾಡುತ್ತವೆ. ಆದರೆ ಎಲೆಕ್ಟ್ರಿಕ್ ವಾಹನಗಳು ಚಲಿಸುವಾಗ ಯಾವುದೇ ರೀತಿಯ ಶಬ್ದ ಉಂಟಾಗುವುದಿಲ್ಲ. ಎಲೆಕ್ಟ್ರಿಕ್ ವಾಹನಗಳು ಶಬ್ದ ಮಾಡದಿರುವುದು ಸಮಸ್ಯೆಗಳಿಗೆ ಕಾರಣವಾಗಬಹುದು. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಸಂಬಂಧಿಸಿದ ಈ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಎಲೆಕ್ಟ್ರಿಕ್ ವಾಹನಗಳು ಚಲಿಸುವಾಗ ಶಬ್ದ ಉಂಟಾಗದೇ ಇರುವುದರಿಂದ ರಸ್ತೆಯಲ್ಲಿ ನಡೆಯುವ ಪಾದಚಾರಿಗಳಿಗೆ ವಾಹನಗಳ ಆಗಮನದ ಬಗ್ಗೆ ತಿಳಿಯುವುದಿಲ್ಲ. ಇದರಿಂದ ಅಪಘಾತಗಳಾಗುವ ಸಾಧ್ಯತೆಗಳಿರುತ್ತವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ. ವರದಿಗಳ ಪ್ರಕಾರ ರಸ್ತೆಯಲ್ಲಿರುವವರನ್ನು ಸುರಕ್ಷಿತವಾಗಿಸಲು ಎಲೆಕ್ಟ್ರಿಕ್ ವಾಹನಗಳಲ್ಲಿ ಕೃತಕ ಶಬ್ದವನ್ನು ಅಳವಡಿಸುವ ಬಗ್ಗೆ ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಈ ಮೂಲಕ ರಸ್ತೆಯಲ್ಲಿ ಸಾಗುವ ಪಾದಚಾರಿಗಳಿಗೆ ಎಲೆಕ್ಟ್ರಿಕ್ ವಾಹನದ ಸದ್ದು ಕೇಳಿಸುವಂತೆ ಹಾಗೂ ರಸ್ತೆಯಲ್ಲಿ ನಡೆಯುವಾಗ ಜಾಗೃತರಾಗಿರುವಂತೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಾಧ್ಯತೆಗಳನ್ನು ಅನ್ವೇಷಿಸುವಂತೆ ಭಾರೀ ಕೈಗಾರಿಕೆಗಳ ಇಲಾಖೆಯು ಸಂಬಂಧ ಪಟ್ಟ ಇಲಾಖೆಗಳಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಕ್ರಮವನ್ನು ಅನುಮೋದಿಸಿದರೆ, ಶಬ್ದ ಮಾಲಿನ್ಯದ ಮಿತಿಗಳನ್ನು ಗಣನೆಗೆ ತೆಗೆದುಕೊಂಡು ಎಲೆಕ್ಟ್ರಿಕ್ ವಾಹನಗಳಲ್ಲಿ ಕೃತಕ ಶಬ್ದಗಳನ್ನು ಅಳವಡಿಸಲಾಗುತ್ತದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಅನುಮೋದನೆಗೊಂಡ ನಂತರ ರಸ್ತೆಗಳಲ್ಲಿ ಸಂಚರಿಸುವ ಎಲೆಕ್ಟ್ರಿಕ್ ವಾಹನಗಳಲ್ಲಿ ಈ ವಿಧಾನವನ್ನು ಅಳವಡಿಸಿಕೊಳ್ಳಲಾಗುವುದು. ಹೊಸ ನಿಯಮಗಳಿಂದಾಗಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಶಬ್ದ ಉತ್ಪಾದಿಸುವ ಯಂತ್ರಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಗಳಿವೆ. ಧ್ವನಿಯನ್ನು ಉತ್ಪಾದಿಸುವ ಯಂತ್ರಗಳನ್ನು ಅಕೌಸ್ಟಿಕ್ ವಾಹನ ಎಚ್ಚರಿಕೆ ವ್ಯವಸ್ಥೆಗಳು (AVAS) ಎಂದು ಕರೆಯುವ ಸಾಧ್ಯತೆಗಳಿವೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಇದನ್ನು ಇಂಧನ ಚಾಲಿತ ವಾಹನಗಳಲ್ಲಿಯೂ ಸಹ ಬಳಸಲಾಗುತ್ತದೆ. ಹಿಂದಿನಿಂದ ಬರುವ ವಾಹನಗಳನ್ನು ಎಚ್ಚರಿಸಲು ಸಹ ಇದನ್ನು ಬಳಸಬಹುದು. ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿರುವ ಎಲೆಕ್ಟ್ರಿಕ್ ವಾಹನಗಳಲ್ಲಿ ಈ ಪ್ರಕ್ರಿಯೆಯನ್ನು ಈಗಾಗಲೇ ಬಳಸಲಾಗುತ್ತಿದೆ. ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳಲ್ಲಿ ಕೃತಕ ಶಬ್ದವನ್ನು ಸೇರಿಸಲು ಅಗತ್ಯವಿರುವ ಕಾನೂನುಗಳನ್ನು ಹಲವು ದೇಶಗಳು ಜಾರಿಗೊಳಿಸಿವೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಅಮೆರಿಕಾ, ಇಂಗ್ಲೆಂಡಿನಂತಹ ದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಹೊರಸೂಸುವ ಶಬ್ದಗಳಿಗೆ ಅಲ್ಲಿನ ಸರ್ಕಾರಗಳು ಈಗಾಗಲೇ ಮಾನದಂಡಗಳನ್ನು ನಿಗದಿಪಡಿಸಿವೆ. ಕೃತಕ ಶಬ್ದವನ್ನು ಸೇರಿಸಿದ ನಂತರವೂ ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ಎಂಜಿನ್ ಹೊಂದಿರುವ ವಾಹನಗಳಿಗಿಂತ ಕಡಿಮೆ ಶಬ್ದವನ್ನುಂಟು ಮಾಡುತ್ತವೆ. ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಕರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಗ್ರಾಹಕರು ವೈಯಕ್ತಿಕ ವಾಹನಗಳ ಬಳಕೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅದರಲ್ಲೂ ಎಲೆಕ್ಟ್ರಿಕ್ ವಾಹನಗಳ ಕಡೆಗೆ ವಿಶೇಷ ಆಸಕ್ತಿಯನ್ನು ತೋರುತ್ತಿದ್ದಾರೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿಯಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಪ್ರಮುಖ ಪಾತ್ರ ವಹಿಸುತ್ತಿವೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ರವರು ಕಳೆದ ವಾರ ಸಂಸತ್ತಿನಲ್ಲಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ರಾಜ್ಯಗಳ ಪಟ್ಟಿಯನ್ನು ಬಹಿರಂಗಪಡಿಸಿದರು.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಎಲೆಕ್ಟ್ರಿಕ್ ವಾಹನ ನೋಂದಣಿಯಲ್ಲಿ ಉತ್ತರ ಪ್ರದೇಶ, ದೆಹಲಿ ಹಾಗೂ ಕರ್ನಾಟಕ ರಾಜ್ಯಗಳು ಮೊದಲ ಮೂರು ಸ್ಥಾನದಲ್ಲಿವೆ. ಭಾರತದಲ್ಲಿ ಇದುವರೆಗೆ 8,70,141 ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಅಂದರೆ 2,55,700 ಯುನಿಟ್ ಎಲೆಕ್ಟ್ರಿಕ್ ವಾಹನಗಳನ್ನು ನೋಂದಾಯಿಸಲಾಗಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ದೆಹಲಿಯಲ್ಲಿ 1,25,347 ಯುನಿಟ್ ಎಲೆಕ್ಟ್ರಿಕ್ ವಾಹನಗಳು ಹಾಗೂ ಕರ್ನಾಟಕದಲ್ಲಿ 72,544 ಯುನಿಟ್‌ ಎಲೆಕ್ಟ್ರಿಕ್ ವಾಹನಗಳು ನೋಂದಣಿಯಾಗಿವೆ. ಅಗ್ರ ಐದು ರಾಜ್ಯಗಳ ಪಟ್ಟಿಯಲ್ಲಿ ಬಿಹಾರ ರಾಜ್ಯವು 58,014 ಯುನಿಟ್ ಎಲೆಕ್ಟ್ರಿಕ್ ವಾಹನಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಮಹಾರಾಷ್ಟ್ರ ರಾಜ್ಯವು 52,506 ಯುನಿಟ್ ಎಲೆಕ್ಟ್ರಿಕ್ ವಾಹನಗಳ ನೋಂದಣಿಯೊಂದಿಗೆ ಐದನೇ ಸ್ಥಾನದಲ್ಲಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಎಲೆಕ್ಟ್ರಿಕ್ ವಾಹನಗಳ ಮಾರಾಟ ಹಾಗೂ ಉತ್ಪಾದನೆಯನ್ನು ಉತ್ತೇಜಿಸುವ ಸಲುವಾಗಿ, ಕೇಂದ್ರ ಸರ್ಕಾರವು 2015ರಲ್ಲಿ ಫೇಮ್ ಯೋಜನೆಯನ್ನು ಆರಂಭಿಸಿತು. 2019ರ ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರವು ಫೇಮ್ II ಯೋಜನೆಯನ್ನು ಘೋಷಿಸುವ ಮೂಲಕ ರೂ. 10,000 ಕೋಟಿಗಳ ಹೆಚ್ಚುವರಿ ಬಜೆಟ್ ಅನ್ನು ಘೋಷಿಸಿ, ಈ ಯೋಜನೆಯನ್ನು ಐದು ವರ್ಷಗಳವರೆಗೆ ವಿಸ್ತರಿಸಿತು.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಇದಲ್ಲದೇ ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿಯನ್ನು 28% ನಿಂದ 12% ಗೆ ಇಳಿಸಲಾಗಿದೆ. ಫೇಮ್ II ಯೋಜನೆಯಡಿಯಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳ ಅಭಿವೃದ್ಧಿಯನ್ನು ಉತ್ತೇಜಿಸಲು ಚಾರ್ಜಿಂಗ್ ಮೂಲಸೌಕರ್ಯಗಳ ಮೇಲಿನ ಜಿಎಸ್‌ಟಿಯನ್ನು ಸಹ ಕಡಿಮೆ ಮಾಡಲಾಗಿದೆ. ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಉತ್ತೇಜಿಸಲು ಹಲವಾರು ರಾಜ್ಯ ಸರ್ಕಾರಗಳು ತಮ್ಮ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿವೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿಯ ಉದ್ದೇಶವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಉತ್ಪಾದನೆಯನ್ನು ಉತ್ತೇಜಿಸುವುದಾಗಿದೆ. ಎಲೆಕ್ಟ್ರಿಕ್ ವೆಹಿಕಲ್ ಪಾಲಿಸಿ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ಹಲವು ರೀತಿಯ ಸಬ್ಸಿಡಿಗಳನ್ನು ನೀಡಲಾಗುತ್ತದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿದೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಕೇಂದ್ರ ಸರ್ಕಾರವು ಮುಂಬರುವ ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಂದ ಉಂಟಾಗುವ ಮಾಲಿನ್ಯವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಇನ್ನು ಎರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನದ ಬೆಲೆ ಡೀಸೆಲ್, ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗಿರಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ರೀತಿಯಲ್ಲಿ ಶಬ್ದವನ್ನುಂಟು ಮಾಡಲಿವೆ ಎಲೆಕ್ಟ್ರಿಕ್ ವಾಹನಗಳು

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ಕ್ರಮಗಳ ನಡುವೆಯೂ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಇದಕ್ಕೆ ಪ್ರಮುಖ ಕಾರಣವೆಂದರೆ ಎಲೆಕ್ಟ್ರಿಕ್ ವಾಹನಗಳ ಬೆಲೆ. ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಿಕ್ ಕಾರುಗಳ ಹೆಚ್ಚಿನ ಬೆಲೆಗಳನ್ನು ಹೊಂದಿವೆ. ಎಲೆಕ್ಟ್ರಿಕ್ ವಾಹನಗಳ ಚಾಲನಾ ವೆಚ್ಚವು ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ತುಂಬಾ ಕಡಿಮೆಯಾಗಿದೆ.

Most Read Articles

Kannada
English summary
Electric vehicles to make sound in future details
Story first published: Tuesday, December 14, 2021, 14:04 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X