Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ
ಕುಮಪಟ್ಟಿ ಪೊಲೀಸ್ ಠಾಣೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುಥೂರ್ ಬಳಿ ಇದೆ. ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಇತ್ತೀಚೆಗೆ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಅಲ್ಲಿಗೆ ಬಂದ ದ್ವಿಚಕ್ರ ವಾಹನವೊಂದನ್ನು ತಡೆದು ತಪಾಸಣೆ ನಡೆಸಿದ್ದರು.

ಈ ವಾಹನವನ್ನು ವಿದ್ಯುತ್ ಸರಬರಾಜು ಮಂಡಳಿಯಲ್ಲಿ ಕೆಲಸ ಮಾಡುವ ಸೈಮನ್ ಎಂಬಾತ ಚಾಲನೆ ಮಾಡುತ್ತಿದ್ದ. ಈ ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ವಾಹನವನ್ನು ತಡೆದು ಸಂಬಂಧಪಟ್ಟ ದಾಖಲೆಗಳನ್ನು ತೋರಿಸುವಂತೆ ಕೇಳಿದ್ದಾರೆ. ಆದರೆ ಸೈಮನ್ ಯಾವುದೇ ದಾಖಲೆಗಳನ್ನು ತೋರಿಸಿಲ್ಲ. ಈ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಸೈಮನ್ ಪೊಲೀಸರ ಈ ಕ್ರಮದ ಬಗ್ಗೆ ತನ್ನ ಮೇಲಧಿಕಾರಿಗಳಿಗೆ ದೂರು ನೀಡಿದ್ದಾನೆ. ಆತನ ಮೇಲಾಧಿಕಾರಿಗಳು ಕುಮಪಟ್ಟಿ ಪೊಲೀಸ್ ಠಾಣೆಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಇದರಿಂದಾಗಿ ಕುಮಪಟ್ಟಿ ಪೊಲೀಸ್ ಠಾಣೆಯು ವಿದ್ಯುತ್ ಸರಬರಾಜು ಇಲ್ಲದೇ ಸುಮಾರು 2 ಗಂಟೆಗಳ ಕಾಲ ಕತ್ತಲಲ್ಲಿ ಇರುವಂತಾಗಿತ್ತು. 2 ಗಂಟೆಗಳ ನಂತರ ಮತ್ತೆ ವಿದ್ಯುತ್ ಸರಬರಾಜು ನೀಡಲಾಯಿತು. ಈ ಘಟನೆಯ ಬಗ್ಗೆ ಎಎಸ್ ಪಿ ರವರು ಎಸ್ ಪಿ ರವರಿಗೆ ದೂರು ಸಲ್ಲಿಸಿದ್ದಾರೆ.

ಎಸ್ ಪಿರವರು ಈ ಘಟನೆಯ ತನಿಖೆಯನ್ನು ಆರಂಭಿಸಿದ್ದಾರೆ. ಈ ಘಟನೆಯಿಂದಾಗಿ ಪೊಲೀಸ್ ಇಲಾಖೆ ಹಾಗೂ ವಿದ್ಯುತ್ ಇಲಾಖೆ ನೌಕರರ ನಡುವೆ ಸಂಘರ್ಷವೇರ್ಪಟ್ಟಿದೆ. ಮೂರು ಜನರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವುದು ಕಾನೂನುಬಾಹಿರವಾಗಿದೆ. ಇದು ಅಪಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಕರೋನಾ ವೈರಸ್ ವೇಗವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಮೂರು ಜನರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸಿದರೆ ಅಪಾಯದ ಸಾಧ್ಯತೆಗಳು ಹೆಚ್ಚು. ಇದನ್ನು ಪ್ರಶ್ನಿಸಿದ ಪೊಲೀಸರ ವಿರುದ್ಧವೇ ಸೇಡು ತೀರಿಸಿಕೊಳ್ಳಲು ಮುಂದಾಗಿರುವುದು ಸರಿಯಲ್ಲ.

ನ್ಯೂಸ್ 7 ತಮಿಳು ಈ ಕುರಿತು ವರದಿ ಮಾಡಿದೆ. ವಿದ್ಯುತ್ ಸರಬರಾಜು ಮಂಡಳಿಯ ಸಿಬ್ಬಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಇದೇ ರೀತಿಯ ಘಟನೆ 2019ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿತ್ತು. ಹೆಲ್ಮೆಟ್ ಧರಿಸದ ಕಾರಣ ವಿದ್ಯುತ್ ಸರಬರಾಜು ಮಂಡಳಿಯ ಉದ್ಯೋಗಿಗೆ ಪೊಲೀಸರು ದಂಡ ವಿಧಿಸಿದ್ದರು.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಇದಕ್ಕೆ ಪ್ರತೀಕಾರವಾಗಿ ವಿದ್ಯುತ್ ಸರಬರಾಜು ಮಂಡಳಿಯ ನೌಕರರು ಪೊಲೀಸ್ ಠಾಣೆಗೆ ಸುಮಾರು 4 ಗಂಟೆಗಳ ಕಾಲ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದ್ದರು. ಇದರ ಜೊತೆಗೆ ಸಂಬಂಧಪಟ್ಟ ಪೊಲೀಸ್ ಠಾಣೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿತ್ತು. ಸರ್ಕಾರಿ ನೌಕರರ ನಡುವೆ ಸಂಭವಿಸುವ ಈ ರೀತಿಯ ಘರ್ಷಣೆಗಳು ಜನರಿಗೆ ಆಘಾತವನ್ನುಂಟು ಮಾಡುತ್ತಿವೆ.