9ನೇ ವಿವಾಹ ವಾರ್ಷಿಕೋತ್ಸವಕ್ಕೆ ರೂ.2.69 ಕೋಟಿ ಬೆಲೆಯ ಕಾರು ಖರೀದಿಸಿದ 'Bangalore Days' ಚಿತ್ರದ ಜೋಡಿ

ಫಹಾದ್ ಫಾಸಿಲ್ (Fahad Faasil) ಸದ್ಯ ಸೌತ್ ಇಂಡಿಯಾ ಸಿನಿಮಾಗಳಲ್ಲಿ ಮಿಂಚುತ್ತಿರುವ ಜನಪ್ರಿಯ ನಟ. ಅವರು ಪ್ರತಿಭಾವಂತ ಕಲಾವಿದ ಎಂಬುದರಲ್ಲಿ ಅನುಮಾನವಿಲ್ಲ. ತಮ್ಮ ಪ್ರತಿಭೆ ಏನು ಎಂಬುದನ್ನು ಅವರು ಈಗಾಗಲೇ ಸಾಬೀತು ಮಾಡಿದ್ದಾರೆ. ಸಾಧಾರಣ ಪ್ರಾದೇಶಿಕ ಸಿನಿಮಾ ನಾಯಕನಾಗಿ ಅಭಿಯನ ರಂಗಕ್ಕೆ ಕಾಲಿಟ್ಟ ಫಹಾದ್‌ಗೆ ಈಗ ಕಾಲಿವುಡ್, ಟಾಲಿವುಡ್ ಸೇರಿದಂತೆ ಎಲ್ಲೆಡೆಯಿಂದ ಉತ್ತಮ ಆಫರ್​ಗಳು ಬರುತ್ತಿವೆ.

ನಟ ಫಹಾದ್ ಫಾಸಿಲ್ ಪತ್ನಿ ನಜ್ರಿಯಾ ಕೂಡ ಜನಪ್ರಿಯ ದಕ್ಷಿಣ ಭಾರತದ ನಟಿ. ದೊಡ್ಡ ಅಭಿಮಾನಿಗಳ ಬಳಗ ಹೊಂದಿರುವ ಈ ತಾರಾ ಜೋಡಿಗಳ ನಡುವೆ ಜೀವನದಲ್ಲಿ ಹೊಸ ಸಂತಸ ಮೂಡಿದೆ. ಇವರು ತಮ್ಮ ಒಂಬತ್ತನೇ ವಿವಾಹ ವಾರ್ಷಿಕೋತ್ಸವಕ್ಕೆ ಹೊಚ್ಚ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ (Land Rover Defender) ಎಸ್‍ಯುವಿಯನ್ನು ಖರೀದಿಸಿದ್ದಾರೆ. ಇವರು ಖರೀದಿಸಿದ ಲ್ಯಾಂಡ್ ರೋವರ್ ಡಿಫೆಂಡರ್‌ನಲ್ಲಿ 5.0 ಲೀಟರ್ ವಿ8 ಎಂಜಿನ್ ಅನ್ನು ಹೊಂದಿರುವ ಮಾದರಿಯಾಗಿದೆ.

Fahad Fazil and Nazriya

ನಟ ಫಹಾದ್ ಫಾಸಿಲ್ ಕೈಯಲ್ಲಿ ಅನೇಕ ಬಹುನಿರೀಕ್ಷಿತ ಸಿನಿಮಾಗಳಿವೆ. ಆ ಪೈಕಿ 'ಪುಷ್ಪ 2' ಸಿನಿಮಾ ಕೂಡ ಒಂದಾಗಿದೆ. ಈ ಚಿತ್ರದಲ್ಲಿ ಫಹಾದ್​ ಫಾಸಿಲ್​ ಅವರು ವಿಲನ್​ ಪಾತ್ರ ಮಾಡುತ್ತಿದ್ದಾರೆ. ಇತ್ತೀಚೆಗೆ ಆಗಸ್ಟ್​ 8 ರಂದು ಫಹಾದ್​ ಫಾಸಿಲ್​ ಅವರ ಜನ್ಮದಿನಕ್ಕೆ ಗಿ 'ಪುಷ್ಪ 2' ತಂಡದಿಂದ ಹೊಸ ಪೋಸ್ಟರ್​ ಬಿಡುಗಡೆ ಮಾಡಲಾಗಿತ್ತು. ಈ ಪೋಸ್ಟರ್ ಸೋಶಿಯಲ್ ಮೀಡಿಯಾಗಳಲ್ಲಿ​ ವೈರಲ್​ ಆಗಿದೆ.

ನಟ ಫಹಾದ್ ಅವರು ಹೆಚ್ಚು ಕಾರು ಕ್ರೇಜ್ ಅನ್ನು ಹೊಂದಿದ್ದಾರೆ. ಇವರು ಪೈಥಾನ್ ಗ್ರೀನ್ ಪೋರ್ಷೆ 911 ಕ್ಯಾರೆರಾ ಎಸ್, ಐಷಾರಾಮಿ ಟೊಯೊಟಾ ವೆಲ್‌ಫೈರ, ಲ್ಯಾಂಬೋರ್ಗಿನಿ ಉರಸ್, BMW 740i ಮತ್ತು ರೇಂಜ್ ರೋವರ್ ನಂತಹ ಕಾರುಗಳಿವೆ. ಇದೀಗ ಅವರ ಗ್ಯಾರೇಜ್‌ಗೆ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿ ಸೇರಿಕೊಂಡಿದೆ.

ಇನ್ನು ನಟ ಫಹಾದ್ ಫಾಸಿಲ್ ಅವರು ಚಾಕ್ಲೆಟ್ ಹೀರೋ ಆಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಫಹಾದ್ ಸಿನಿಮಾಗಳು ತಕ್ಕಮಟ್ಟಿಗೆ ಹಿಟ್ ಆದರೂ ನಟನ ಈಗಿನ ಸಿನಿಮಾ ಪ್ರಸಿದ್ಧಿಗೆ ಹೋಲಿಸಿದರೆ ಹಿಂದಿನ ಸಿನಿಮಾಗಳು ಏನೇನು ಆಗಿರಲಿಲ್ಲ. ಆದರೆ ಇತ್ತೀಚಿನ ವರ್ಷಗಳಲ್ಲಿ ಫಹಾದ್​ಗೆ ಅತ್ಯುತ್ತಮ ಸಿನಿಮಾ ಆಫರ್​ಗಳು ಬರುತ್ತಿವೆ.ಬಹಳ ಸ್ಪೆಷಲ್ ಎನ್ನುವ ಪಾತ್ರಗಳನ್ನು ಮಾಡಿ ನಟ ಈಗ ಸೌತ್ ಮತ್ತು ನಾರ್ತ್ ನಲ್ಲಿಯೂ ಪ್ರಸಿದ್ಧಿ ಗಳಿಸುತ್ತಿದ್ದಾರೆ.

ತೆಲುಗಿನ ಪುಷ್ಪ ಸಿನಿಮಾ ಹಾಗೂ ಕಾಲಿವುಡ್​ನ ವಿಕ್ರಮ್ ಸಿನಿಮಾದಲ್ಲಂತೂ ಫಹಾದ್ ನಟನೆಗೆ ಸಾಟಿಯೇ ಇಲ್ಲ. ಮೊದಲು ಬೆಂಗಳೂರು ಡೇಸ್ ಸಿನಿಮಾ ಬರುವ ತನಕ ಬಹಳಷ್ಟು ಜನರಿಗೆ ಫಹಾದ್ ಪರಿಚಯವೇ ಇರಲಿಲ್ಲ. ಆದರೆ ಆ ಸಿನಿಮಾದಿಂದ ನಟನ ಎರಡನೇ ಇನ್ನಿಂಗ್ಸ್ ಶುರುವಾಯಿತು. ನಂತರದಲ್ಲಿ ಜೋಜಿ, ಕುಂಬಳಂಗಿ ನೈಟ್ಸ್, ಸಿ ಯೂ ಸೂನ್, ತೊಂಡಿಮುದಲುಂ ದೃಕ್ಷಾಕ್ಷಿಯುಂ ಸೇರಿ ಹಲವು ಸಿನಿಮಾಗಳ ಮೂಲಕ ಫಹಾದ್ ಹೆಚ್ಚಿನ ಜನಪ್ರಿಯತೆ ಗಳಿಸಿದರು.

ನಂತರದಲ್ಲಿ ನಟನಿಗೆ ಪುಷ್ಪಾ, ವಿಕ್ರಮ್​ನಂತಹ ದೊಡ್ಡ ದೊಡ್ಡ ಪ್ರಾಜೆಕ್ಟ್​ಗಳು ಲಭಿಸಿದವು. ನಟ ಫಹಾದ್ ಫಾಸಿಲ್ ಖರೀದಿಸಿದ ಹೊಸ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿಯಲ್ಲಿ 5.0-ಲೀಟರ್ ಪೆಟ್ರೋಲ್ ವಿ8 ಎಂಜಿನ್ ಅನು ಹೊಂದಿದೆ. ಈ ಎಂಜಿನ್ 518 bhp ಪವರ್ ಮತ್ತು 625 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಡಿಫೆಂಡರ್ ಆಲ್-ವೀಲ್ ಡ್ರೈವ್ ಸಿಸ್ಟಮ್‌ನೊಂದಿಗೆ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ .

ಲ್ಯಾಂಡ್ ರೋವರ್ ಡಿಫೆಂಡರ್ ಎಸ್‍ಯುವಿ ಕೇವಲ ಎಂಟು ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್‌ನಲ್ಲಿ 5-ಸ್ಟಾರ್ ಸುರಕ್ಷತಾ ರೇಟಿಂಗ್‌ನೊಂದಿಗೆ ಹಿಂತಿರುಗಿದ ಲ್ಯಾಂಡ್ ರೋವರ್ ಡಿಫೆಂಡರ್ ಆರು ಏರ್‌ಬ್ಯಾಗ್‌ಗಳು, ಎಬಿಎಸ್, ಬ್ರೇಕ್ ಅಸಿಸ್ಟ್, ಪವರ್ ಡೋರ್ ಲಾಕ್, ಚೈಲ್ಡ್ ಸೇಫ್ಟಿ ಲಾಕ್‌ಗಳು, ಆಂಟಿ-ಥೆಫ್ಟ್ ಅಲಾರ್ಮ್, ಟೈರ್ ಪ್ರೆಶರ್ ಮಾನಿಟರ್ ಸಿಸ್ಟಮ್, ಕ್ರ್ಯಾಶ್‌ನಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, August 22, 2023, 14:29 [IST]
English summary
Fahad fazil and nazriya nazim bought new land rover defender details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+