ಬಿಜೆಪಿಯ ಭವಿಷ್ಯದ ನಾಯಕಿ.. 37ನೇ ವರ್ಷಕ್ಕೆ ಎಂಪಿಯಾದ ಖ್ಯಾತ ನಟಿ, ಐಷಾರಾಮಿ ಕಾರುಗಳ ಒಡತಿ!

ಬಾಲಿವುಡ್ ಖ್ಯಾತ ನಟಿ ಕಂಗನಾ ರನೌತ್ (Kangana Ranaut) ತಮ್ಮ ಅದ್ಬುತ ನಟನೆಯ ಮೂಲಕ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, ಮೊದಲ ಪ್ರಯತ್ನದಲ್ಲಿಯೇ 74,755 ಮತಗಳ ಅಂತರದಿಂದ ಜಯಗಳಿಸಿ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಕಂಗನಾ ರನೌತ್ ಒಟ್ಟು 5,37,022 ಮತಗಳನ್ನು ಪಡೆದಿದ್ದು, ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ವಿಕ್ರಮಾದಿತ್ಯ ಸಿಂಗ್ 4,62,267 ಮತಗಳನ್ನು ಗಳಿಸಿದ್ದಾರೆ. ನಟಿ ಕಂಗನಾಗೆ ಕಾರುಗಳ ಮೇಲೂ ವಿಶೇಷ ಪ್ರೀತಿಯಿದ್ದು, ಹಲವು ಐಷಾರಾಮಿ ಸೆಡಾನ್ ಹಾಗೂ ಎಸ್‌ಯುವಿಗಳ ಒಡತಿ ಕೂಡ ಆಗಿದ್ದಾರೆ.

ಮೊದಲಿಗೆ ನಟಿ ಕಂಗನಾ ರನೌತ್ ಅವರ ಮರ್ಸಿಡಿಸ್ ಮೇಬ್ಯಾಕ್ ಎಸ್-ಕ್ಲಾಸ್ ಎಸ್680 (Mercedes Maybach S-Class S680) ಕಾರಿನ ಬಗ್ಗೆ ಮಾತನಾಡೋಣ. ಈ ಸೆಡಾನ್ ರೂ.3.43 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದ್ದು, 5980 ಸಿಸಿ ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 603.46 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 900 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ.

Famous Actress And New Bjp Mp Kangana Ranaut Cars Collection

ಈ ಮೇಬ್ಯಾಕ್ ಎಸ್-ಕ್ಲಾಸ್ ಎಸ್680 ಸೆಡಾನ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಟಚ್ ಸ್ಕ್ರೀನ್, ಆಟೋಮೇಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಬಟನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದು ಮಾತ್ರವಲ್ಲದೆ, ಕಳೆದ ಏಪ್ರಿಲ್‌ನಲ್ಲಿ ನಟಿ ಕಂಗನಾ ರನೌತ್ ದುಬಾರಿ ಬೆಲೆಯ ಹೊಚ್ಚ ಹೊಸ ಐಷಾರಾಮಿ ಮರ್ಸಿಡಿಸ್-ಮೇಬ್ಯಾಕ್ ಜಿಎಲ್ಎಸ್600 ಎಸ್‌ಯುವಿಯನ್ನು ಖರೀದಿಸಿದ್ದಾರೆ ಎಂದು ವರದಿಯಾಗಿತ್ತು.

ನಟಿ ಕಂಗನಾ ಬಿಎಂಡಬ್ಲ್ಯೂ 7-ಸೀರಿಯಸ್ 730ಎಲ್‌ಡಿ (BMW 7-series 730LD) ಕಾರಿನ ಒಡತಿಯೂ ಆಗಿದ್ದಾರೆ. ಪ್ರಸ್ತುತ ಈ ಸೆಡಾನ್ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ. ಇದು ರೂ.1.45 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿತ್ತು. 3.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನೊಂದಿಗೆ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿಯೂ ಗ್ರಾಹಕರಿಗೆ ಸಿಗುತ್ತಿತ್ತು

Famous Actress And New Bjp Mp Kangana Ranaut Cars Collection

ಮರ್ಸಿಡಿಸ್ ಬೆಂಜ್ ಜಿಎಲ್ಇ 350ಡಿ (Mercedes Benz GLE 350d) ಕಾರಿಗೂ ಕಂಗನಾ ಮಾಲೀಕರಾಗಿದ್ದಾರೆ. ಇದು ಹಳೆಯ ತಲೆಮಾರಿನ ಎಸ್‌ಯುವಿಯಾಗಿದೆ. ನೂತನ ಬೆಂಜ್ ಜಿಎಲ್ಇ ಮಾದರಿಗಳು ರೂ.96.65 ಲಕ್ಷದಿಂದ ರೂ.1.10 ಕೋಟಿ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿವೆ.

ನೂತನ ಮರ್ಸಿಡಿಸ್ ಬೆಂಜ್ ಜಿಎಲ್ಇ ಎಸ್‌ಯುವಿಗಳು 12.3-ಇಂಚಿನ ಡುಯಲ್ ಡಿಸ್ಪ್ಲೇಗಳು, 4-ಜೋನ್ ಕ್ಲೇಮೇಟ್ ಕಂಟ್ರೋಲ್, ಹೆಡ್ಸ್-ಅಪ್ ಡಿಸ್ಪ್ಲೇ, 590ಡಬ್ಲ್ಯೂ 13-ಸ್ಪೀಕರ್ ಬರ್ಮೆಸ್ಟರ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸುರಕ್ಷತೆಯ ದೃಷ್ಟಿಯಿಂದ 9 ಏರ್‌ಬ್ಯಾಗ್‌, 360-ಡಿಗ್ರಿ ಕ್ಯಾಮೆರಾ ಹಾಗೂ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿವೆ.

Famous Actress And New Bjp Mp Kangana Ranaut Cars Collection

ನಟಿ ಕಂಗನಾ ರನೌತ್ ಆಡಿ ಕ್ಯೂ3 (Audi Q3) ಕಾರನ್ನು ಹೊಂದಿದ್ದಾರೆ. ಆದರೆ, ಈ ಎಸ್‌ಯುವಿಯು ಹಳೆಯ ತಲೆಮಾರಿಗೆ ಸೇರಿದೆ. ನೂತನ ಆಡಿ ಕ್ಯೂ3 ಮಾದರಿಯು ರೂ.43.81 ಲಕ್ಷದಿಂದ ರೂ.54.65 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, June 5, 2024, 16:53 [IST]
English summary
Actress new bjp mp kangana ranaut cars collection mercedes audi to bmw
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+