Abhaya Hiranmayi: ಯಾವ ಸ್ಟಾರ್‌ಗಳಿಗೂ ಕಮ್ಮಿಯಿಲ್ಲ ಈ ಗಾಯಕಿ.. 5 ಸ್ಟಾರ್ ಸೇಫ್ಟಿ ಪೋಕ್ಸ್‌ವ್ಯಾಗನ್ ಕಾರು ಖರೀದಿ

ಅಭಯಾ ಹಿರಣ್ಮಯಿ (Abhaya Hiranmayi) ಮಲಯಾಳಂ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಖ್ಯಾತ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದು, ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೀಗ, ಸುರಕ್ಷತೆಗೆ ಹೆಸರುವಾಸಿಯಾಗಿರುವ 5 ಸ್ಟಾರ್ ಸೇಫ್ಟಿ ಪೋಕ್ಸ್‌ವ್ಯಾಗನ್ ಟೈಗನ್ (Volkswagen Taigun) ಎಸ್‌ಯುವಿಯನ್ನು ಖರೀದಿಸಿದ್ದಾರೆ.

ಕೊಚ್ಚಿಯ ಪೋಕ್ಸ್‌ವ್ಯಾಗನ್ ಶೋರೂಂನಲ್ಲಿ ಗಾಯಕಿ ಅಭಯಾ ಹಿರಣ್ಮಯಿ ಹೊಚ್ಚ ಹೊಸ ಪೋಕ್ಸ್‌ವ್ಯಾಗನ್ ಟೈಗನ್ ಕಾರನ್ನು ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ಡೀಲರ್‌ಶಿಪ್, ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದೆ. ಅಭಯಾ ಹಿರಣ್ಮಯಿಗೆ ಶೋರೂಂನಲ್ಲಿ ಸಿಬ್ಬಂದಿ ಎಸ್‌ಯುವಿ ಕೀಲಿಯನ್ನು ಹಸ್ತಾಂತರಿಸುತ್ತಿದ್ದು, ಆಕೆ ಕಾರನ್ನು ಓಡಿಸಿಕೊಂಡು ಹೋಗುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

Abhaya Hiranmayi: ಯಾವ ಸ್ಟಾರ್‌ಗಳಿಗೂ ಕಮ್ಮಿಯಿಲ್ಲ ಈ ಗಾಯಕಿ.. 5 ಸ್ಟಾರ್ ಸೇಫ್ಟಿ ಪೋಕ್ಸ್‌ವ್ಯಾಗನ್ ಕಾರು ಖರೀದಿ

ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಪೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ, ರೂಪಾಂತರಗಳಿಗೆ ಅನುಗುಣವಾಗಿ ರೂ.11.62 ಲಕ್ಷದಿಂದ ರೂ.19.46 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಡೈನಾಮಿಕ್ ಲೈನ್, ಪರ್ಫಾರ್ಮೆನ್ಸ್ ಲೈನ್ ಎಂಬ ಎರಡು ರೂಪಾಂತರ ಹಾಗೂ ಲಾವಾ ಬ್ಲೂ, ಕರ್ಕುಮಾ ಯೆಲ್ಲೋ, ವೈಲ್ಡ್ ಚೆರ್ರಿ ರೆಡ್, ಕ್ಯಾಂಡಿ ವೈಟ್ ಸೇರಿದಂತೆ 8 ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ.

ಪೋಕ್ಸ್‌ವ್ಯಾಗನ್ ಟೈಗನ್ ಪವರ್‌ಟ್ರೇನ್ ವಿಚಾರವಾಗಿ ಮಾತನಾಡುವುದಾದರೆ, ಇದರ 1 - ಲೀಟರ್ ಪೆಟ್ರೋಲ್ ಎಂಜಿನ್ 115 PS ಗರಿಷ್ಠ ಪವರ್ ಹಾಗೂ 178 Nm ಪೀಕ್ ಟಾರ್ಕ್, ಮತ್ತೊಂದು 1.5 - ಲೀಟರ್ ಪೆಟ್ರೋಲ್ ಎಂಜಿನ್ 150 PS ಪವರ್, 250 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ.

Abhaya Hiranmayi: ಯಾವ ಸ್ಟಾರ್‌ಗಳಿಗೂ ಕಮ್ಮಿಯಿಲ್ಲ ಈ ಗಾಯಕಿ.. 5 ಸ್ಟಾರ್ ಸೇಫ್ಟಿ ಪೋಕ್ಸ್‌ವ್ಯಾಗನ್ ಕಾರು ಖರೀದಿ

ಈ ಕಾರು, ರೂಪಾಂತರಗಳ ಅನ್ವಯ 6 - ಸ್ವೀಡ್ ಮ್ಯಾನುವಲ್ ಹಾಗೂ 7 - ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುತ್ತದೆ . 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 17.88 - 20.08 kmpl ಮೈಲೇಜ್ ನೀಡುತ್ತದೆ. 5 ಆಸನ ವ್ಯವಸ್ಥೆಯಲ್ಲಿ ಲಭ್ಯವಿದ್ದು, 385 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಒಳಗೊಂಡಿದೆ.

ಪೋಕ್ಸ್‌ವ್ಯಾಗನ್ ಟೈಗನ್ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. 10.1 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟ್ದ್ ಕಾರ್ ಟೆಕ್, 8 - ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸಬ್ ವೂಫರ್ & ಆಂಪ್ಲಿಫೈಯರ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಆಂಬಿಯೆಂಟ್ ಲೈಟಿಂಗ್, ಸಿಂಗಲ್ ಪೇನ್ ಸನ್‌ರೂಫ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ.

ಸುರಕ್ಷತೆಯ ದೃಷ್ಟಿಯಿಂದಲೂ ಪೋಕ್ಸ್‌ವ್ಯಾಗನ್ ಟೈಗನ್ ಅತ್ಯುತ್ತಮವಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ವ್ಯೂ ಕ್ಯಾಮೆರಾ, ಸೀಟ್ ಬೆಲ್ಟ್ ರಿಮೈಂಡರ್‌ ಅನ್ನು ಹೊಂದಿದೆ. ಈ ಕಾರಿಗೆ ಹುಂಡೈ ಕ್ರೆಟಾ, ಮಾರುತಿ ಗ್ರಾಂಡ್ ವಿಟಾರಾ, ಕಿಯಾ ಸೆಲ್ಟೋಸ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, December 12, 2023, 17:30 [IST]
English summary
Famous singer abhaya hiranmayi buy 5 star safety volkswagen taigun suv
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+