ದುಬಾರಿ ಬೆಲೆಯ ಕಾರನ್ನು ಖರೀದಿಸಿದ ಖ್ಯಾತ ಗಾಯಕ.. ಹಾಡುಗಾರಿಕೆಗೆ ಮನಸೋತ ಶೋರೂಂ ಸಿಬ್ಬಂದಿ!

ಜನಪ್ರಿಯ ಗಾಯಕರಾಗಿ ಎಂ.ಜಿ.ಶ್ರೀಕುಮಾರ್ (MG Sreekumar) ಗುರುತಿಸಿಕೊಂಡಿದ್ದಾರೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಮಲಯಾಳಂ, ತಮಿಳು ಹಾಗೂ ಹಿಂದಿ ಸಿನಿಮಾಗಳ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಕನ್ನಡದ ಚಿತ್ರವನ್ನು ಹಾಡಿದ್ದಾರೆ. ಇತ್ತೀಚೆಗೆ ಹೊಚ್ಚ ಹೊಸ ಮರ್ಸಿಡಿಸ್-ಬೆಂಜ್ ಇ-ಕ್ಲಾಸ್ (Mercedes-Benz E-Class) ಸೆಡಾನ್‌ನ್ನು ಖರೀದಿ ಮಾಡುತ್ತಿದ್ದಾರೆ. ನೂತನ ಕಾರನ್ನು ವಿತರಣೆ ತೆಗೆದುಕೊಳ್ಳಲು ಹೋದಾಗ ಶೋರೂಂ ಸಿಬ್ಬಂದಿ ಮನವಿ ಮೇರೆಗೆ ಹಾಡೊಂದನ್ನು ಹೇಳಿದ್ದಾರೆ. ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚಿದ್ದಾರೆ.

ಮರ್ಸಿಡಿಸ್-ಬೆಂಜ್ ಇ-ಕ್ಲಾಸ್ ವಿಶೇಷತೆಗಳೇನು:

ಇದೊಂದು ಜನಪ್ರಿಯ ಸೆಡಾನ್ ಆಗಿದ್ದು, ದುಬಾರಿ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.78.5 ಲಕ್ಷ ಹಾಗೂ ಗರಿಷ್ಠ ರೂ.91.7 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ 200, ಇ 220ಡಿ ಮತ್ತು ಇ 450 ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Famous Singer Buys Mercedes-Benz E-Class Sedan Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರನ್ನು ಸೆಳೆಯುತ್ತದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಸ್ಪ್ಲಿಟ್ 3ಡಿ-ಎಫೆಕ್ಟ್ ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 18 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹೈಟೆಕ್ ಸಿಲ್ವರ್, ಗ್ರ್ಯಾಫೈಟ್ ಗ್ರೇ, ಒಬ್ಸಿಡಿಯನ್ ಬ್ಲ್ಯಾಕ್, ಪೋಲಾರ್ ವೈಟ್, ನಾಟಿಕ್ ಬ್ಲೂ ಮತ್ತು ವರ್ಡೆ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಮರ್ಸಿಡಿಸ್-ಬೆಂಜ್ ಇ-ಕ್ಲಾಸ್ ಸೆಡಾನ್ ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,949 ಎಂಎಂ ಉದ್ದ, 1,880 ಎಂಎಂ ಅಗಲ ಮತ್ತು 1,468 ಎಂಎಂ ಎತ್ತರವಿದೆ. ಜೊತೆಗಿದು 183 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,961 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,960 ಕೆಜಿ ತೂಕವಿದೆ.

ಇದು 5 ಆಸನ ಆಯ್ಕೆ ವ್ಯವಸ್ಥೆಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 540 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಕಾರು ಶಕ್ತಿಯುತವಾದ 3 ಪವರ್‌ಟ್ರೇನ್‌ ಆಯ್ಕೆಯನ್ನು ಒಳಗೊಂಡಿದೆ. 2.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 2.0 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಹಾಗೂ 3.0 ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 9-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಹೊಸ ಮರ್ಸಿಡಿಸ್-ಬೆಂಜ್ ಇ-ಕ್ಲಾಸ್ ಸೆಡಾನ್ ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 12 ರಿಂದ 15 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 80 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 238 ಕೆಎಂಪಿಹೆಚ್ ಸ್ಪೀಡ್‌ನ್ನು ಹೊಂದಿದೆ. ಕೇವಲ 7.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. ದೊಡ್ಡ ಗಾತ್ರದ ಎಂಬಿಯುಎಕ್ಸ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಪಲ್ ಕಾರ್‌ಪ್ಲೇ, ಆಂಡ್ರಾಯ್ಡ್ ಆಟೋ, ವೈರ್‌ಲೆಸ್ ಚಾರ್ಜಿಂಗ್ ಪ್ಯಾಡ್, ತ್ರಿ-ಜೋನ್ ಕ್ಲೇಮೇಟ್ ಕಂಟ್ರೋಲ್, ವಾಯ್ಸ್ ಕಂಟ್ರೋಲ್, ಸನ್‌ರೂಫ್ ಹಾಗೂ ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಹೊಂದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮಲ್ಟಿಪಲ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಒಳಗೊಂಡಂತೆ ಹಲವು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

More from DriveSpark

Article Published On: Monday, September 29, 2025, 14:11 [IST]
English summary
Famous singer buys mercedes benz e class sedan details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+