ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ವಿಶ್ವದಲ್ಲೇ ಅತಿ ಹೆಚ್ಚು ರಸ್ತೆ ಅಪಘಾತಗಳು ಭಾರತದಲ್ಲಿ ಸಂಭವಿಸುತ್ತವೆ. ಪ್ರತಿ ವರ್ಷ ಭಾರತದಲ್ಲಿ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಕುಡಿದು ವಾಹನ ಚಾಲನೆ ಮಾಡುವುದು ಸೇರಿದಂತೆ ಇನ್ನಿತರ ಸಂಚಾರಿ ನಿಯಮ ಉಲ್ಲಂಘನೆಗಳು ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿವೆ.

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಇದಲ್ಲದೆ ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು ಸಹ ರಸ್ತೆ ಅಪಘಾತಗಳಿಗೆ ಹಾಗೂ ಸಾವುನೋವುಗಳಿಗೆ ಪ್ರಮುಖ ಕಾರಣವಾಗುತ್ತಿದೆ. ಸೂಪರ್ ಕಾರುಗಳನ್ನು ಹಾಗೂ ಸ್ಪೋರ್ಟ್ಸ್ ಕಾರುಗಳನ್ನು ಕೆಲ ಚಾಲಕರು ಅಜಾಗರೂಕತೆಯಿಂದ ಚಾಲನೆ ಮಾಡಿ ಅಪಘಾತಗಳಿಗೆ ಕಾರಣರಾಗುತ್ತಿದ್ದಾರೆ. ಈ ಹಿಂದೆ ಭಾರತದಲ್ಲಿ ಸೂಪರ್ ಕಾರುಗಳು ಅಪರೂಪವಾಗಿದ್ದವು.

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಆದರೆ ಈಗ ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಹಾಗೂ ದೆಹಲಿಯಂತಹ ದೊಡ್ಡ ನಗರಗಳಲ್ಲಿ ಈ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿವೆ. ಈ ಕಾರುಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿ ಸಾಹಸಗಳಿಗೆ ಬಳಸುತ್ತಿರುವ ಕಾರಣ ಅಪಘಾತಗಳಾಗುತ್ತಿವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಕಳೆದ ಭಾನುವಾರ ಇದೇ ರೀತಿಯ ದುರಂತವೊಂದು ಹೈದರಾಬಾದ್ ನಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಐಷಾರಾಮಿ ಸ್ಪೋರ್ಟ್ಸ್ ಕಾರು ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕಾರನ್ನು ಅತಿ ವೇಗದಲ್ಲಿ ಚಾಲನೆ ಮಾಡಿದ್ದೇ ಈ ದುರಂತಕ್ಕೆ ಕಾರಣವೆಂದು ಹೇಳಲಾಗಿದೆ.

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಕಾರು ಚಾಲಕನು ಕಾರನ್ನು ಅಜಾಗರೂಕತೆಯಿಂದ ಚಾಲನೆ ಮಾಡಿದ್ದಾನೆ ಎಂಬ ಆರೋಪವೂ ಇದೆ. ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಯೇಸು ಬಾಬು ಎಂದು ಗುರುತಿಸಲಾಗಿದೆ. ಅವರು ಹೈದರಾಬಾದ್‌ನ ಮಾಧಾಪುರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ನವೀನ್ ಕುಮಾರ್ ಚಾಲನೆ ಮಾಡುತ್ತಿದ್ದ ಐಷಾರಾಮಿ ಫೆರಾರಿ ಸ್ಪೋರ್ಟ್ಸ್ ಕಾರು ಯೇಸು ಬಾಬುಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣನಾದ ನವೀನ್ ಕುಮಾರ್ ಮಾಧಾಪುರದಿಂದ ಜುಬಿಲಿ ಹಿಲ್ಸ್ ಗೆ ತೆರಳುತ್ತಿದ್ದ. ಯೇಸು ಬಾಬು ಈ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತದೇಹವನ್ನು ಶವಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅಪಘಾತಕ್ಕೆ ಕಾರಣವಾದ ಫೆರಾರಿ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರು ಚಾಲಕ ನವೀನ್ ಕುಮಾರ್ ನನ್ನು ಬಂಧಿಸಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಪೊಲೀಸರು ಆತನ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಅಪಘಾತದಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಭಾರತದ ಸೂಪರ್ ಕಾರುಗಳ ಮಾಲೀಕರು ಆಯಾ ರಸ್ತೆಗಳ ವೇಗದ ಮಿತಿಯನ್ನು ಅನುಸರಿಸಿ ಕಾರು ಚಾಲನೆ ಮಾಡುವ ಬದಲು ಅತಿ ವೇಗವಾಗಿ ಚಾಲನೆ ಮಾಡುತ್ತಿರುವುದು ಈ ರೀತಿಯ ಘಟನೆಗಳಿಗೆ ಕಾರಣವಾಗುತ್ತಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಸೆಕ್ಯೂರಿಟಿ ಗಾರ್ಡ್ ಜೀವ ತೆಗೆದ ಐಷಾರಾಮಿ ಸ್ಪೋರ್ಟ್ಸ್ ಕಾರು

ಬಹು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಖರೀದಿಸುವ ಕಾರುಗಳ ಪರ್ಫಾಮೆನ್ಸ್ ಪರೀಕ್ಷಿಸಲು ರೇಸ್ ಟ್ರ್ಯಾಕ್‌ಗಳಲ್ಲಿ ಚಾಲನೆ ಮಾಡಿದರೆ ಒಳಿತು. ಅದನ್ನು ಬಿಟ್ಟು, ಸಾರ್ವಜನಿಕ ರಸ್ತೆಗಳಲ್ಲಿ ಅತಿ ವೇಗದಲ್ಲಿ ಸಾಗುವುದು ಅಪಾಯಕ್ಕೆ ದಾರಿ ಮಾಡುತ್ತದೆ.

Most Read Articles
 

Kannada
English summary
Ferrari sports car with over speed kills security guard. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X