ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಸಂಚಾರ ನಿಯಮಗಳ ಉಲ್ಲಂಘನೆಯೇ ಅಪಘಾತಗಳಿಗೆ ಪ್ರಮುಖ ಕಾರಣ. ಭಾರತದಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗೆ ಯಾವುದೇ ಕೊರತೆಯಿಲ್ಲ. ಸಂಚಾರ ಉಲ್ಲಂಘನೆಯಿಲ್ಲದ ರಸ್ತೆಗಳೇ ಭಾರತದಲ್ಲಿ ಇಲ್ಲವೆಂದು ಹೇಳಬಹುದು.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಈ ಕಾರಣಕ್ಕಾಗಿಯೇ ಅತಿ ಹೆಚ್ಚು ಅಪಘಾತಗಳು ಸಂಭವಿಸುವ ದೇಶಗಳ ಪಟ್ಟಿಯಲ್ಲಿ ಭಾರತವೂ ಸಹ ಸ್ಥಾನ ಪಡೆದಿದೆ. ಅಪಘಾತಗಳ ಪ್ರಮಾಣವನ್ನು ಕಡಿಮೆಗೊಳಿಸಲು ಹಳೆ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರನ್ವಯ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರಿ ಪ್ರಮಾಣದ ದಂಡ ವಿಧಿಸಲಾಗುತ್ತದೆ.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಆದರೂ ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸುತ್ತಿಲ್ಲ. ಪೊಲೀಸರು ಸಹ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುತ್ತಿದ್ದಾರೆ. ಸಿಸಿಟಿವಿ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತಿದ್ದಾರೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಇದೇ ರೀತಿಯ ಘಟನೆಯೊಂದು ಇತ್ತೀಚಿಗೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳ ಆಧಾರದ ಮೇಲೆ ಪೊಲೀಸರು ಐವರು ಯುವಕರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಈ ಘಟನೆ ದೇಶದ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ದೆಹಲಿ ಪೊಲೀಸರು ಇತ್ತೀಚೆಗೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರ ಅಂಗವಾಗಿ ಸಿಸಿಟಿವಿ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳ ಬಗ್ಗೆಯೂ ಗಮನ ಹರಿಸುತ್ತಿದ್ದಾರೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಈ ಐವರು ಯುವಕರು ಸಹ ಇದೇ ರೀತಿ ಸಿಕ್ಕಿಬಿದ್ದಿದ್ದಾರೆ. ಇವರೆಲ್ಲರೂ ಸಾರ್ವಜನಿಕವಾಗಿ ತಮ್ಮ ವಾಹನಗಳಲ್ಲಿ ಸ್ಟಂಟ್ ಮಾಡಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ಗಳಿಗೆ ಹಲವಾರು ಜನ ಲೈಕ್ ಸೂಚಿಸಿದ್ದರು. ಈ ವೀಡಿಯೊಗಳು ವೈರಲ್ ಆಗಿ ದೆಹಲಿ ಪೊಲೀಸರ ಗಮನಕ್ಕೂ ಬಂದಿವೆ.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಇದರ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಎಲ್ಲಾ ಯುವಕರನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರನ್ನು ಸೋನು ಕಶ್ಯಪ್, ಕಮಲ್, ಪವನ್, ಸಚಿನ್ ಹಾಗೂ ವಿಪುಲ್ ಶರ್ಮಾ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದೆಹಲಿಯ ನಿವಾಸಿಗಳು ಎಂದು ತಿಳಿದು ಬಂದಿದೆ.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಈ ಐದು ಜನ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸ್ಟಂಟ್ ಮಾಡಿದ್ದಾರೆ. ಬೈಕ್ ಚಾಲನೆ ಮಾಡುತ್ತಾ ವಿವಿಧ ಸ್ಟಂಟ್ ಗಳನ್ನು ಮಾಡಿದ್ದಾರೆ. ಜೊತೆಗೆ ಟ್ರಿಪಲ್ ರೈಡಿಂಗ್ ಮಾಡಿದ್ದಾರೆ. ಹೆಲ್ಮೆಟ್ ಸಹ ಧರಿಸಿರಲಿಲ್ಲ.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಈ ಎಲ್ಲಾ ನಿಯಮಗಳ ಉಲ್ಲಂಘನೆಗಾಗಿ ಪೊಲೀಸರು ಈ ಐವರನ್ನು ಬಂಧಿಸಿ, ಸ್ಟಂಟ್‌ ಮಾಡಲು ಬಳಸಿದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಐವರು ಸ್ಟಂಟ್ ಮಾಡುತ್ತಿರುವ ವೀಡಿಯೊವನ್ನು ಅವರ ಸ್ನೇಹಿತನೊಬ್ಬ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾನೆ. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ವೆಹಿಕಲ್ ಸ್ಟಂಟ್ ಒಂದು ಸಾಹಸಮಯ ಕ್ರಿಯೆ. ಇದೇ ಉದ್ದೇಶಕ್ಕಾಗಿ ಸ್ಥಾಪಿಸಲಾದ ಖಾಸಗಿ ರೇಸಿಂಗ್ ಟ್ರ್ಯಾಕ್‌ಗಳಲ್ಲಿ ಸ್ಟಂಟ್ ಮಾಡಿದರೆ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ. ಆದರೆ ಸಾರ್ವಜನಿಕ ರಸ್ತೆಗಳಲ್ಲಿ ಸ್ಟಂಟ್ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುವುದು ಖಚಿತ.

ಲೈಕ್ ಗಿಟ್ಟಿಸಲು ಹೋಗಿ ಲಾಕ್ ಆದ ಯುವಕರು

ಭಾರೀ ಪ್ರಮಾಣದ ದಂಡ ವಿಧಿಸುವುದರ ಜೊತೆಗೆ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ. ಈ ರೀತಿಯ ಸ್ಟಂಟ್ ಗಳು ಅವರಿಗೆ ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವ ಇತರರ ಪ್ರಾಣಕ್ಕೂ ಸಂಚಕಾರ ತರುತ್ತವೆ.

Most Read Articles

Kannada
English summary
Five youngsters arrested for performing stunts in public road. Read in Kannada.
Story first published: Tuesday, September 22, 2020, 8:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X