ಹೊಸ MG ಎಲೆಕ್ಟ್ರಿಕ್ ಕಾರು ಖರೀದಿಸಿದ ಭಾರತದ ಮಾಜಿ ಕ್ರಿಕೆಟಿಗ
ವಾಹನಗಳ ಬಗ್ಗೆ ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಸಿನಿಮಾ ಸೆಲಬ್ರಿಟಿಗಳಂತೆ ಕ್ರಿಕೆಟಿಗರಿಗೂ ಕೂಡ ಈ ಕ್ರೇಜ್ ಸ್ವಲ್ಪ ಹೆಚ್ಚು ಇರುತ್ತದೆ. ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಮಾರುಕಟ್ಟೆಗೆ ಲಗ್ಗೆ ಇಡುವ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸುತ್ತಾರೆ.
ಭಾರತೀಯ ಕ್ರಿಕೆಟ್ ನಿರೂಪಕ ಮತ್ತು ಮಾಜಿ ಕ್ರಿಕೆಟಿಗ ಮುರಳಿ ಕಾರ್ತಿಕ್ ಇತ್ತೀಚೆಗೆ ಹೊಸ ಎಂಜಿ ZS ಎಲೆಕ್ಟ್ರಿಕ್ ಎಸ್‍ಯುವಿಯನ್ನು ಖರೀದಿಸಿದ್ದಾರೆ. ಮುರಳಿ ಕಾರ್ತಿಕ್ ತಮ್ಮ ಹೊಸ ಎಂಜಿ ZS ಎಲೆಕ್ಟ್ರಿಕ್ ಕಾರಿನ ಚಿತ್ರವನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ.ಈ ಹೊಸ ಎಂಜಿ ZS ಎಲೆಕ್ಟ್ರಿಕ್ ಎಸ್‍ಯುವಿ ಪ್ರಸ್ತುತ ಭಾರತದಲ್ಲಿ ಮಾರಾಟದಲ್ಲಿರುವ ಅತ್ಯುತ್ತಮ ಎಲೆಕ್ಟ್ರಿಕ್ ವಾಹನಗಳಲ್ಲಿ ಒಂದಾಗಿದೆ ಮತ್ತು ದೇಶಾದ್ಯಂತ ಇದು ಉತ್ತಮ ಪ್ರಮಾಣದಲ್ಲಿ ಮಾರಾಟ ಆಗುತ್ತಿದೆ.

ಈ ಹೊಸ ಎಂಜಿ ZS ಎಲೆಕ್ಟ್ರಿಕ್ ಎಸ್‍ಯುವಿಗೆ ಎಕ್ಸ್ ಶೋರೂಂ ಪ್ರಕಾರ ರೂ. 22.98 ಲಕ್ಷದಿಂದ ರೂ. 27.00 ಲಕ್ಷದವರೆಗಿನ ಬೆಲೆಯಲ್ಲಿ ಮಾರಾಟವಾಗುತ್ತಿದೆ, ಮಾಜಿ ಕ್ರಿಕೆಟಿಗ ಮುರಳಿ ಕಾರ್ತಿಕ್ ಅವರು Instagram ನಲ್ಲಿ ಹಂಚಿಕೊಂಡ ಚಿತ್ರದ ಕೆಳಗೆ, MG ZS EV ಯೊಂದಿಗೆ ನನ್ನ #ChangeWhatYouCan ಪ್ರಯಾಣವನ್ನು ಪ್ರಾರಂಭಿಸಲು ಸಂತೋಷವಾಗಿದೆ! ಕೆಲವು ಎಲೆಕ್ಟ್ರಿಫೈಯಿಂಗ್ ಡ್ರೈವ್ ಗಳು ಮತ್ತು ಸ್ಮರಣೀಯ ಪ್ರಯಾಣಕ್ಕಾಗಿ ಎದುರುನೋಡುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ಎಂಜಿ ZS ಎಲೆಕ್ಟ್ರಿಕ್ ಎಸ್‍ಯುವಿಯ ಫೇಸ್‌ಲಿಫ್ಟೆಡ್ ಮಾದರಿಯನ್ನು ಎಂಜಿ ಮೋಟಾರ್ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸಿದೆ. ಎಂಜಿ ಮೋಟಾರ್ ಕಂಪನಿಯು ಫುಲ್ ಎಲ್‌ಇಡಿ ಯುನಿಟ್ ಹೊಂದಿರುವ ಹ್ವಾಕ್ ಐ ಹೆಡ್‌ಲ್ಯಾಂಪ್, ಎಲ್ಇಡಿ ಟೈಲ್ ಲೈಟ್ಸ್, ಎಲ್ಇಡಿ ಟರ್ನ್ ಇಂಡಿಕೇಟರ್ ಮತ್ತು ಫಾಗ್‌ಲ್ಯಾಂಪ್ ಹೊಂದಿದೆ. ಎಂಜಿ ZS ಇವಿಯು ಇದರ ಹಿಂದಿನ ಗ್ರಿಲ್ ಅನ್ನು ಬಾಡಿ ಕಲರ್ ಕವರ್ಡ್ ಪ್ಲೇಟ್ ನಿಂದ ಬದಲಾಯಿಸಲಾಗಿದೆ. ಜೊತೆಗೆ ಇನ್ ಟೆಕ್ ವಿನ್ಯಾಸವು ಸಹ ಹಳೆಯ ಮಾದರಿಗೆ ಹೋಲಿಸಿದರೆ ಒಟ್ಟಾರೆ ವಿನ್ಯಾಸವು ಏರೋಡೈನಾಮಿಕ್ ಹೆಚ್ಚು ಪರಿಣಾಮಕಾರಿಯಾಗಿ ಕಾಣಲಿದೆ.
ಮರುವಿನ್ಯಾಸಗೊಳಿಸಿದ 17 ಇಂಚಿನ ಟೊಮ್ಹಾಕ್ ಹಬ್ ಅಲಾಯ್ ವ್ಹೀಲ್ ಗಳು ಕಾರಿನ ಹೆಚ್ಚಿನ ಆಕರ್ಷಣೆ ನೀಡುತ್ತದೆ. ಈ ನವೀಕರಿಸಿದ ಎಂಜಿ ಜೆಡ್ಎಸ್ ಇವಿ ಫೇಸ್‌ಲಿಫ್ಟ್ ಮಾದರಿಯ ಕ್ಯಾಬಿನ್ ಒಳಗೂ ಕೂಡಾ ನವೀಕರಿಸಿದ ಹಲವು ಬದಲಾವಣೆಗಳಾಗಿದೆ. ಇದರಲ್ಲಿ ಎಂಜಿ ಐಸ್ಮಾರ್ಟ್ ಇನ್ಫೋಟೈನ್‌ಮೆಂಟ್ ಸಿಸ್ಟಂನೊಂದಿಗೆ ದೊಡ್ಡದಾದ ಪನೊರಮಿಕ್ ಸನ್‌ರೂಫ್, ಪಿಎಂ 2.5 ಫಿಲ್ಟರ್ ಹೊಂದಿರುವ ಏರ್ ಪ್ಯೂರಿಫೈಯರ್ ಹೊಂದಿದೆ. ಇದರೊಂದಿಗೆ ಐಷಾರಾಮಿ ವೈಶಿಷ್ಟ್ಯಗಳೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಕಾರಿನಲ್ಲಿ ಸುಧಾರಿತ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಕೂಡಾ ಅಳವಡಿಸಿದೆ.
10.1 ಇಂಚಿನ ಹೆಚ್‌ಡಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅತ್ಯುತ್ತಮ ಗ್ರಾಫಿಕ್ಸ್ ಮತ್ತು ಮೆನು ಲೇಔಟ್‌ನೊಂದಿಗೆ ಆ್ಯಪಲ್ ಕಾರ್‌ಪ್ಲೇ ಹಾಗೂ ಆಂಡ್ರಾಯಿಡ್ ಆಟೋ ಜೋಡಣೆ ಹೊಂದಿದೆ. ನವೀಕರಿಸಿದ ವೈಶಿಷ್ಟ್ಯತೆಗಳಲ್ಲಿ ರಿಮೋಟ್ ಕಂಟ್ರೋಲ್‌ನೊಂದಿಗೆ ಹೆಚ್ಚಿನ ಕನೆಕ್ಟಿವಿಟಿ ಫೀಚರ್ಸ್‌ಗಳ ಆಯ್ಕೆಗಳನ್ನು ಪಡೆಯಬಹುದಾಗಿದ್ದು, ಹೊಸ ಕಾರನಲ್ಲಿ ಕಂಪನಿಯು ಲೆವಲ್ 2 ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ ಹೊಂದಿರುವ ರಿಯರ್ ಎಡಿಎಎಸ್ ಅನ್ನು ಹೊಂದಿದೆ. 360 ಡಿಗ್ರಿ ಕ್ಯಾಮೆರಾ ಮೂಲಕ ಲೈನ್ ಚೇಂಜ್ ಅಸಿಸ್ಟ್, ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ರಿಯರ್ ಕ್ರಾರ್ಸ್-ಟ್ರಾಫಿಕ್ ಅಲರ್ಟ್ ಸೌಲಭ್ಯಗಳನ್ನು ಹೊಂದಿದೆ.
ಈ ಎಂಜಿ ಜೆಡ್ಎಸ್ ಎಲೆಕ್ಟ್ರಿಕ್ ಎಸ್‍ಯುವಿ ಸೆಗ್ಮೆಂಟ್-ಅತಿದೊಡ್ಡ 50.3 kWh ಬ್ಯಾಟರಿ ಪ್ಯಾಕ್ ಹೊಂದಿದ್ದು, ಈ ಎಸ್‍ಯುವಿಯಲ್ಲಿ 143 ಬಿಹೆಚ್‍ಪಿ ಪವರ್ ಮತ್ತು 353 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಸ್‍ಯುವಿಯುನ್ನು ಒಂದ್ ಬಾರಿ ಪೂರ್ತಿಯಾಗಿ ಚಾರ್ಜ್ ಮಾಡಿದರೆ 461 ಕಿಮೀ ಚಲಿಸುತ್ತದೆ. ಈ ಎಲೆಕ್ಟ್ರಿಕ್ ಎಸ್‍ಯುವಿ ಕೇವಲ 8.5 ಸೆಕೆಂಡುಗಳಲ್ಲಿ 0-100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಈ ಎಸ್‍ಯುವಿಯಲ್ಲಿ FWD ಸಿಸ್ಟಮ್, ಸಿಂಗಲ್-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಮತ್ತು ಬಹು ಡ್ರೈವ್ ಮೋಡ್‌ಗಳೊಂದಿಗೆ ಬರುವುದನ್ನು ಮುಂದುವರೆಸಿದೆ.
ಈ ನವೀಕರಿಸಿದ ಜೆಡ್ಎಸ್ ಎಲೆಕ್ಟ್ರಿಕ್ ಮಾದರಿಯು ವಿಸ್ತರಿತ ಬ್ಯಾಟರಿ ಪ್ಯಾಕ್ ಮತ್ತು ಸುಧಾರಿತ ಕಾರ್ ಕನೆಕ್ಟ್ ಫೀಚರ್ಸ್‌ಗಳೊಂದಿಗೆ 2021 ಮಾದರಿಗಿಂತ ರೂ.60 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿದೆ. ಈ ಬೆಲೆ ಏರಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ ಸಾಕಷ್ಟು ಹೊಸ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ಎಲೆಕ್ಟ್ರಿಕ್ ಎಸ್‍ಯುವಿಯು ಹೊಸ ತಂತ್ರಜ್ಞಾನ ಪ್ರೇರಿತ ಬ್ಯಾಟರಿ ಪ್ಯಾಕ್ ಜೊತೆ 8 ಲೆಯರ್ ಹೆರ್ ಪಿನ್ ಎಲೆಕ್ಟ್ರಿಕ್ ಮೋಟಾರ್ ಮೂಲಕ ಅತ್ಯುತ್ತಮ ಪರ್ಫಾಮೆನ್ಸ್ ಸಹ ಖಚಿತಪಡಿಸುತ್ತದೆ.


Click it and Unblock the Notifications








