ಲಲಿತ್ ಮೋದಿ ಪ್ರೇಯಸಿ ಸುಶ್ಮಿತಾ ಸೇನ್ ಬಳಿ ಇರುವ ಐಷಾರಾಮಿ ಕಾರುಗಳಿವು..
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಜೊತೆ ಡೇಟಿಂಗ್ ನಡೆಸಿ ಸುದ್ದಿಯಾಗಿದ್ದಾರೆ. ತಾನು ಹಾಗೂ ಸುಶ್ಮಿತಾ ಸೇನ್ ಇಬ್ಬರೂ ಡೇಟಿಂಗ್ ನಡೆಸುತ್ತಿದ್ದು ಶೀಘ್ರದಲ್ಲೇ ಮದುವೆಯಾಗುವುದಾಗಿ ಲಲಿತಯ್ ಮೋದಿ ಹೇಳಿದ್ದಾರೆ.

ಲಲಿತ್ ಮೋದಿ ಅವರು ಐಪಿಎಲ್ ಎಂದು ಜನಪ್ರಿಯವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ಸ್ಥಾಪಕರು. ಅವರು ಗಾಡ್‌ಫ್ರೇ ಫಿಲಿಪ್ಸ್ ಇಂಡಿಯಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರೂ ಆಗಿದ್ದಾರೆ. ಐಪಿಎಲ್ ನಲ್ಲಿ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ 2010ರಲ್ಲಿ ಭಾರತ ತೊರೆದು ಓಡಿಹೋಗಿದ್ದರು. ಆದರೆ ಇದೀಗ ಮಾಜಿ ವಿಶ್ವ ಸುಂದರಿ ಸುಶ್ಮಿತಾ ಸೇನ್ ಡೇಟಿಂಗ್ ನಡೆಸಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. 56 ವರ್ಷದ ಲಲಿತ್ ಅವರು ಗುರುವಾರ ಸಂಜೆ ಸೋಶಿಯಲ್ ಮೀಡಿಯಾದಲ್ಲಿ ಅನೇಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರ ಪತ್ನಿ ಎಂದು ಬಣ್ಣಿಸಿದ್ದಾರೆ. ಮಾಧ್ಯಮಗಳಲ್ಲಿ ಈ ವಿಚಾರ ಸದ್ದು ಮಾಡಿದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ ಲಲಿತ್ ಮೋದಿ ನಾವಿಬ್ಬರೂ ಡೇಟಿಂಗ್ ನಡೆಸುತ್ತಿದ್ದೇವೆ, ಶೀಘ್ರದಲ್ಲೇ ಮದುವೆಯಾಗಲಿದ್ದೇವೆ ಎಂದು ಹೆಳಿದ್ದಾರೆ.

1994 ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡ ಸುಶ್ಮಿತಾ ಸೇನ್ 1996 ರ ದಸ್ತಕ್ ಚಿತ್ರದ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಅವರು ಮೈನೆ ಪ್ಯಾರ್ ಕ್ಯೂನ್ ಕಿಯಾ, ಮೈ ಹೂ ನಾ ಮತ್ತು ನೋ ಪ್ರಾಬ್ಲಂ ನಂತಹ ಸೂಪರ್ ಹಿಟ್ ಚಿತ್ರಗಳಲಿ ಅಭಿನಯಿಸಿದ್ದಾರೆ.

ನಟಿ ಸುಶ್ಮಿತಾ ಸೇನ್‌ಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ತಾಯಿ ಮತ್ತು 46 ವರ್ಷದ ಮಾಜಿ ವಿಶ್ವಸುಂದರಿ ಕೊನೆಯ ಬಾರಿಗೆ ಆರ್ಯ 2 ವೆಬ್ ಸರಣಿಯಲ್ಲಿ ಕಾಣಿಸಿಕೊಂಡಿದ್ದರು. ಸುಶ್ಮಿತಾ ಸೇನ್ ಐಷಾರಾಮಿ ಕಾರುಗಳ ಬಗ್ಗೆಯೂ ಒಲವು ಹೊಂದಿದ್ದಾರೆ. ಸುಶ್ಮಿತಾ ಸೇನ್ ಅವರ ಗ್ಯಾರೇಜ್‌ನಲ್ಲಿ ಬಿಎಂಡಬ್ಲ್ಯು ಕಂಪನಿಯಿಂದ ಲೆಕ್ಸಸ್‌ನವರೆಗೆ ಕೋಟ್ಯಂತರ ರೂಪಾಯಿ ಮೌಲ್ಯದ ಉತ್ತಮ ಮಾದರಿಗಳಿವೆ. ಅವರ ಕಾರುಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,

ಆಡಿ ಕ್ಯೂ7
ಭಾರತೀಯ ಮಾರುಕಟ್ಟೆಯಲ್ಲಿ ಆಡಿ ಕಂಪನಿಯ ಐಷಾರಾಮಿ ಕಾರಾಗಿದ್ದು, ಇದು ಯುವರಾಜ್ ಸಿಂಗ್, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಸೆಲೆಬ್ರಿಟಿಗಳಲ್ಲಿದೆ. ಈ ಕಾರನ್ನು ಪ್ರಸ್ತುತ ರೂ 82.84 ಲಕ್ಷದ ಆರಂಭಿಕ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಮತ್ತು ಅಗ್ರ ರೂಪಾಂತರಕ್ಕೆ ರೂ 89.89 ಲಕ್ಷಕ್ಕೆ ಏರುತ್ತದೆ. ಇದು ಪ್ರೀಮಿಯಂ ಪ್ಲಸ್ ಮತ್ತು ಟೆಕ್ನಾಲಜಿ ರೂಪಾಂತರಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ.

ಆಡಿ ಕ್ಯೂ7 ಸಂಪೂರ್ಣವಾಗಿ ನಾಕ್ಡ್ ಡೌನ್ (CKD) ಯುನಿಟ್ ಆಗಿ ಭಾರತಕ್ಕೆ ಬರುತ್ತದೆ ಮತ್ತು ಇದನ್ನು ಔರಂಗಾಬಾದ್‌ನಲ್ಲಿರುವ ಸ್ಕೋಡಾ ಆಟೋ ಫೋಕ್ಸ್‌ವ್ಯಾಗನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಸ್ಥಾವರದಲ್ಲಿ ತಯಾರಿಸಲಾಗುವುದು. ಆಡಿ ಕ್ಯೂ7 ಎಸ್‍ಯುವಿಯಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಕ್ಯೂ5 ನಂತೆ ಕ್ಯೂ7 ಕೂಡ ಮೈಲ್ಡ್ -ಹೈಬ್ರಿಡ್ ಸಿಸ್ಟಂ ಅನ್ನು ಪಡೆಯುತ್ತದೆ, ಇದು 48-ವೋಲ್ಟ್ ಎಲೆಕ್ಟ್ರಿಕ್ ಮೋಟಾರು, ಲಿಥಿಯಂ-ಐಯಾನ್ ಬ್ಯಾಟರಿ ಮತ್ತು ಬೆಲ್ಟ್ ಆಲ್ಟರ್ನೇಟರ್ ಸ್ಟಾರ್ಟರ್ (BAS) ಅನ್ನು ಒಳಗೊಂಡಿರುತ್ತದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯು 250 ಕಿಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ, ಬ್ರ್ಯಾಂಡ್‌ನ ಕ್ವಾಟ್ರೊ ಆಲ್-ವೀಲ್-ಡ್ರೈವ್ ಸಿಸ್ಟಂ ಸಹ ಈ ಎಸ್‍ಯುವಿಯಲ್ಲಿ ನೀಡಿದೆ.

ಬಿಎಂಡಬ್ಲ್ಯು 7 ಸೀರಿಸ್ 730Ld
ಈ ಐಷಾರಾಮಿ ಬಿಎಂಡಬ್ಲ್ಯು 7 ಸೀರಿಸ್ 730Ld ಕಾರಿನ ಬೆಲೆಯು ರೂ,1.42 ಕೋಟಿಯಾಗಿದೆ. ಈ ಕಾರಿನಲ್ಲಿ 3.0-ಲೀ ಟರ್ ಡೀಸೆಲ್ ಎಂಜಿನ್‌ನಿಂದ ಚಾಲಿತವಾಗಿದೆ. ಈ ಎಂಜಿನ್ 262 ಬಿಹೆಚ್‍ಪಿ ಪವರ್ ಮತ್ತು 620 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಬರುತ್ತದೆ.

ಈ ಕಾರಿನಲ್ಲಿ ಟಚ್‌ಸ್ಕ್ರೀನ್ ಡಿಸ್ ಪ್ಲೇ, ವೈರ್‌ಲೆಸ್ ಆಪಲ್ ಕಾರ್ಪ್ಲೇ, ಮುಂಭಾಗ ಮತ್ತು ಹಿಂಭಾಗದ ಪಾರ್ಕಿಂಗ್ ಸೆನ್ಸರ್ ಗಳು, ಕ್ರೂಸ್ ಕಂಟ್ರೋಲ್ ಇತ್ಯಾದಿಗಳನ್ನು ಹೊಂದಿದೆ. ಈ ಐಷಾರಾಮಿ ಕಾರು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಬಿಎಂಡಬ್ಲ್ಯು ಎಕ್ಸ್6
ಸುಶ್ಮಿತಾ ಸೇನ್ ಹೊಂದಿರುವ ಬಿಎಂಡಬ್ಲ್ಯು ಎಕ್ಸ್6 ಎಂಬ ಮತ್ತೊಂದು ಬಿಎಂಡಬ್ಲ್ಯು ಐಷಾರಾಮಿ ಕಾರು ಆಗಿದೆ. ಈ ಕಾರಿಗೆ ಪ್ರಸ್ತುತ ಬೆಲೆಯು ರೂ.1.04 ಕೋಟಿಯಾಗಿದೆ. ಈ ಕಾರು ಎಂ ಸ್ಪೋರ್ಟ್ ಮತ್ತು ಎಕ್ಸ್‌ಲೈನ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ಕಂಪನಿಯು ಪನೋರಮಿಕ್ ಸನ್‌ರೂಫ್, ಕ್ರೂಸ್ ಕಂಟ್ರೋಲ್, ಫೋರ್ ಝೋನ್ ಕ್ಲೈಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜಿಂಗ್, ಮಸಾಜ್ ಫಂಕ್ಷನ್‌ನೊಂದಿಗೆ ಸೀಟ್, 3ಡಿ ಸೌಂಡ್ ಸಿಸ್ಟಮ್ ಅನ್ನು ನೀಡಿದೆ.

ಈ ಬಿಎಂಡಬ್ಲ್ಯು ಎಕ್ಸ್6 ಕಾರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇದು ಪೆಟ್ರೋಲ್ 3.0-ಲೀಟರ್ ಯುನಿಟ್ ಮತ್ತು 4.4-ಲೀಟರ್ ಯುನಿಟ್ ಅನ್ನು ಹೊಂದಿದೆ. ಇದರಲ್ಲಿ 3.0-ಲೀಟರ್ ಯುನಿಟ್ 265 ಬಿಹೆಚ್‍ಪಿ ಪವರ್ ಉತ್ಪಾದಿಸಿದರೆ, 4.4-ಲೀಟರ್ ಯುನಿಟ್ 400 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 8-ಸ್ಪೀಡ್ ಆಟೋಮ್ಯಾಟಿಕ್ ಆಯ್ಕೆಯನ್ನು ನೀಡಲಾಗಿದೆ.

ಲೆಕ್ಸಸ್ ಎಲ್ಎಕ್ಸ್470
ಈ ಲೆಕ್ಸಸ್ ಎಲ್ಎಕ್ಸ್470 ಕಂಪನಿಯ ಐಷಾರಾಮಿ ಮಾಡೆಲ್ ಆಗಿದ್ದು ಇದರ ಬೆಲೆಯು ಸುಮಾರು ರೂ.35 ಲಕ್ಷವಾಗಿದೆ. ಆದರೆ ಈಗ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಇದು 5 ಸೀಟರ್ ಗಳ ಎಸ್‍ಯುವಿಯಾಗಿದೆ. ಈ ಎಸ್‍ಯುವಿಯನ್ನು ಲೆಕ್ಸಸ್ ಕಂಪನಿಯು ಅನೇಕ ಕಾರಣಗಳಿಂದ ಭಾರತದಲ್ಲಿ ಅದನ್ನು ಸ್ಥಗಿತಗೊಳಿಸಿತು.


Click it and Unblock the Notifications