ಕನ್ಫರ್ಮ್ ಆಯ್ತು ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತ ಪ್ರಯಾಣ: ಆತಂಕದಲ್ಲಿ ಸಾರಿಗೆ ಸಂಸ್ಥೆ!

ಕಾಂಗ್ರೆಸ್‌ ನೀಡಿರುವ 5 ಗ್ಯಾರೆಂಟಿಗಳಲ್ಲಿ ಒಂದಾದ ಸರಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಅವಕಾಶವನ್ನು ಎದುರು ನೋಡುತ್ತಿರುವ ಹೊತ್ತಿನಲ್ಲೇ ಮಹಿಳೆಯರಿಗೆ ಇಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಸಚಿವರು ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.

ಶಾಂತಿನಗರದ ಕೆಎಸ್​ಆರ್​ಟಿಸಿ (KSRTC ) ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ (ramalinga reddy) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರ್ಕಾರಿ ಬಸ್​ಗಳಲ್ಲಿ (Bus) ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ನಮ್ಮ ಪ್ರಣಾಳಿಕೆಯಲ್ಲಿ BPL ಇದ್ರೆ ಮಾತ್ರ ಅಂತ ಎಂದು ಹೇಳಿಲ್ಲ. ಹಾಗಾಗಿ BPL ಕಾರ್ಡ್ ಬೇಕು ಎಂದು ಈಗಲೂ ಹೇಳುವುದೇ ಇಲ್ಲ. ಹೀಗಾಗಿ ರಾಜ್ಯಾದ್ಯಂತ ಎಲ್ಲಾ ಮಹಿಳೆಯರು ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಘೋಷಣೆ ಮಾಡಿದರು.

 Government Bus

ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಯಾವುದೇ ಷರತ್ತುಗಳಿಲ್ಲ. ಇದರೊಂದಿಗೆ ಕಾಂಗ್ರೆಸ್​ನ 5 ಗ್ಯಾರೆಂಟಿಗಳಲ್ಲಿ ಒಂದು ಈಡೇರಿಸಿದಂತೆಗುತ್ತದೆ. ಇಂದು ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ನಿಗಮದ ಪ್ರಯಾಣಿಕರ ಸಂಖ್ಯೆ ಮತ್ತು ಬಸ್‌ಗಳ ಸಂಖ್ಯೆ ವಾರ್ಷಿಕ ಆದಾಯದ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದರು. ಪ್ರತಿ ವರ್ಷ ಅಂದಾಜು 3,200 ಕೋಟಿ ರೂ. ಖರ್ಚು ಬೇಕಾಗುತ್ತದೆ. ಆದರೆ ಸಾರಿಗೆ 4 ನಿಗಮಗಳು ನಷ್ಟದಲ್ಲಿವೆ.

ಹಾಗಾಗಿ ಸರ್ಕಾರ ಸಹಾಯಧನ ನೀಡಿದರೆ ಯೋಜನೆ ಜಾರಿಗೆ ಅನುಕೂಲವಾಗುತ್ತದೆ. ಕೊರೊನಾ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ನಷ್ಟ ಉಂಟಾಗಿತ್ತು. ಅದನ್ನು ಸರಿದೂಗಿಸಲು ನಿಗಮದ ಕೆಲವು ಆಸ್ತಿಗಳನ್ನು ಅಡವಿಟ್ಟು ಸಾಲ ಪಡೆಯಲಾಗಿದೆ. ಈಗಾಗಲೇ ಹಲವು ನಿಗಮಗಳಿಂದ ಸಾವಿರಾರು ಕೋಟಿ ಹಣ ಬರಬೇಕಿದೆ ಎಂದರು. ಇದೇ ವೇಳೆ ಬಸ್‌ಗಳ ಮಾಹಿತಿ ಕೊಟ್ಟ ಅಧಿಕಾರಿಗಳು ಸಾಮಾನ್ಯ ಬಸ್‌ಗಳಲ್ಲಿ ಉಚಿತ ಬಸ್ ಸೇವೆ ಕಲ್ಪಿಸಿದರೆ ಆರ್ಥಿಕ ಹೊರೆಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

Government Bus

ಸಚಿವ ರಾಮಲಿಂಗಾರೆಡ್ಡಿ ಅವರು ಮಾತನಾಡಿ, ಸಾರಿಗೆ ಸಂಸ್ಥೆಗಳಲ್ಲಿ 240 ಘಟಕಗಳಿದೆ. ಇದರಲ್ಲಿ 21,574 ವಾಹನಗಳನಳಿವೆ. ಎಲ್ಲಾ ಸೇರಿ ಒಟ್ಟು 82.51 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಿದ್ದಾರೆ. ಇದರೊಂದಿಗೆ ಈ ವರ್ಷ ಹೊಸದಾಗಿ 4,500ಕ್ಕೂ ಹೆಚ್ಚು ಬಸ್‌ಗಳು ಸೇರ್ಪಡೆಯಾಗುತ್ತಿವೆ. ಇನ್ನಷ್ಟು ಹೊಸ ಬಸ್‌ಗಳು ಕೂಡ ಬರಬೇಕಿದೆ. ಇದರಿಂದ ಪ್ರತಿದಿನ 82.51 ಲಕ್ಷ ಪ್ರಯಾಣಿಕರು ಓಡಾಡಬಹುದು ಎಂಬ ಮಾಹಿತಿಯನ್ನು ನೀಡಿದ್ದಾರೆ.

ಇನ್ನು ಸಾರಿಗೆ ನಿಗಮಗಳು ಈ ಯೋಜನೆಯಿಂದ ಮತ್ತಷ್ಟು ನಷ್ಟ ಅನುಭವಿಸುವ ಆತಂಕವನ್ನು ಕೂಡ ವ್ಯಕ್ತಪಡಿಸುತ್ತಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮ ಮತ್ತು ಈಶಾನ್ಯ ಕರ್ನಾಟಕ ಸಾರಿಗೆ ನಿಗಮಗಳು ಬಹುಪಾಲು ನಷ್ಟದಲ್ಲೇ ನಡೆಯುತ್ತಿವೆ. ಹೀಗಿರುವಾಗ ಮತ್ತೆ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದಿಂದ ಮತ್ತಷ್ಟು ನಷ್ಟ ಅನುಭವಿಸಬಹುದು. ಇದನ್ನು ಭರಿಸುವ ವ್ಯವಸ್ಥೆ ಬಗ್ಗೆ ಗಂಭೀರ ಚರ್ಚೆ ಶುರುವಾಗಿದೆ.

ಬಿಪಿಎಲ್, ಎಪಿಎಲ್ ಅಂತಾ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಎಲ್ಲಾ ಮಹಿಳೆಯರಿಗೆ ಕೊಡ್ತೇವೆ. ಜೂನ್ 1 ರಂದು ಸಿಎಂ ಘೋಷಣೆ ಮಾಡುತ್ತಾರೆ. ಗ್ಯಾರಂಟಿ ಯೋಜನೆ ಜಾರಿಯಾಗದಿದ್ದರೆ ಬಿಜೆಪಿ ಪ್ರತಿಭಟನೆ ಮಾಡುವ ವಿಚಾರವಾಗಿ ಮಾತನಾಡಿ, ಬಿಜೆಪಿಯವರಿಗೆ ಪ್ರತಿಭಟನೆ ಮಾಡಲು ಅವಕಾಶ ನೀಡಲ್ಲ. ಜನ ಬಿಜೆಪಿಗೆ ರೆಸ್ಟ್ ಮಾಡಲು ಹೇಳಿದ್ದಾರೆ. ಅವರು ಮನೆಯಲ್ಲಿ ರೆಸ್ಟ್ ಮಾಡಲಿ ಎಂದು ಸಾರುಗೆ ಸಚಿವರು ಹೇಳೀದ್ದಾರೆ.

ಸಭೆಯಲ್ಲಿಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ .ಪ್ರಸಾದ್ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಎಂಡಿ ಜಿ.ಸತ್ಯವತಿ, NWRTC ಎಂಡಿ ಭರತ್, KKRTC ಎಂಡಿ ರಾಚಪ್ಪ ಮತ್ತು ಇತರ ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಜನರಿಗೆ ನೀಡಿರುವ ಐದು ಗ್ಯಾರಂಟಿಗಳನ್ನು ಸರಕಾರ ಜಾರಿಗೊಳಿಸುವುದಕ್ಕೆ ಭರವಸೆಯನ್ನು ನೀಡಿದ್ದಾರೆ. ಇಲ್ಲದಿದ್ದರೆ ಇದು ಪ್ರತಿಪಕ್ಷಗಳಿಗೆ ಟೇಕ್ ಮಾಡಲು ದೊಡ್ಡ ಅಸ್ತ್ರ ಸಿಕ್ಕಂತಾಗುತ್ತದೆ.

Article Published On: Tuesday, May 30, 2023, 18:32 [IST]
English summary
Free government bus travel for women in karnataka transport minister ramalinga reddy
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+