ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

By Manoj B.k

ನೀವು ಒಂದು ವಿಚಾರವನ್ನು ತಪ್ಪದೇ ಗಮನಿಸಲೇಬೇಕು. ಬಹುತೇಕ ವಾಹನ ಮಾಲೀಕರು ಹೇಳುವುದು ಏನೆಂದರೆ ನಮ್ಮ ವಾಹನದ ಮೈಲೇಜ್ ಸರಿಯಾಗಿ ನೀಡುತ್ತಿಲ್ಲ ಎನ್ನುವುದೇ ಆಗುತ್ತದೆ. ಹೌದು, ನೂರರಲ್ಲಿ ಶೇ.90ರಷ್ಟು ವಾಹನ ಮಾಲೀಕರ ಈ ಅಸಮಾಧಾನ ಹೊಂದಿದ್ದಾರೆ. ಆದ್ರೆ ಅದು ವಾಹನ ಎಂಜಿನ್ ಸಮಸ್ಯೆಯಾಗಲಿ ಅಥವಾ ನಿಮ್ಮ ಚಾಲನಾ ಶೈಲಿಯ ಪರಿಣಾಮ ಮಾತ್ರ ಅಲ್ಲವೇ ಅಲ್ಲ. ಸಮಸ್ಯೆಯಾಗುತ್ತಿರುವುದು ಪೆಟ್ರೋಲ್ ಬಂಕ್‌ಗಳಲ್ಲಿ ಅಂದ್ರೆ ನೀವು ನಂಬಲೇಬೇಕು.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹೌದು, ನೀವು ಪೆಟ್ರೋಲ್ ಬಂಕ್‌ಗೆ ಹೋಗುವ ಮುನ್ನ ಸ್ಟೋರಿಯನ್ನು ಒಮ್ಮೆ ಪೂರ್ತಿಯಾಗಿ ಓದಲೇಬೇಕು. ಯಾಕೆ ಅಂದರೆ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಹೇಗೆಲ್ಲಾ ಯಾಮಾರಿಸುತ್ತಾರೆ ಅದನ್ನು ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಆಗ ನಿಮಗೆ ನಿಮ್ಮ ವಾಹನ ಯಾಕೆ ಇಷ್ಟು ಕಡಿಮೆ ಮೈಲೇಜ್ ನೀಡುತ್ತಿದೆ ಎನ್ನುವುದು ಸಂಪೂರ್ಣವಾಗಿ ಅರ್ಥವಾಗಲಿದೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಪೆಟ್ರೋಲ್ ಬಂಕ್‌ಗಳಲ್ಲಿ ನಾವು ಎಷ್ಟೇ ಎಚ್ಚರ ವಹಿಸಿದ್ರು ಒಂದಲ್ಲಾ ಒಂದು ರೀತಿಯ ತಂತ್ರಜ್ಞಾನವನ್ನು ಉಪಯೋಗಿ ಪೆಟ್ರೋಲ್‌ ಪ್ರಮಾಣದಲ್ಲಿ ಗ್ರಾಹಕರಿಗೆ ಯಾಮಾರಿಸುವ ಬಂಕ್ ಮಾಲೀಕರು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಾಗ ಹೇಗಿರುತ್ತೆ ಹೇಳಿ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ದೇಶದ ಪ್ರಮುಖ ನಗರಗಳಲ್ಲಿ ಮೆಟ್ರೊಲಜಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ಅಂಕಿಅಂಶಗಳಲ್ಲಿ ತೊರಿಸುವ ಪ್ರಮಾಣಕ್ಕಿಂತ ಪೆಟ್ರೋಲ್ ಮತ್ತು ಡೀಸೆಲ್ ಪೂರೈಸುತ್ತಿರುವುದನ್ನು ಪತ್ತೆ ಹಚ್ಚಲಾಗಿದೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಗ್ರಾಹಕರ ಸೋಗಿನಲ್ಲಿ ಪ್ರತಿಷ್ಠಿತ ಪೆಟ್ರೋಲ್ ಬಂಕ್‌ಗಳ ಔಟ್‌ಲೆಟ್‌ಗಳಲ್ಲಿ ಇಂಧನ ಪ್ರಮಾಣಣವನ್ನು ಅಳತೆ ಮಾಡಿರುವ ಲೀಗಲ್ ಮೆಟ್ರೊಲಜಿ ಅಧಿಕಾರಿಗಳು ಪ್ರಮುಖ ಪೆಟ್ರೋಲ್ ಬಂಕ್‌ಗಳ ಮೇಲೆ ಕೇಸ್ ದಾಖಲಿಸಿ ತನಿಖೆ ಕೈಗೊಂಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ನಲ್ಲಿ ಕನಿಷ್ಠ 40 ರಿಂದ 100 ಎಂಎಲ್ ವರೆಗೆ ಇಂಧನ ಪ್ರಮಾಣವನ್ನು ಕಡಿಮೆ ಹಾಕುತ್ತಿರುವುದು ಪತ್ತೆಯಾಗಿದೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ದೇಶದ ಪ್ರಮುಖ ನಗರಗಳಲ್ಲಿ ಬಹುತೇಕ ಪೆಟ್ರೋಲ್ ಬಂಕ್‌ಗಳು ಇದೇ ರೀತಿಯಾಗಿ ಗ್ರಾಹಕರನ್ನು ಮೋಸಗೊಳಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಆದ್ರೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ಹಿಡಿತದಲ್ಲಿರುವ ಬಹುತೇಕ ಪೆಟ್ರೋಲ್ ಬಂಕ್‌ಗಳಲ್ಲಿ ನಡೆಯುತ್ತಿರುವ ಹಗಲು ದರೋಡೆಗೆ ಬ್ರೇಕ್ ಹಾಕುವುದು ಅಷ್ಟು ಸುಲಭವಲ್ಲ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಕಳೆದ ತಿಂಗಳ ಹಿಂದಷ್ಟೇ ಈ ಬಗ್ಗೆ ನಾವು ಒಂದು ವರದಿ ಮಾಡಿದ್ದು ನಿಮಗೆ ನೆನಪಿರಬಹುದು. ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಒಂದರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರೊಬ್ಬರು ಪೆಟ್ರೋಲ್ ಪ್ರಮಾಣದಲ್ಲಿ ಮೋಸಗೊಳಿಸುತ್ತಿರುವ ಡೀಲರ್ಸ್ ಬಗ್ಗೆ ಸಾಕ್ಷಿ ಸಮೇತ ಪೆಟ್ರೋಲ್ ಮಾಪನದಲ್ಲಿ ಕಳ್ಳಾಟವನ್ನು ಸಾಕ್ಷಿ ಸಮೇತ ಬಯಲು ಮಾಡಿದ್ದರು.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಇದು ಹೊಸ ಸಮಸ್ಯೆ ಏನು ಅಲ್ಲಾ. ಆದ್ರೆ ಈ ಸಮಸ್ಯೆ ಬಗ್ಗೆ ಸಂಬಂಧಪಟ್ಟವರಿಗೆ ಗೊತ್ತಿದ್ರು ಸಹ ಕಣ್ಮುಚ್ಚಿ ಕುಳಿತಿರುವುದು ಮಾತ್ರ ದುರಷ್ಟಕರ. ಯಾಕೆಂದ್ರೆ ಪೆಟ್ರೋಲ್ ಬಂಕ್‌ಗಳಲ್ಲಿ ವಾಹನ ಸವಾರರಿಗೆ ಆಗುತ್ತಿರುವ ಮೋಸ ಮಾತ್ರ ಅಷ್ಟಿಷ್ಟಲ್ಲ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಕಳೆದ ಕೆಲ ದಿನಗಳ ಹಿಂದೆಯೂ ಪೆಟ್ರೋಲ್ ಬಂಕ್‌ಗಳಲ್ಲಿ ವಾಹನ ಸವಾರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಹತ್ತಾರು ಪ್ರಕರಣಗಳು ದಾಖಲಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದವು. ಆದ್ರೆ ಇದೀಗ ಅದೇ ಸಮಸ್ಯೆ ಮತ್ತೆ ಉಲ್ಬಣಗೊಂಡಿದೆ.

MOST READ: ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಬಜೆಟ್ ಬೆಲೆಯ ಬೈಕುಗಳಿವು..!

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ರಿಮೋಟ್ ಕಂಟ್ರೋಲ್ ಮೂಲಕ ನಡೆಯುತ್ತೆ ಕಳ್ಳ ದಂಧೆ

ಹೌದು.. ಇದು ನಿಮಗೆ ನಂಬಲು ಸಾಧ್ಯವಾಗದಿದ್ದರು ನಿಜ. ಕಳೆದ ತಿಂಗಳ ಹಿಂದಷ್ಟೇ ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಟಿ ಅಧಿಕಾರಿಗಳು ಗ್ರಾಹಕರ ದೂರಿನ ಮೇಲೆ ನಡೆಸಿದ ದಾಳಿ ವೇಳೆ ಪೆಟ್ರೋಲ್ ಬಂಕ್‌ಗಳಲ್ಲಿ ನೂರಾರು ರಿಮೋಟ್‌ಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ರಿಮೋಟ್ ಮೂಲಕ ಪೆಟ್ರೋಲ್ ಬಂಕ್‌ನ ಫ್ಯೂಲ್ ಯೂನಿಟ್‌ಗಳನ್ನು ನಿಯಂತ್ರಿಸುವ ಮಾಲೀಕರು ಬೈಕ್ ಮಾಲೀಕರಿಗಿಂತ ಸಾವಿರ ಲೆಕ್ಕದಲ್ಲಿ ಡೀಸೆಲ್, ಪೆಟ್ರೋಲ್ ತುಂಬಿಸುವ ವಾಹನ ಮಾಲೀಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಮೋಸ ಮಾಡುತ್ತಾರೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬೈಕ್‌ಗಳಿಗೆ ಪೆಟ್ರೋಲ್ ತುಂಬಿಸುವಾಗ ಮೋಸ ಮಾಡಿದ್ದಲ್ಲಿ ಮಾಲೀಕರಿಗೆ ಇದು ಗೊತ್ತಾಗಬಹುದಾದ ಎನ್ನುವ ಉದ್ದೇಶದಿಂದ ಹೆಚ್ಚಿನ ಪ್ರಮಾಣದಲ್ಲಿ ಇಂಧನ ತುಂಬಿಸುವಾಗ ಮಾತ್ರ ರಿಮೋಟ್ ಕಂಟ್ರೋಲ್ ಬಳಕೆ ಮಾಡಿ ಇಂಧನ ಪ್ರಮಾಣದಲ್ಲಿ ಮೋಸಗೊಳಿಸುತ್ತಾರೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಅದು ಹೇಗೆ ಅಂದ್ರೆ, ನೀವು ಒಂದು ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಹಾಕಿಸಿದ್ದರೆ ನಿಮ್ಮ ವಾಹನದಲ್ಲಿ ಕೇವಲ 900ಎಂಎಲ್ ಮಾತ್ರ ತುಂಬಿಕೊಳ್ಳುತ್ತದೆ. ಆದ್ರೆ ಮೀಟರ್‌ನಲ್ಲಿ ಮಾತ್ರ 1 ಲೀಟರ್ ಹಾಕಿದ್ದಾಗಿ ಲೆಕ್ಕ ತೋರಿಸುತ್ತದೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಒಂದು ಮಾಹಿತಿ ಪ್ರಕಾರ, ದೇಶಾದ್ಯಂತ ಸುಮಾರು 25 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್ ಈ ರೀತಿಯಾಗಿ ಮೋಸ ನಡೆಯುತ್ತಿದ್ದು, ಮೋಸದ ವ್ಯವಹಾರ ಪತ್ತೆ ಹಚ್ಚಲು ಸಾಧ್ಯವಾಗದೇ ವಾಹನನ ಸವಾರರಿಗೆ ಜೇಬಿಗೆ ಕತ್ತರಿ ಬೀಳುತ್ತಿದೆ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಕರ್ನಾಟಕದಲ್ಲೂ ಸುಮಾರು 2 ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯಾಗಿ ಮೋಸ ನಡೆಯುತ್ತಿದ್ದು, ಮೋಸದ ವ್ಯವಹಾರದ ಹಿಂದೆ ಕೆಲವು ರಾಜಕೀಯ ಮುಖಂಡರೇ ಬೆನ್ನೆಲುಬಾಗಿ ನಿಂತಿರುವುದು ದುರಾದೃಷ್ಠಕರ ಸಂಗತಿ.

ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಅನುಮಾನ ಬಂದ್ರೆ ಬಿಡಲೇಬೇಡಿ..!

ವಾಹನ ಸವಾರರೇ ಯಾವುದೇ ಕಾರಣಕ್ಕೂ ಅನ್ಯಾಯವನ್ನು ಸಹಿಸಿಕೊಳ್ಳಬೇಡಿ. ನಿಮಗೆ ಅನುಮಾನ ಬಂದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪ್ರಮಾಣದ ಬಗ್ಗೆ ಮಾಲೀಕರ ಬಳಿ ಅನುಮಾನ ಬಗೆಹರಿಸಿಕೊಳ್ಳಿ. ಒಂದು ವೇಳೆ ನಿಮ್ಮ ಅನುಮಾನ ನಿಜವಾಗಿದ್ದಲ್ಲಿ ಮೋಸ ಮಾಡುತ್ತಿರುವ ಬಂಕ್ ವಿರುದ್ಧ ದೂರು ದಾಖಲಿಸಲು ಹಿಂಜರಿಯಬೇಡಿ. ದೂರು ದಾಖಲಿಸಿ ಮೋಸದ ವ್ಯವಹಾರಕ್ಕೆ ಬ್ರೇಕ್ ಹಾಕಿ.

Most Read Articles

Kannada
English summary
Fuel Meter Fraud Detected In 7 Petrol Pumps In Andhra Pradesh. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X