ಗೇಮ್ ಥೀಮ್‌ನಲ್ಲಿ ಮಿಂಚುತ್ತಿದೆ ಜನಪ್ರಿಯ ಮಹಿಂದ್ರಾ ಥಾರ್: ಬೆಂಕಿ ಗುರು
ಮಹೀಂದ್ರಾ ಥಾರ್ (Mahindra Thar) ಎಸ್‍ಯುವಿಯು ಬಹಳ ವರ್ಷಗಳಿಂದ ಭಾರತದಲ್ಲಿ ಜನಪ್ರಿಯ ಆಫ್ ರೋಡರ್ ಎಸ್‍ಯುವಿ ಮಾದರಿಯಾಗಿದೆ. ಸದ್ಯ ಭಾರತೀಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಮಹೀಂದ್ರಾ ಥಾರ್ ಎಸ್‍ಯುವಿಯು ಭಾರತದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಮಾದರಿಯಾಗಿದೆ.
ಭಾರೀ ಬೇಡಿಕೆಯಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಿದೆ. ಆದರೆ ಮಾರುತಿ ಜಿಮ್ನಿಯು ಭಾರೀ ಪೈಪೋಟಿಯನು ನೀಡುತ್ತಿದೆ. ಇದರಿಂದ ಮಹಿಂದ್ರಾ ಕಂಪನಿಯು ಬಹುಬೇಡಿಕೆಯ ಥಾರ್ ಎಸ್‍ಯುವಿಯ 5-ಡೊರಿನ ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ನಡುವೆ "ಗೇಮ್ ಆಫ್ ಥ್ರೋನ್ಸ್" ಥೀಮ್‌ನಲ್ಲಿ ಸುತ್ತುವ ಮಹೀಂದ್ರ ಥಾರ್‌ನ ಕಿರು ವೀಡಿಯೊವನ್ನು ಆನ್‌ಲೈನ್‌ನಲ್ಲಿ ಭಾರೀ ವೈರಲ್ ಆಗಿದೆ.

ಈ ವಿಶಿಷ್ಟವಾದ ಮಹೀಂದ್ರ ಥಾರ್‌ನ ವೀಡಿಯೊವನ್ನು IDE ಆಟೋವರ್ಕ್ಸ್ ತಮ್ಮ ಚಾನಲ್‌ನಲ್ಲಿ Instagram ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ "WINTER IS HERE! ಎಂಬ ಶೀರ್ಷಕೆಯನ್ನು ಬರೆದುಕೊಂಡಿದ್ದಾರೆ. ಈ ವಿಶಿಷ್ಟವಾದ ಮಹೀಂದ್ರ ಥಾರ್‌ನ ಎಲ್ಲಾ ಕೋನಗಳನ್ನು ತೋರಿಸುವ ಕಿರು ವೀಡಿಯೊದಿಂದ, ಕಾರಿಗೆ ವಿಶಿಷ್ಟವಾದ ಹೊದಿಕೆಯನ್ನು ನೀಡಲಾಗಿದೆ. ಇದರಲ್ಲಿ ಬಾನೆಟ್, ರೂಫ್ ಮತ್ತು ಹಿಂಭಾಗದ ಗ್ಲಾಸ್ ಪ್ರದೇಶವು ಬೂದು ಬಣ್ಣದ ಫಿನಿಶಿಂಗ್ ಅನ್ನು ಹೊಂದಿದೆ.
ಇನ್ನು ಮಹೀಂದ್ರಾ ಥಾರ್ ಎಸ್‍ಯುವಿಯ ಸೈಡ್ ಪ್ರೊಫೈಲ್ ಮತ್ತು ಹಿಂಭಾಗದ ಡೋರ್ ಮೊಸಾಯಿಕ್ ಶೈಲಿಯ ಹಿಮಕರಡಿಯೊಂದಿಗೆ ಬಿಳಿ ಬಣ್ಣವನ್ನು ಪಡೆಯುತ್ತದೆ. ಈ ನಿರ್ದಿಷ್ಟ ಥಾರ್‌ನ ಬಾನೆಟ್ "ಚಳಿಗಾಲ ಬರುತ್ತಿದೆ" ಎಂಬ ಅಡಿಬರಹವನ್ನು ಹೊಂದಿದೆ. ಗೇಮ್ ಆಫ್ ಥ್ರೋನ್ಸ್ ಜಾರ್ಜ್ RR ಮಾರ್ಟಿನ್ ಅವರ ಪುಸ್ತಕ ಸೀರಿಸ್, 'ಎ ಸಾಂಗ್ ಆಫ್ ಐಸ್ ಅಂಡ್ ಫೈರ್' ಅನ್ನು ಆಧರಿಸಿದ ಜನಪ್ರಿಯ ಫ್ಯಾಂಟಸಿ ದೂರದರ್ಶನ ಸೀರಿಸ್ ಆಗಿದೆ.

ಮಹೀಂದ್ರಾ ಥಾರ್ ಎಸ್‍ಯುವಿಯು ಕಡಿಮೆ ಬಜೆಟ್‌ನಲ್ಲಿ ಖರೀದಿಸಬಹುದಾದ ಅತ್ಯುತ್ತಮ ಎಸ್‍ಯುವಿಯಾಗಿದೆ. ಅದಕ್ಕಾಗಿಯೇ ವಾಹನ ಉತ್ಸಾಹಿಗಳು ಒಂದನ್ನು ಖರೀದಿಸಲು ನಿರಂತರವಾಗಿ ಸರತಿ ಸಾಲಿನಲ್ಲಿ ನಿಲ್ಲುತ್ತಾರೆ. ಇದು ಕೆಲವು ಪ್ರಭಾವಶಾಲಿ ಸ್ಪೆಕ್ಸ್‌ಗಳನ್ನು ಹೊಂದಿದೆ. ಮಹೀಂದ್ರಾ ಥಾರ್ 2.0 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.
ಇನ್ನು 2.2 ಲೀಟರ್ ಟರ್ಬೊ-ಡೀಸೆಲ್ ಎಂಜಿನ್ 130 ಬಿಹೆಚ್‍ಪಿ ಪವರ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಗ್ಲೊಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 4 ಸ್ಟಾರ್ ಸೇಫ್ಚಿ ರೇಟಿಂಗ್ ಪಡೆದುಕೊಳ್ಳುವ ಮೂಲಕ ಸುರಕ್ಷಿತ ಕಾರು ಮಾದರಿಯಾಗಿ ಗುರುತಿಸಿಕೊಂಡ ನಂತರ ಈ ಥಾರ್ ಎಸ್‍ಯುವಿಗೆ ಮತ್ತಷ್ಟು ಬೇಡಿಕೆ ಪಡೆದುಕೊಂಡಿದೆ.

ಈ ಎಸ್‍ಯುವಿಯ ವೈಟಿಂಗ್ ಪಿರೇಡ್ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ನಿರ್ಧಾರವಾಗಲಿದೆ. ಈ ನ್ಯೂ ಜನರೇಷನ್ ಮಹೀಂದ್ರಾ ಥಾರ್ ಎಸ್‍ಯುವಿಯ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿದೆ. ಇದರೊಂದಿಗೆ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಂದಿದೆ. ಈ ಥಾರ್ ಎಸ್‍ಯುವಿ ರೂಫ್ ಮೌಂಟೆಡ್ ಆಡಿಯೋ ಸ್ಪಿಕರ್ಸ್, ಮಲ್ಟಿ ಕಲರ್ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಸ್ಟೀರಿಂಗ್ ಮೌಟೆಂಟ್ ಕಂಟ್ರೋಲ್ ಅನ್ನು ಒಳಗೊಂಡಿದೆ.
ಥಾರ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಎರಡು ಎಂಜಿನ್ ಆಯ್ಕೆಗಳಲ್ಲೂ 4x4 ಡ್ರೈವ್ ಸಿಸ್ಟಂ ಹೊಂದಿದೆ. ಥಾರ್ ಮಾದರಿಯಲ್ಲಿ ಮೊದಲ ಬಾರಿಗೆ ಡೀಸೆಲ್ ಎಂಜಿನ್ ಜೊತೆಗೆ ಪೆಟ್ರೋಲ್ ಕಾರಿನ ಆಯ್ಕೆಯನ್ನು ಸಹ ನೀಡಿದೆ. ಈ ಮಹೀಂದ್ರಾ ಥಾರ್ ಎಸ್‍ಯುವಿಯು ಆಫ್-ರೋಡ್ ಕಾರು ಮಾದರಿಯ ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಗೆ ಕಾರಣವಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications