Just In
Don't Miss!
- News
ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ
- Sports
'ಭಾರತೀಯರಿಗೆ ಹೋಲಿಸಿದರೆ ಯುವ ಆಸೀಸ್ ಇನ್ನೂ ಪ್ರೈಮರಿ ಶಾಲೆಯಲ್ಲಿದೆ'
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜಿಡಿಪಿ ಕುಸಿತಕ್ಕೆ ಕಾರಣವಾದ ರಸ್ತೆ ಅಪಘಾತಗಳು
ವಿಶ್ವದಲ್ಲಿ ಸಂಭವಿಸುವ ರಸ್ತೆ ಅಪಘಾತ ಸಾವುಗಳಲ್ಲಿ ಭಾರತದ ಪಾಲು ಶೇಕಡಾ 11ರಷ್ಟು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿವಿಧ ಕ್ರಮಗಳಿಂದಾಗಿ ರಸ್ತೆ ಅಪಘಾತಗಳು ಗಣನೀಯವಾಗಿ ಕಡಿಮೆಯಾಗುತ್ತಿವೆ ಎಂದು ಅವರು ಹೇಳಿದ್ದಾರೆ.

ವಿಶ್ವ ಬ್ಯಾಂಕ್ ಆಯೋಜಿಸಿದ್ದ ರಸ್ತೆ ಸುರಕ್ಷತಾ ಕಾರ್ಯಕ್ರಮದಲ್ಲಿ ನಿತಿನ್ ಗಡ್ಕರಿ ಭಾಗವಹಿಸಿದ್ದರು. ರಸ್ತೆ ಅಪಘಾತಗಳಿಂದಾಗಿ ಭಾರತದ ಒಟ್ಟು ದೇಶೀಯ ಉತ್ಪನ್ನದ (ಜಿಡಿಪಿ) 3.14%ನಷ್ಟು ನಷ್ಟವುಂಟಾಗುತ್ತಿದೆ ಎಂದು ಅವರು ಹೇಳಿದರು. ಭಾರತದಲ್ಲಿ ಪ್ರತಿ ವರ್ಷ ಸುಮಾರು 5 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತವೆ ಎಂದು ಹೇಳಲಾಗಿದೆ.

ಈ ಅಪಘಾತಗಳಿಂದಾಗಿ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಿದ್ದರೆ, ಸುಮಾರು 3 ಲಕ್ಷ ಜನರು ಗಂಭೀರವಾಗಿ ಗಾಯಗೊಳ್ಳುತ್ತಿದ್ದಾರೆ. ಜಾಗತಿಕ ರಸ್ತೆ ಅಪಘಾತದ ಸಾವುಗಳಲ್ಲಿ 11%ನಷ್ಟು ಸಾವುಗಳು ಭಾರತದಲ್ಲಿ ಸಂಭವಿಸುತ್ತವೆ. ರಸ್ತೆ ಅಪಘಾತಗಳಿಂದಾಗಿ ಜಿಡಿಪಿಯಲ್ಲಿ 3.14%ನಷ್ಟು ನಷ್ಟವುಂಟಾಗುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸರ್ಕಾರವು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಹೇಳಿರುವ ಅವರು ಈ ಕ್ರಮಗಳಿಂದಾಗಿ ಸಾವುನೋವುಗಳ ಪ್ರಮಾಣವು 20%ಗೆ ಇಳಿದಿದೆ ಎಂದು ಹೇಳಿದ್ದಾರೆ.
ಕ್ಲಾಸಿಕ್ ಬೈಕ್ ಪ್ರಿಯರಿಗಾಗಿ ಬಿಡುಗಡೆಯಾದ ರಾಯಲ್ ಎನ್‌ಫೀಲ್ಡ್ ಹೊಸ ಮಿಟಿಯೊರ್ 350 ಹೇಗಿದೆ? ಈ ವಿಡಿಯೋ ನೋಡಿ..
ಸರ್ಕಾರದ ವಿವಿಧ ಕ್ರಮಗಳಿಂದ ರಸ್ತೆ ಅಪಘಾತಗಳು ಹಾಗೂ ಸಾವಿನ ಪ್ರಮಾಣ ಮತ್ತಷ್ಟು ಕಡಿಮೆಯಾಗುವುದೆಂದು ಆಶಿಸುತ್ತೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ತಿದ್ದುಪಡಿಗೊಂಡ ಹೊಸ ಮೋಟಾರು ವಾಹನ ಕಾಯ್ದೆಯು ಭಾರತದಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಮಹತ್ವದ ಕೊಡುಗೆ ನೀಡಿದೆ ಎಂದು ಅವರು ಹೇಳಿದರು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು. ದಂಡದ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಿದ್ದ ಕಾರಣಕ್ಕೆ ವಾಹನ ಸವಾರರು ಹೊಸ ಮೋಟಾರು ವಾಹನ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಭಾರತದಲ್ಲಿ ರಸ್ತೆ ಅಪಘಾತಗಳು ಹಾಗೂ ರಸ್ತೆ ಅಪಘಾತಗಳಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿಮೆಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ವಾಹನ ಸವಾರರ ಪ್ರತಿಭಟನೆಯ ನಡುವೆಯೂ ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಿತು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಅಪಘಾತಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಹೊಸ ಮೋಟಾರು ವಾಹನ ಕಾಯ್ದೆಯ ಜೊತೆಗೆ ರಸ್ತೆಗಳ ಗುಣಮಟ್ಟವನ್ನು ಸುಧಾರಿಸುವುದರತ್ತಲೂ ಗಮನ ಹರಿಸುತ್ತಿದೆ.

ಇದರ ಜೊತೆಗೆ ವಾಹನಗಳು ವಿವಿಧ ಸುರಕ್ಷತಾ ಫೀಚರ್ ಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೊಸ ವಾಹನಗಳಲ್ಲಿ ಎಬಿಎಸ್, ಏರ್‌ಬ್ಯಾಗ್‌ಗಳಂತಹ ಪ್ರಮುಖ ಸುರಕ್ಷತಾ ಫೀಚರ್'ಗಳನ್ನು ಕಡ್ಡಾಯಗೊಳಿಸಲಾಗಿದೆ.