ಟಾಟಾ ಕಾರು ಖರೀದಿಸಿದ 'ಗಿಚ್ಚಿ ಗಿಲಿ ಗಿಲಿ' ಸ್ಟಾರ್ ಪ್ರಶಾಂತ್ ಗೌಡ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ 'ಗಿಚ್ಚಿ ಗಿಲಿ ಗಿಲಿ' ಶೋನಲ್ಲಿ ಭಾಗವಹಿಸುವ ಮೂಲಕ ಪ್ರಶಾಂತ್ ಗೌಡ (Prashanth Gowda) ಮನೆ ಮಾತಾಗಿದ್ದಾರೆ. ಮೊದಲೆರೆಡು ಸೀಸನ್‌ಗಳಲ್ಲಿ ಸ್ಪರ್ಧಿಯಾಗಿದ್ದ ಪ್ರಶಾಂತ್, ಮೂರನೇ ಸೀಸನ್‌ನಲ್ಲಿ ಮೆಂಟರ್ ಆಗಿದ್ದರು. ತಮ್ಮ ವಿಭಿನ್ನವಾದ ನಟನೆ ಮೂಲಕ ಸಾವಿರಾರು ಜನ ಅಭಿಮಾನಿಗಳನ್ನು ಹೊಂದಿದ್ದಾರೆ. ಟಾಲೆಂಟೆಡ್ ಕಲಾವಿದ (Talented kalavida) ಯುಟ್ಯೂಬ್ ಚಾನೆಲ್ ಮೂಲಕವೂ ಸಖತ್ ಫೇಮಸ್ ಆಗಿದ್ದಾರೆ. ಇತ್ತಿಚೆಗೆ ಪ್ರಶಾಂತ್ ಗೌಡ ಅವರು ನೂತನ ಟಾಟಾ ಕರ್ವ್ ಇವಿಯನ್ನು ಖರೀದಿ ಮಾಡಿದ್ದಾರೆ.

ಈ ಬಗ್ಗೆ ಸ್ವತಃ ಪ್ರಶಾಂತ್ ಗೌಡ ಅವರೇ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಹೊಚ್ಚ ಹೊಸ ಟಾಟಾ ಕರ್ವ್ ಇವಿಯನ್ನು ವಿತರಣೆ ಪಡೆಯುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ನೂತನ ಕಾರು ತೆಗದುಕೊಂಡಿರುವುದಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಪ್ರಶಾಂತ್ ಗೌಡ ಅವರು ಕರ್ವ್ ಇವಿಯ ಟಾಪ್ ಎಂಡ್ ವೇರಿಯೆಂಟ್ ಕೊಂಡುಕೊಂಡಿದ್ದಾರೆ ಎಂದು ಗೊತ್ತಾಗಿದೆ.

Gicchi Gili Gili Fame Prashanth Gowda Buys Tata Curvv EV Details

ಸದ್ಯ ದೇಶೀಯವಾಗಿ ಖರೀದಿಗೆ ದೊರೆಯುವ ಟಾಟಾ ಕರ್ವ್ ಇವಿ (Tata Curvv EV) ಬಗ್ಗೆ ಹೇಳುವುದಾದರೆ, ಇದೊಂದು ಎಲೆಕ್ಟ್ರಿಕ್ ಕೂಪೆ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಕನಿಷ್ಠ ರೂ.17.49 ಲಕ್ಷ ಮತ್ತು ಗರಿಷ್ಠ ರೂ.21.99 ಲಕ್ಷ ಎಕ್ಸ್ ಶೋರೂಂ (ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ.

ಈ ಕಾರು ಅತ್ಯಾಧುನಿಕವಾಗಿರುವ ವಿನ್ಯಾಸವನ್ನು ಹೊಂದಿದೆ. ಕ್ರಿಯೇಟಿವ್, ಅಕಾಂಪ್ಲಿಶ್ಡ್, ಅಕಾಂಪ್ಲಿಶ್ಡ್ ಪ್ಲಸ್ ಎಸ್ ಮತ್ತು ಎಂಪವರ್ಡ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಫ್ಲೇಮ್ ರೆಡ್, ಎಂಪವರ್ಡ್ ಆಕ್ಸೈಡ್ ಹಾಗೂ ಪ್ರಿಸ್ಟಿನ್ ವೈಟ್ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಸಂಚರಿಸಬಹುದು.

Gicchi Gili Gili Fame Prashanth Gowda Buys Tata Curvv EV Details

ನೂತನ ಟಾಟಾ ಕರ್ವ್ ಇವಿ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 55 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯಹದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್‌ವರೆಗೆ ಓಡುತ್ತದೆ. ಡಿಸಿ ಫಾಸ್ಟ್ ಚಾರ್ಜಿಂಗ್ ಬಳಕೆಯಲ್ಲಿ 10 - 80% ಚಾರ್ಜ್ ಆಗುವುದಕ್ಕೆ 40 ನಿಮಿಷ ಬೇಕಾಗುತ್ತದೆ.

ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (10.25-ಇಂಚು), ಏರ್ ಪ್ಯೂರಿಫೈಯರ್‌, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, 9-ಸ್ಪೀಕರ್ ಜೆಬಿಎಲ್-ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಕರ್ವ್ ಇವಿ (Tata Curvv EV) ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿ (Bharat NCAP) ತಪಾಸಣೆ ಪರೀಕ್ಷೆಯಲ್ಲಿ 5-ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 32ಕ್ಕೆ 29.50 ಹಾಗೂ ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 43.66 ಅಂಕಗಳನ್ನು ಹೊಂದುವಲ್ಲಿ ಯಶಸ್ವಿಯಾಗಿದೆ.

ಪ್ರಯಾಣಿಕರ ರಕ್ಷಣೆಗಾಗಿ ಕರ್ವ್ ಎಲೆಕ್ಟ್ರಿಕ್ ಎಸ್‌ಯುವಿ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 6 ಏರ್‌ಬ್ಯಾಗ್‌, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, October 25, 2024, 12:01 [IST]
English summary
Gicchi gili gili fame prashanth gowda buys tata curvv ev details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+