ಕಷ್ಟದಿಂದ ಮೇಲೆದ್ದ ಗಿಲ್ಲಿ ನಟ: ಹೊಸ ಎಂಜಿ ಕಾರು ಖರೀದಿ..! ಬೆಲೆ ಕೇಳಿದ್ರೆ ಬೆಚ್ಚಿ ಬೀಳ್ತಿರಾ?

ಗಿಲ್ಲಿ ನಟ (Gilli Nata) ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ.. ತನ್ನ ಹಾಸ್ಯದ ಮೂಲಕ ಭಾರೀ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ಡಿಕೆಡಿ (ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್) ಶೋನಲ್ಲಿ ಭಾಗವಹಿಸಿದ್ದ ಅವರು, ವೇದಿಕೆ ಮೇಲೆ 'ಮಹಾನಟಿ' ಖ್ಯಾತಿಯ ಗಗನಾ ಜೊತೆಗೆ ಮಾಡುತ್ತಿದ್ದ ಕಾಮಿಡಿ ವೀಕ್ಷಕರಿಗೆ ಇಷ್ಟವಾಗಿತ್ತು. ಗಿಲ್ಲಿ ನಟನ ನಿಜವಾದ ಹೆಸರು ನಟರಾಜ್ ಎಂದು.. ಮೂಲತಃ ಮಂಡ್ಯದವರಾಗಿದ್ದು, ಹಾಸ್ಯ ಕಲಾವಿದನಾಗಿ ಬದುಕು ಕಟ್ಟಿಕೊಳ್ಳಲು ಸಾಕಷ್ಟು ಶ್ರಮಪಟ್ಟಿದ್ದಾರೆ.

ಸದ್ಯ, ಗಿಲ್ಲಿ ನಟ ದುಬಾರಿ ಬೆಲೆಯ ಎಂಜಿ ಹೆಕ್ಟರ್ (MG Hector) ಕಾರನ್ನು ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದಕ್ಕೆ ಸಂಬಂಧಿಸಿದ ಒಂದಷ್ಟು ಪೋಸ್ಟ್‌ಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳಿಂದಲೂ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ, ಗಿಲ್ಲಿ ನಟ ನೂತನ ಕಾರನ್ನು ತೆಗೆದುಕೊಂಡಿರುವ ಬಗ್ಗೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Gilli Nata Buys New MG Hector Suv Details

ಎಂಜಿ ಹೆಕ್ಟರ್ ವಿಶೇಷತೆಗಳೇನು: ಇದೊಂದು ಎಸ್‌ಯುವಿಯಾಗಿದೆ. ರೂ.14 ಲಕ್ಷದಿಂದ ರೂ.22.89 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಶೈನ್ ಪ್ರೊ, ಸೆಲೆಕ್ಟ್ ಪ್ರೊ ಮತ್ತು ಸ್ಮಾರ್ಟ್ ಪ್ರೊ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್‌ಇಡಿ ಫಾಗ್- ಲ್ಯಾಂಪ್‌ಗಳು & 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಎರಡು ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ಇದರ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 143 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 2-ಲೀಟರ್ ಡೀಸೆಲ್ ಎಂಜಿನ್ 170 PS ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 350 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ನೂತನ ಎಂಜಿ ಹೆಕ್ಟರ್ ಎಸ್‌ಯುವಿ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯೂನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಜೊತೆಗೆ 587 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ ಎಂಜಿ ಹೆಕ್ಟರ್ ಕಾರು ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಮುಖವಾಗಿ 14-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸಂಪೂರ್ಣ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 8-ಸ್ಪೀಕರ್‌ಗಳನ್ನು ಒಳಗೊಂಡಿದೆ.

ಈ ಕಾರು, ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, January 19, 2025, 13:55 [IST]
English summary
Gilli nata buys new mg hector suv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+