Just In
- 49 min ago
ರೋಡ್ ಟೆಸ್ಟಿಂಗ್ನಲ್ಲಿ ಕಂಡುಬಂದ ಹ್ಯುಂಡೈ ಕ್ರೆಟಾ 7 ಸೀಟರ್ ವರ್ಷನ್
- 12 hrs ago
ಬಿಡುಗಡೆಗೆ ಸಜ್ಜಾದ ಹೊಸ ಡುಕಾಟಿ ಸ್ಕ್ರ್ಯಾಂಬ್ಲರ್ ಬೈಕುಗಳು
- 12 hrs ago
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಫೋರ್ಸ್ ನ್ಯೂ ಜನರೇಷನ್ ಗೂರ್ಖಾ
- 12 hrs ago
ಸೀಮನ್ಸ್ ಕಂಪನಿಯ ಜೊತೆಗೂಡಿ ಆಧುನಿಕ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ಅಭಿವೃದ್ದಿಪಡಿಸಲಿದೆ ಓಲಾ
Don't Miss!
- Lifestyle
ಚಳಿಗಾಲದಲ್ಲಿ ಚರ್ಮದ ರಕ್ಷಣೆಗೆ ಈ ಆಹಾರಗಳನ್ನು ಸೇವಿಸುವುದನ್ನು ಮರೆಯಬೇಡಿ..
- News
ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು!
- Sports
ಹೊಸ ಪರೀಕ್ಷೆಗೆ ಒಳಗಾಗಬೇಕು ಕ್ರಿಕೆಟ್ ತಾರೆಯರು: 8.30 ನಿಮಿಷದಲ್ಲಿ 2 ಕಿ.ಮೀ ಗುರಿ
- Movies
ಸ್ಯಾಂಡಲ್ ವುಡ್ ಸುಂದರಿಯರು; ಅಪರೂಪದ ಫೋಟೋ ಹಂಚಿಕೊಂಡ ಮಾಲಾಶ್ರೀ, ಶ್ರುತಿ
- Finance
ಬಜೆಟ್ 2021: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಜನವರಿ 30ರಂದು ಸರ್ವ ಪಕ್ಷಗಳ ಸಭೆ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ರಸ್ತೆ ಅಪಘಾತಗಳು ಭಾರತದಲ್ಲಿ ಅತಿ ಹೆಚ್ಚು. ಭಾರತದಲ್ಲಿ ಮಾತ್ರ ವರ್ಷ ಸುಮಾರು 1.50 ಲಕ್ಷ ಜನ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ. ಈ ಕಾರಣಕ್ಕೆ ರಸ್ತೆ ಅಪಘಾತಗಳಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದರಿಂದ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಈ ನಿಯಮ ಉಲ್ಲಂಘನೆಗಳಲ್ಲಿ ಕುಡಿದು ವಾಹನ ಚಾಲನೆ ಮಾಡುವುದು, ಅತಿ ವೇಗವಾಗಿ ವಾಹನ ಚಾಲನೆ ಮಾಡುವುದು, ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು ಸೇರಿವೆ.

2019ರ ಸೆಪ್ಟೆಂಬರ್ 1ರಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಸಂಚಾರ ನಿಯಮಗಳ ಉಲ್ಲಂಘನೆಗಾಗಿ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತದೆ.

ರಸ್ತೆ ಅಪಘಾತಗಳಿಗೆ ವಾಹನ ಚಾಲಕರು ಮಾತ್ರ ಕಾರಣವಾಗುವುದಿಲ್ಲ. ಕೆಟ್ಟ ರಸ್ತೆಗಳು ಸಹ ಅಪಘಾತಗಳಿಗೆ ಕಾರಣವಾಗುತ್ತವೆ. ಭಾರತದಲ್ಲಿನ ರಸ್ತೆಗಳು ತೀರಾ ಹದಗೆಟ್ಟಿವೆ. ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿಗಳು ಈ ಕೆಟ್ಟ ರಸ್ತೆಗಳಿಗೆ ಮೂಲ ಕಾರಣ.

ಪರಿಸ್ಥಿತಿ ಈಗ ಬದಲಾಗುತ್ತಿದೆ. ನರೇಂದ್ರ ಮೋದಿರವರು ಪ್ರಧಾನ ಮಂತ್ರಿಯಾದ ನಂತರ ರಸ್ತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳನ್ನು ವೇಗವಾಗಿ ಅಭಿವೃದ್ಧಿಪಡಿಸುತ್ತಿದೆ.

ಗುಣಮಟ್ಟದ ರಸ್ತೆಗಳಿಂದ ಅಪಘಾತಗಳು ಕಡಿಮೆಯಾಗುತ್ತವೆ. ಇದರ ಜೊತೆಗೆ ರಸ್ತೆಗಳು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಕಾರಣಕ್ಕೆ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಉತ್ಸುಕವಾಗಿದೆ.

ಕಳೆದ ವರ್ಷ ಕೇಂದ್ರ ಸರ್ಕಾರವು ಸುಮಾರು 4 ಸಾವಿರ ಕಿ.ಮೀಗಳಷ್ಟು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಿದೆ. ಈ ಕಾರಣಕ್ಕೆ ಇದನ್ನು ಸಾಧನೆಯಾಗಿ ನೋಡಲಾಗುತ್ತದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್ಎಚ್ಎಐ) 2019ರ ಆರ್ಥಿಕ ವರ್ಷದಲ್ಲಿ 3,979 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿರುವುದಾಗಿ ಹೇಳಿದೆ. ಇದಕ್ಕೂ ಮುಂಚೆ ಇಷ್ಟು ಪ್ರಮಾಣದ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿರಲಿಲ್ಲ.

ಕಳೆದ ಕೆಲವು ವರ್ಷಗಳಿಂದ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ವೇಗವಾಗಿ ನಿರ್ಮಿಸಲಾಗುತ್ತಿದೆ. 2018-19ರ ಆರ್ಥಿಕ ವರ್ಷದಲ್ಲಿ 3,380 ಕಿಲೋಮೀಟರ್ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿತ್ತು.

ಭಾರತದ ರಸ್ತೆಗಳ ಗುಣಮಟ್ಟವು ಹಿಂದೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತಿದೆ. ಇದರಿಂದಾಗಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿ, ಆರ್ಥಿಕತೆಯು ಸುಧಾರಿಸಲಿದೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.