ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಯಾವುದೇ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಸರಕು ವಾಹನಗಳ ತ್ವರಿತ ಚಲನೆಗೆ ಈ ಹೆದ್ದಾರಿಗಳು ನೆರವಾಗುತ್ತವೆ. ಈ ಕಾರಣಕ್ಕೆ ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಬಗ್ಗೆ ಕೇಂದ್ರ ಸರ್ಕಾರವು ದಿಟ್ಟ ಹೆಜ್ಜೆಯನ್ನಿಡುತ್ತಿದೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಹೊಸ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲು ಹಾಗೂ ಅಸ್ತಿತ್ವದಲ್ಲಿರುವ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಉತ್ಸುಕರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವಲ್ಲಿ ಸರ್ಕಾರ ಎಷ್ಟು ಯಶಸ್ವಿಯಾಗಿದೆ ಎಂಬ ಮಾಹಿತಿಯನ್ನು ಬಿಡುಗಡೆಗೊಳಿಸಲಾಗಿದೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಈ ಏಪ್ರಿಲ್ ತಿಂಗಳಿನಿಂದ ಆಗಸ್ಟ್ ತಿಂಗಳವರೆಗೆ ಐದು ತಿಂಗಳ ಅವಧಿಯಲ್ಲಿ ಒಟ್ಟು 3,181 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಈ ಅವಧಿಯಲ್ಲಿ 2,771 ಕಿ.ಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿತ್ತು. ಈ ಮೂಲಕ ಸರ್ಕಾರವು ನಿಗದಿತ ಗುರಿಗಿಂತ ಹೆಚ್ಚು ಪ್ರಗತಿಯನ್ನು ಸಾಧಿಸಿದೆ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಕಾರಣದಿಂದಾಗಿ ಇಡೀ ಪ್ರಪಂಚವೇ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಲಾಕ್ ಡೌನ್ ಹಾಗೂ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ನಡುವೆಯೂ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಿರುವುದು ಗಮನಾರ್ಹ. ಈ ಹೆದ್ದಾರಿಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಿವೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಈ ಹಣಕಾಸು ವರ್ಷದಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚಿನ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಲಾಗಿದೆ. ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಬಿಡುಗಡೆಗೊಳಿಸಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ, ಭಾರತದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕಾಗಿ ನಿಗದಿಪಡಿಸಿದ್ದ ಗುರಿಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಮೀರಿಸಿದೆ ಎಂದು ಹೇಳಲಾಗಿದೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

2020ರ ಏಪ್ರಿಲ್-ಆಗಸ್ಟ್ ಅವಧಿಯಲ್ಲಿ 3,181 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿಗಳು ಪೂರ್ಣಗೊಂಡಿವೆ. ಈ ಅವಧಿಯಲ್ಲಿ ನಿಗದಿಪಡಿಸಿದ್ದ 2,771 ಕಿ.ಮೀಗಳ ಗುರಿಯನ್ನು ಮೀರಿಸಲಾಗಿದೆ ಎಂದು ಸಹ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಈ ಪೈಕಿ 2,104 ಕಿ.ಮೀಗಳನ್ನು ರಾಜ್ಯಗಳ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ನಿರ್ಮಿಸಿದ್ದರೆ, 879 ಕಿ.ಮೀ.ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಹೆಚ್‌ಎಐ) ನಿರ್ಮಿಸಿದೆ.

ನಿಗದಿಗಿಂತ ಹೆಚ್ಚಿನ ಪ್ರಮಾಣದ ಹೆದ್ದಾರಿ ನಿರ್ಮಿಸಿದ ಕೇಂದ್ರ ಸರ್ಕಾರ

ಇನ್ನುಳಿದ 198 ಕಿ.ಮೀ.ಗಳನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮವು (ಎನ್‌ಹೆಚ್‌ಐಡಿಸಿಎಲ್) ಪೂರ್ಣಗೊಳಿಸಿದೆ. ಸರ್ಕಾರವು ನಿರ್ಮಾಣ ಕಾರ್ಯಗಳನ್ನು ವೇಗಗೊಳಿಸುವುದರ ಜೊತೆಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅಪಘಾತಗಳನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ.

ಸೂಚನೆ: ಈ ಲೇಖನದಲ್ಲಿ ಸಾಂದರ್ಭಿಕ ಚಿತ್ರಗಳನ್ನು ಬಳಸಲಾಗಿದೆ.

Most Read Articles

Kannada
English summary
Government creates new record in National Highway construction. Read in Kannada.
Story first published: Saturday, September 5, 2020, 9:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X