ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರು ಚಾಲನೆ ಮಾಡಿದ ಗ್ರೀಸ್ ಪ್ರಧಾನಿ
ಅಮೆರಿಕಾ ಮೂಲದ ಟೆಸ್ಲಾ ಕಾರು ತಯಾರಕ ಕಂಪನಿಯು ಕೇವಲ ಎಲೆಕ್ಟ್ರಿಕ್ ಕಾರುಗಳನ್ನು ಮಾತ್ರ ಉತ್ಪಾದಿಸುತ್ತದೆ. ಟೆಸ್ಲಾ ಕಾರುಗಳು ವಿಶ್ವಾದ್ಯಂತ ಜನಪ್ರಿಯವಾಗಿವೆ. ಅದರಲ್ಲೂ ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರಿಗೆ ಹೆಚ್ಚಿನ ಬೇಡಿಕೆಯಿದೆ.

ಈ ಕಾರು ಟೆಸ್ಲಾ ಕಂಪನಿಯ ಇತರ ಕಾರುಗಳಿಗಿಂತ ಕಡಿಮೆ ಬೆಲೆಯನ್ನು ಹೊಂದಿದೆ. ಜೊತೆಗೆ ಈ ಕಾರು ಹೆಚ್ಚು ವಿಶೇಷ ಫೀಚರ್ ಗಳನ್ನು ಹೊಂದಿರುವ ಎಲೆಕ್ಟ್ರಿಕ್ ಕಾರ್ ಸಹ ಹೌದು. ಈ ಕಾರಣಕ್ಕೆ ಈ ಕಾರು ವಿದೇಶಗಳಲ್ಲಿ ಹೆಚ್ಚಿನ ಜನಪ್ರಿಯತೆಯನ್ನು ಹೊಂದಿದೆ. ತನ್ನ ದೇಶದ ಪ್ರಧಾನ ಮಂತ್ರಿಯ ಬಳಕೆಗಾಗಿ ಗ್ರೀಸ್ ಸರ್ಕಾರವು ಈ ಕಾರನ್ನು ಖರೀದಿಸಿದೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧ ಪಟ್ಟ ವಿವರಗಳನ್ನು ಈ ಲೇಖನದಲ್ಲಿ ನೋಡೋಣ.

ಈ ಬಗ್ಗೆ ಟ್ವಿಟರ್ ಬಳಕೆದಾರರಾದ ಜನ್ನಿಸ್ 134 ಎಂಬುವವರು ಪೋಸ್ಟ್ ಮಾಡಿದ್ದಾರೆ. ಅವರು ಪೋಸ್ಟ್ ಮಾಡಿರುವ ಫೋಟೋದಲ್ಲಿ ಗ್ರೀಸ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಹಾಗೂ ಅವರ ಪತ್ನಿ ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರಿನೊಳಕ್ಕೆ ಹೋಗುವುದನ್ನು ಕಾಣಬಹುದು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಗ್ರೀಸ್ ಜನತೆ, ಟೆಸ್ಲಾ ಕಂಪನಿಯ ಸಿಇಒ ಸೇರಿದಂತೆ ಸಾಕಷ್ಟು ಜನರು ಇಷ್ಟಪಟ್ಟಿದ್ದಾರೆ. ಟೆಸ್ಲಾ ಕಂಪನಿಯು ಇತ್ತೀಚಿಗೆ ಗ್ರೀಸ್ ದೇಶದಲ್ಲಿ ತನ್ನ ಎಲೆಕ್ಟ್ರಿಕ್ ಕಾರುಗಳ ಶೋ ರೂಂ ಅನ್ನು ತೆರೆದಿದೆ.

ಈಗ ಗ್ರೀಸ್‌ನ ಪ್ರಧಾನ ಮಂತ್ರಿ ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಚಾಲನೆ ಮಾಡಿದ ಫೋಟೋಗಳು ಹೊರಬಂದಿವೆ. ಈ ಎಲೆಕ್ಟ್ರಿಕ್ ಕಾರನ್ನು ಖರೀದಿಸಿರುವ ಬಗ್ಗೆ ಗ್ರೀಸ್ ಸರ್ಕಾರ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಗ್ರೀಸ್‌ನ ಪ್ರಧಾನ ಮಂತ್ರಿ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಟೆಸ್ಟ್ ಡ್ರೈವ್ ಮಾಡಿರಬಹುದು ಎಂಬ ಸುದ್ದಿಗಳು ಸಹ ಹರಿದಾಡುತ್ತಿವೆ. ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರು ಕಡಿಮೆ ಬೆಲೆಯನ್ನು ಹೊಂದಿದ್ದರೂ ಹಲವಾರು ಐಷಾರಾಮಿ ಫೀಚರ್ ಗಳನ್ನು ಹೊಂದಿದೆ.

ಮಾಡೆಲ್ 3 ಅಲ್ಟ್ರಾ-ಲಗ್ಷುರಿ ಫೀಚರ್ ಗಳನ್ನು ಹೊಂದಿದೆ. ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರು ಮೈಲೇಜ್ ಹಾಗೂ ಅದರಲ್ಲಿರುವ ಟೆಕ್ನಾಲಜಿಗಳಿಂದಲೂ ಅಚ್ಚರಿಯನ್ನುಂಟು ಮಾಡುತ್ತದೆ. ಈ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 530 ಕಿ.ಮೀಗಳವರೆಗೆ ಚಲಿಸುತ್ತದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಈ ಕಾರನ್ನು ಕೇವಲ 30 ನಿಮಿಷಗಳಲ್ಲಿ ಸೂಪರ್ ಫಾಸ್ಟ್ ಚಾರ್ಜರ್ ಮೂಲಕ 270 ಕಿ.ಮೀಗಳಷ್ಟು ದೂರ ಚಲಿಸುವಷ್ಟು ಚಾರ್ಜ್ ಮಾಡಬಹುದು.ದುರದೃಷ್ಟವಶಾತ್ ಈ ಕಾರು ಭಾರತದಲ್ಲಿ ಮಾರಾಟವಾಗುತ್ತಿಲ್ಲ.

ಈ ಕಾರು ಮಾತ್ರವಲ್ಲದೇ ಟೆಸ್ಲಾ ಕಂಪನಿಯ ಯಾವುದೇ ಎಲೆಕ್ಟ್ರಿಕ್ ಕಾರುಗಳು ಭಾರತದಲ್ಲಿ ಮಾರಾಟವಾಗುವುದಿಲ್ಲ. ಟೆಸ್ಲಾ ಕಂಪನಿಯು ಭಾರತದಲ್ಲಿ ತನ್ನ ಕಾರುಗಳನ್ನು ಬಿಡುಗಡೆಗೊಳಿಸುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಗ್ರೀಸ್‌ನ ಪ್ರಧಾನ ಮಂತ್ರಿ ಟೆಸ್ಲಾ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ದೇಶದ ಜನರಿಗೆ ಸ್ಫೂರ್ತಿ ನೀಡುವ ರೀತಿಯಲ್ಲಿ ಚಾಲನೆ ಮಾಡಿದ್ದಾರೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಿ ಎಂಬುದು ಇದರ ಹಿಂದಿರುವ ಉದ್ದೇಶ.

ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಹೆಚ್ಚಿಸಲು ತೆರಿಗೆ ರಿಯಾಯತಿಯಂತಹ ಯೋಜನೆಯನ್ನೂ ಅವರು ಘೋಷಿಸಿದ್ದಾರೆ. ಇದರಿಂದಾಗಿ ಗ್ರೀಸ್ ನಲ್ಲಿ ಈಗ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಈ ಸಂಖ್ಯೆಯು ದೇಶದ ಒಟ್ಟಾರೆ ವಾಹನ ಸಾಂದ್ರತೆಯ 0.3%ನಷ್ಟು ಆಗಿದ್ದರೂ ಗ್ರೀಸ್ ಸರ್ಕಾರದ ಪ್ರಯತ್ನದಿಂದಾಗಿ ಈ ಸಂಖ್ಯೆಯನ್ನು ತಲುಪಿದೆ ಎಂದು ವರದಿಗಳು ಹೇಳಿವೆ.


Click it and Unblock the Notifications