Dhananjay: ಡಾಲಿ ಧನಂಜಯ್ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ನಿರ್ಮಾಪಕರು, ಪಾರ್ಟಿ ಕೇಳಿದ ನಟಿ ರಮ್ಯಾ
ನಟ ಡಾಲಿ ಧನಂಜಯ್ (Dhananjay) ನಟನೆಯ 25ನೇ ಸಿನಿಮಾ 'ಗುರುದೇವ್ ಹೊಯ್ಸಳ' ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಖಡಕ್ ಪೊಲೀಸ್ ಅಧಿಕಾರಿ ಗುರುದೇವ್ ಹೊಯ್ಸಳ ಪಾತ್ರದಲ್ಲಿ ಪ್ರೇಕ್ಷಕರ ಗಮನಸೆಳೆದಿದ್ದಾರೆ. ಸಿನಿಮಾ ಗೆದ್ದ ಖುಷಿಗೆ ಡಾಲಿಗೆ ಹೊಸ ಐಷಾರಾಮಿ ಕಾರು ಗಿಫ್ಟ್ ಸಿಕ್ಕಿದೆ.
'ಗುರುದೇವ್ ಹೊಯ್ಸಳ' ಸಿನಿಮಾ ನಿರ್ಮಾಪಕರಾದ ನಿರ್ಮಾಣ ಮಾಡಿದ ಕೆಆರ್‌ಜಿ ಸ್ಟುಡಿಯೋಸ್ನ ಕಾರ್ತಿಕ್ ಗೌಡ ಮತ್ತು ಯೋಗಿ ಜಿ. ರಾಜ್ ಅವರು ಧನಂಜಯ್ ಅವರು ಡಾಲಿಗೆ ಐಷಾರಾಮಿ ಟೊಯೊಟಾ ವೆಲ್‌ಫೈರ್ ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಟೊಯೊಟಾ ವೆಲ್‌ಫೈರ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.96.55 ಲಕ್ಷವಾಗಿದೆ. ಈ ಕಾರಿನ ಆನ್ ರೋಡ್ ಬೆಲೆಯು ರೂ.1.19 ಕೋಟಿಯಾಗುತ್ತದೆ.

ನಟ ಧನಂಜಯ್, ಸೋಷಿಯಲ್ ಮೀಡಿಯಾದಲ್ಲಿ '25ನೇ ಸಿನಿಮಾ ಮತ್ತು ನನ್ನ ಸ್ಪೆಷಲ್ ವ್ಯಕ್ತಿಗಳಿಂದ ಒಂದು ಸ್ಪೆಷಲ್ ಉಡುಗೊರೆ. ಲವ್ ಯೂ ನಾವೆಲ್ಲರೂ ಒಟ್ಟಿಗೆ ಸೇರಿ ಇನ್ನಷ್ಟು ಸಾಧಿಸೋಣ.. ಒಳ್ಳೆಯ ನೆನಪುಗಳಿಗಾಗಿ ಧನ್ಯವಾದಗಳು. ನನ್ನ ನಿರ್ಮಾಪಕರ ಮತ್ತು ಅಭಿಮಾನಿಗಳ ಕೊಡುಗೆ ಎಂದು ಬರೆದುಕೊಂಡು ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದಾರೆ. ಜೊತೆಗೆ ಧನಂಜಯ್ಗೆ ಶುಭಾಶಯ ತಿಳಿಸಿದ್ದಾರೆ.
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ನಿಮ್ಮ ಹೊಯ್ಸಳ ಸಕ್ಸಸ್ ಹಾಗೂ ಹೊಸ ಕಾರ್‌ಗೆ ಕ್ಯಾಂಗ್ರಾಟ್ಸ್ ಅಂತ ಶುಭಾಶಯ ತಿಳಿಸಿದ್ದಾರೆ. ಡಾಲಿ ಧನಂಜಯ್ ಅವರೇ ನಮ್ಮನ್ನ ನಿಮ್ಮ ಹೊಸ ಕಾರಿನಲ್ಲಿ ಯಾವಾಗ ಕರೆದುಕೊಂಡು ಹೋಗುತ್ತೀರಾ? ಪಾರ್ಟಿ ಯಾವಾಗ ಕೊಡ್ತೀರಾ ಅಂತ ರಮ್ಯಾ ಕೇಳಿದ್ದಾರೆ. ಇನ್ನು ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆಯು ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದು 'ರತ್ನನ್ ಪ್ರಪಂಚ'. ಈ ಸಿನಿಮಾದ ಹೀರೋ ಆಗಿ ನಟನೆ ಮಾಡಿರುವುದು ಧನಂಜಯ್.

ನಂತರ ಇದೇ ಸಂಸ್ಥೆಯು ಧನಂಜಯ್ ಜೊತೆಗೆ 'ಗುರುದೇವ್ ಹೊಯ್ಸಳ' ಸಿನಿಮಾ ಮಾಡಿದೆ. ಇನ್ನು ಕೆಆರ್‌ಜಿ ಸ್ಟುಡಿಯೋಸ್ ಸಂಸ್ಥೆ ನೀಡಿದ ಟೊಯೊಟಾ ವೆಲ್‌ಫೈರ್ ಕಾರಿನ ಬಗ್ಗೆ ಹೇಳುವುದಾದರೆ, ಈ ಟೊಯೊಟಾ ವೆಲ್‌ಫೈರ್ ಭಾರತೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಪಡೆದುಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನವನ್ನು ಒಳಗೊಂಡಿರುವ ವೆಲ್‌ಫೈರ್ ಪ್ರೀಮಿಯಂ ಕಾರು ಗ್ರಾಹಕರನ್ನು ಆಕರ್ಷಿಸುತ್ತಿದೆ.
ಐಷಾರಾಮಿ ಟೊಯೊಟಾ ವೆಲ್‌ಫೈರ್ ಮಾದರಿಯು ಎಕ್ಸಿಕ್ಯುಟಿವ್ ಲೌಂಜ್ ಎಂಬ ಒಂದೇ ರೂಪಾಂತರದಲ್ಲಿ ಲಭ್ಯವಿದೆ. ಈ ಟೊಯೊಟಾ ವೆಲ್‌ಫೈರ್ ಕಾರಿನಲ್ಲಿ 2.5 ಲೀಟರ್ ನಾಲ್ಕು ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಇದು ಎರಡು ಎಲೆಕ್ಟ್ರಿಕ್ ಮೋಟರ್‌ಗಳೊಂದಿಗೆ ಜೋಡಿಸಲ್ಪಟ್ಟಿದೆ, ಇದು ಎಂಜಿನ್ ಒಟ್ಟಾಗಿ 198 ಬಿಹೆಚ್‍ಪಿ ಪವರ್ ಮತ್ತು 235 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ಅನ್ನು ಸಿವಿಟಿ ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ.

ಈ ಪ್ರೀಮಿಯಂ ವೆಲ್‌ಫೈರ್ ಕಾರಿನ ಒಳಭಾಗದಲ್ಲಿ ಎರಡನೇ ಸಾಲಿನಲ್ಲಿ ಎರಡು ಬೆಲೆಬಾಳುವ ಎಲೆಕ್ಟ್ರಿಕ್ ಆಗಿ ಅಡೆಜೆಸ್ಟ್ ಮಾಡುವ ವಿಐಪಿ ಸೀಟುಗಳನು ಒಳಗೊಂಡಿವೆ. ಇನ್ನು ಇದರಲ್ಲಿ ಕೂಲಿಂಗ್ ಫಂಕ್ಷನ್ ಅನ್ನು ಕೂಡ ಒಳಗೊಂಡಿದೆ. ಜೊತೆಗೆ ಲೆಗ್ ರೆಸ್ಟ್ ಮತ್ತು ರೆಕ್ಲೈನಬಲ್ ಬ್ಯಾಕ್‌ರೆಸ್ಟ್ ಮತ್ತು ಮೆಮೊರಿ ಫಂಕ್ಷನ್ ಅನ್ನು ಒಳಗೊಂಡಿದೆ. ಈ ಐಷಾರಾಮಿ ವೆಲ್‌ಫೈರ್ ಎಂಪಿವಿಯಲ್ಲಿ 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಹೊಮ್ದಿದೆ,
ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇಯೊಂದಿಗೆ 13 ಇಂಚಿನ ಹಿಂಭಾಗದ ಡಿಸ್ ಪ್ಲೇಯನ್ನು ರೂಫ್ ಮೇಲೆ ನೀಡಲಾಗಿದೆ. ಇನ್ನು ಈ ಎಂಪಿವಿಯಲ್ಲಿ ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಂ, ಎರಡನೇ ಮತ್ತು ಮೂರನೇ ಸಾಲುಗಳಿಗೆ ಸನ್ ಬ್ಲೈಂಡ್ಸ್, 16-ಬಣ್ಣದ ಆಂಬಿಯೆಂಟ್ ಲೈಟಿಂಗ್, ಮೂರು ಹಂತಹ ಆಟೋ ಕ್ಲೈಮೇಟ್ ಕಂಟ್ರೋಲ್, ಆಟೋಮ್ಯಾಟಿಕ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳುನ್ನು ಒಳಗೊಂಡಿದೆ.


Click it and Unblock the Notifications








