Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 3 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 3 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಂಗ್ ಸೈಡ್'ನಲ್ಲಿ ವಾಹನ ಚಾಲನೆ ಮಾಡುವವರ ಡ್ರೈವಿಂಗ್ ಲೈಸೆನ್ಸ್ ರದ್ದುಪಡಿಸಲು ಮುಂದಾದ ಪೊಲೀಸ್ ಇಲಾಖೆ
ರಾಂಗ್ ಸೈಡ್'ನಲ್ಲಿ ವಾಹನ ಚಾಲನೆ ಮಾಡುವುದು ಭಾರತದಲ್ಲಿ ಕಂಡು ಬರುವ ದೊಡ್ಡ ಸಂಚಾರ ನಿಯಮ ಉಲ್ಲಂಘನೆಯಾಗಿದೆ. ಬಹುತೇಕ ವಾಹನ ಸವಾರರು ಯು-ಟರ್ನ್ ತೆಗೆದುಕೊಳ್ಳುವ ಬದಲು ವಾಹನಗಳನ್ನು ರಾಂಗ್ ಸೈಡ್'ನಲ್ಲಿ ಚಾಲನೆ ಮಾಡುತ್ತಾರೆ.

ಇದರಿಂದಾಗಿ ಟ್ರಾಫಿಕ್ ಜಾಮ್ ಅಥವಾ ಕೆಲವೊಮ್ಮೆ ಅಪಘಾತಗಳು ಸಂಭವಿಸುತ್ತವೆ. ಈ ಕಾರಣಕ್ಕೆ ಗುರುಗ್ರಾಮ ಪೊಲೀಸರು ರಾಂಗ್ ಸೈಡ್'ನಲ್ಲಿ ಸಾಗುವ ವಾಹನ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಗುರುಗ್ರಾಮ ಪೊಲೀಸರು ರಾಂಗ್ ಸೈಡ್'ನಲ್ಲಿ ಸಾಗುವ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅನ್ನು ಶಾಶ್ವತವಾಗಿ ರದ್ದುಪಡಿಸಲು ನಿರ್ಧರಿಸಿದ್ದಾರೆ.

ಈ ಕುರಿತು ಗುರುಗ್ರಾಮ ಪೊಲೀಸ್ ಆಯುಕ್ತರು ಅಲ್ಲಿನ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಅಂತಹ ವಾಹನ ಸವಾರರಿಗೆ ದಂಡ ವಿಧಿಸಿ ಅವರ ಡ್ರೈವಿಂಗ್ ಲೈಸೆನ್ಸ್ ಅನ್ನು ಅಮಾನತು ಪಡಿಸುವಂತೆ ಸಂಚಾರಿ ಪೊಲೀಸರಿಗೆ ಸೂಚನೆ ನೀಡಲಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ತಪ್ಪನ್ನು ಪುನರಾವರ್ತಿಸಿದರೆ ಡ್ರೈವಿಂಗ್ ಲೈಸೆನ್ಸ್ ಅನ್ನು ಶಾಶ್ವತವಾಗಿ ರದ್ದುಪಡಿಸಲಾಗುತ್ತದೆ. ನಂತರ ಆ ವ್ಯಕ್ತಿಗೆ ಮತ್ತೆ ಪರವಾನಗಿಯನ್ನು ನೀಡಲಾಗುವುದಿಲ್ಲ. ಗುರುಗ್ರಾಮ ಸಂಚಾರಿ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, 2019ರಲ್ಲಿ ರಾಂಗ್ ಸೈಡ್'ನಲ್ಲಿ ವಾಹನ ಚಾಲನೆ ಮಾಡಿದ 49,671 ಜನರಿಗೆ ದಂಡ ವಿಧಿಸಲಾಗಿದೆ.

2020ರಲ್ಲಿ 39,765 ವಾಹನ ಸವಾರರಿಗೆ ರಾಂಗ್ ಸೈಡ್'ನಲ್ಲಿ ಚಾಲನೆ ಮಾಡಿದ ಕಾರಣ ದಂಡ ವಿಧಿಸಲಾಗಿತ್ತು. ರಾಂಗ್ ಸೈಡ್'ನಲ್ಲಿ ವಾಹನ ಚಾಲನೆ ಮಾಡಿ ಅಪಘಾತ ಸಂಭವಿಸಿದಲ್ಲಿ ಆರೋಪಿಯನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (2) ರ ಅಡಿಯಲ್ಲಿ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಇದರನ್ವಯ ಕನಿಷ್ಠ 10 ವರ್ಷಗಳ ಶಿಕ್ಷೆಯನ್ನು ವಿಧಿಸಲಾಗುತ್ತದೆ. ಸಿಸಿಟಿವಿ ಕ್ಯಾಮೆರಾಗಳ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳ ಮೇಲೆ ನಿಗಾ ಇಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಚಾರ ನಿಯಮಗಳನ್ನು ಪಾಲಿಸುವ ಮೂಲಕ ತಮ್ಮ ಹಾಗೂ ಇತರರ ಜೀವಕ್ಕೆ ಅಪಾಯವಾಗದಂತೆ ನೋಡಿಕೊಳ್ಳಬೇಕೆಂದು ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯಾಗುವುದನ್ನು ತಪ್ಪಿಸಲು ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, ರಸ್ತೆ ಅಪಘಾತಗಳಿಂದ ಸಾವು, ಅಂಗವೈಕಲ್ಯ ಉಂಟಾಗುತ್ತಿದೆ. ವಿಶ್ವದ 199 ದೇಶಗಳಲ್ಲಿ ಸಂಭವಿಸುವ ರಸ್ತೆ ಅಪಘಾತ ಸಾವುಗಳ ಸಂಖ್ಯೆಯಲ್ಲಿ ಭಾರತವು ಮೊದಲ ಸ್ಥಾನದಲ್ಲಿದೆ.

ವರದಿಗಳ ಪ್ರಕಾರ 2019ರಲ್ಲಿ ಭಾರತದಲ್ಲಿ ಒಟ್ಟು 4,49,002 ಅಪಘಾತಗಳು ಸಂಭವಿಸಿದ್ದು, ಇದರಲ್ಲಿ 1,51,113 ಜನರು ಸಾವನ್ನಪ್ಪಿದರೆ, 4,51,361 ಜನರು ಗಾಯಗೊಂಡಿದ್ದಾರೆ. 2019ರ ಸೆಪ್ಟೆಂಬರ್'ನಿಂದ ಹೊಸ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ನಂತರ ಪರಿಸ್ಥಿತಿ ಅಲ್ಪ ಪ್ರಮಾಣದಲ್ಲಿ ಮಾತ್ರ ಸುಧಾರಿಸಿದೆ ಎಂದು ಕೇಂದ್ರ ಸಾರಿಗೆ ಇಲಾಖೆ ತಿಳಿಸಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಭಾರತದ ರಸ್ತೆಗಳನ್ನು ಸುರಕ್ಷಿತವಾಗಿಸಲು ಇಲಾಖೆಯು ಹೊಸ ಯೋಜನೆಗಳನ್ನು ರೂಪಿಸುತ್ತಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ರಸ್ತೆ ನಿರ್ಮಾಣದಲ್ಲಿ ದೋಷ ಕಂಡು ಬಂದರೆ ಸಂಬಂಧಪಟ್ಟ ಏಜೆನ್ಸಿಗೆ ಶಿಕ್ಷೆ ವಿಧಿಸುವ ಕಾನೂನನ್ನು ತರಲಾಗುವುದು ಎಂದು ಹೇಳಿದ್ದರು.

ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗೆ ಕೆಟ್ಟ ರಸ್ತೆಗಳೂ ಸಹ ಪ್ರಮುಖ ಕಾರಣ. ರಸ್ತೆ ಸುರಕ್ಷತೆಯ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಕೇಂದ್ರ ಸಾರಿಗೆ ಇಲಾಖೆಯು ಜನವರಿ 18ರಿಂದ ಫೆಬ್ರವರಿ 17ರವರೆಗೆ ಒಂದು ತಿಂಗಳ ಕಾಲ ರಸ್ತೆ ಸುರಕ್ಷತಾ ಮಾಸವನ್ನು ಆಚರಿಸುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ 2025ರ ವೇಳೆಗೆ ರಸ್ತೆ ಅಪಘಾತ ಪ್ರಮಾಣವನ್ನು 50%ನಷ್ಟು ಕಡಿಮೆಗೊಳಿಸುವ ಗುರಿಯನ್ನು ಹೊಂದಿದ್ದಾರೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.