ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಹೊಂದಿರುವ ವಾಹನಗಳ ವಿರುದ್ಧ ಹರಿಯಾಣದ ಗುರುಗ್ರಾಮ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯಾಗಿದೆ ಎಂದು ಕಂಡುಬರುವ ವಾಹನಗಳಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಹೊರಡಿಸಿರುವ ಹೊಸ ಆದೇಶದಲ್ಲಿ ತಿಳಿಸಲಾಗಿದೆ.

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ನ್ಯಾಯಾಲಯದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಈ ಹೊಸ ಆದೇಶ ಹೊರಡಿಸಲಾಗಿದೆ ಎಂದು ಗುರುಗ್ರಾಮ ಪೊಲೀಸರು ತಿಳಿಸಿದ್ದಾರೆ. ಈ ಹೊಸ ಆದೇಶಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಈಗಾಗಲೇ ಸಂಚಾರ ಪೊಲೀಸರಿಗೆ ನೀಡಲಾಗಿದೆ. ಇದರಿಂದಾಗಿ ಸಂಚಾರ ಪೊಲೀಸರು ತಕ್ಷಣದಿಂದಲೇ ಕ್ರಮ ಕೈಗೊಳ್ಳಲಿದ್ದಾರೆ. ವಾಹನಗಳ ಯಾವುದೇ ಭಾಗದಲ್ಲಿ ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಪ್ರದರ್ಶಿಸಬಾರದು.

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಅಂತಹ ಸ್ಟಿಕ್ಕರ್‌ಗಳನ್ನು ನಂಬರ್‌ ಪ್ಲೇಟ್‌ನಲ್ಲಿ ಅಳವಡಿಸಿಕೊಂಡಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಪರಿಶೀಲಿಸುವ ಪ್ರತಿ 20 ವಾಹನಗಳಲ್ಲಿ ಒಂದು ವಾಹನವು ಜಾತಿ ಸೂಚಕ ಸ್ಟಿಕ್ಕರ್‌ ಅನ್ನು ಹೊಂದಿರುತ್ತದೆ ಎಂದು ಗುರುಗ್ರಾಮ ಸಂಚಾರ ಪೊಲೀಸರು ತಿಳಿಸಿದ್ದಾರೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ವಾಹನಗಳಲ್ಲಿ ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಪ್ರದರ್ಶಿಸುವುದನ್ನು ತಡೆಯಲು ಹಾಗೂ ನ್ಯಾಯಾಲಯದ ಆದೇಶವನ್ನು ಸರಿಯಾಗಿ ಜಾರಿಗೊಳಿಸಲು ಗುರುಗ್ರಾಮ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಲಿದ್ದಾರೆ.

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಕಾರು ಅಥವಾ ಬೈಕ್ ಸೇರಿದಂತೆ ಯಾವುದೇ ವಾಹನದಲ್ಲಿ ಅಂಟಿಸಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಪೊಲೀಸರ ಪ್ರಕಾರ ವಾಹನ ಮಾಲೀಕರು ರಸ್ತೆಯಲ್ಲಿ ಸಾಗುವಾಗ ತಮ್ಮ ಸಾಮಾಜಿಕ ಸ್ಥಾನಮಾನವನ್ನು ತೋರಿಸಲು ಈ ರೀತಿ ಸ್ಟಿಕ್ಕರ್‌ಗಳನ್ನು ವಾಹನಗಳಲ್ಲಿ ಅಂಟಿಸಿಕೊಳ್ಳುತ್ತಿದ್ದಾರೆ. ಈ ನಿಯಮವನ್ನು ಉಲ್ಲಂಘಿಸುವ ವಾಹನ ಸವಾರರಿಗೆ ಎಷ್ಟು ದಂಡ ವಿಧಿಸಲಾಗುವುದು ಎಂಬ ಮಾಹಿತಿ ಬಿಡುಗಡೆಯಾಗಿಲ್ಲ.

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಈ ಸಮಸ್ಯೆ ಗುರುಗ್ರಾಮದಲ್ಲಿ ಮಾತ್ರವಲ್ಲದೆ ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲಿಯೂ ಕಂಡುಬರುತ್ತದೆ. ಹಲವು ವಾಹನ ಸವಾರರು ವಾಹನಗಳ ನಂಬರ್ ಪ್ಲೇಟ್ ಹಾಗೂ ವಿಂಡ್‌ಸ್ಕ್ರೀನ್‌ಗಳ ಮೇಲೆ ಜಾತಿ ಸೂಚಕ ಸ್ಟಿಕ್ಕರ್‌ಗಳನ್ನು ಅಂಟಿಸುತ್ತಿದ್ದಾರೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ದೇಶಾದ್ಯಂತ ಈ ರೀತಿ ಸ್ಟಿಕ್ಕರ್ ಹೊಂದಿರುವ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಗುರುಗ್ರಾಮ ಪೊಲೀಸರಿಗೂ ಮುನ್ನ ಉತ್ತರ ಪ್ರದೇಶ ಪೊಲೀಸರು ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದ್ದರು.

ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಪೊಲೀಸ್ ಇಲಾಖೆ

ಮುಂಬರುವ ದಿನಗಳಲ್ಲಿ ಭಾರತದ ಇತರ ಭಾಗಗಳ ಪೊಲೀಸರು ಸಹ ವಾಹನಗಳ ಮೇಲೆ ಜಾತಿ ಸೂಚಕ ಸ್ಟಿಕ್ಕರ್ ಹೊಂದಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಈ ರೀತಿಯ ಸ್ಟಿಕ್ಕರ್‌ಗಳು ಇತರ ವಾಹನ ಸವಾರರಿಗೆ ಅಸುರಕ್ಷಿತ ಭಾವನೆ ಮೂಡಿಸುವ ಕಾರಣ ಪೊಲೀಸರು ಕ್ರಮಕೈಗೊಳ್ಳುವುದು ಅಗತ್ಯವಾಗಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Gurugram police to take strict action against vehicles having caste identity stickers. Read in Kannada.
Story first published: Wednesday, February 24, 2021, 9:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X