ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಮಹಾಮಾರಿ ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ಕೂಡಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಬೆನ್ನಲುಬಾಗಿ ಸೇವೆ ಸಲ್ಲಿಸುತ್ತಿವೆ.

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಹೌದು, ಸಂಕಷ್ಟದ ಪರಿಸ್ಥಿತಿಯಲ್ಲೂ ಸರ್ಕಾರದ ಕರೆಗೆ ಓಗೊಟ್ಟು ಭಾರೀ ಪ್ರಮಾಣದ ದೇಣಿಗೆ ನೀಡಿರುವುದಲ್ಲದೆ ವೈದ್ಯಕೀಯ ಸೇವೆಗಳಿಗೂ ಸಹಾಯ ಮಾಡುತ್ತಿರುವ ಆಟೋ ಕಂಪನಿಗಳು ಸರ್ಕಾರದ ಪ್ರಯತ್ನಗಳಿಗೆ ಶಕ್ತಿ ತುಂಬುತ್ತಿದ್ದು, ಹೀರೋ ಮೋಟೊಕಾರ್ಪ್ ಕಂಪನಿಯು ಕೂಡಾ ಹಲವಾರು ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುತ್ತಿದೆ. ವೈದ್ಯಕೀಯ ಸೌಲಭ್ಯಗಳನ್ನು ಪೂರೈಕೆ ಮಾಡುವುದರ ಜೊತೆಗೆ ಗ್ರಾಮೀಣ ಭಾಗದ ಆರೋಗ್ಯ ಅಭಿವೃದ್ದಿ ಮೇಲೂ ಗಮನಹರಿಸಿದೆ.

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ರೂ.100 ಕೋಟಿ ದೇಣಿಗೆ ಘೋಷಣೆ ಮಾಡಿರುವ ಹೀರೋ ಸಮೂಹ ಸಂಸ್ಥೆಗಳು ರೂ.50 ಕೋಟಿ ಹಣಕಾಸಿನ ನೆರವು ಮತ್ತು ಇನ್ನುಳಿದ ರೂ.50 ಕೋಟಿ ಹಣದಲ್ಲಿ ವೈದ್ಯಕೀಯ ಉಪಕರಣಗಳ ಜೊತೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಅಭಿವೃದ್ದಿಗಾಗಿ ವ್ಯಯ ಮಾಡುವುದಾಗಿ ಹೇಳಿತ್ತು.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಇದೀಗ ಕೊಟ್ಟ ಮಾತಿನಂತೆ ಕೇಂದ್ರ ಸರ್ಕಾರಕ್ಕೆ ಹಣಕಾಸಿನ ನೆರವು ಒದಗಿಸಿರುವುದಲ್ಲದೆ ವೈದ್ಯಕೀಯ ಉಪಕರಣಗಳನ್ನು ಪೂರೈಕೆ ಜೊತೆ ಜೊತೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಅಭಿವೃದ್ದಿ ಶ್ರಮಿಸುತ್ತಿದೆ.

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ವೈರಸ್ ಹರಡುವಿಕೆ ತಡೆಯಲು ಸರ್ಕಾರದ ನೀಡಿರುವ ಸೂಚನೆಗಳನ್ನು ಪಾಲಿಸುವಂತೆ ಜನತೆಯಲ್ಲಿ ಅರಿವು ಮೂಡಿಸುತ್ತಿರು ಹೀರೋ ಕಂಪನಿಯ ಸಿಬ್ಬಂದಿಯು ವಿವಿಧ ಸಂಘ-ಸಂಸ್ಥೆಗಳ ಮೂಲಕ ಸುರಕ್ಷಾ ಸಾಧನಗಳಾದ ಮಾಸ್ಕ್, ಹ್ಯಾಂಡ್ ಸ್ಯಾನಿಟೈರ್ ಅನ್ನು ವಿತರಣೆ ಮಾಡುತ್ತಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಸುಮಾರು 5 ಸಾವಿರ ಲೀಟರ್‌ನಷ್ಟು ಹ್ಯಾಂಡ್ ಸ್ಯಾನಿಟೈರ್ ವಿತರಣೆ ಮಾಡಿರುವ ಹೀರೋ ಕಂಪನಿಯು ಕರೋನಾ ವಿರುದ್ಧ ಹೋರಾಟದಲ್ಲಿ ವಿಶೇಷ ಪಾತ್ರವಹಿಸುತ್ತಿದ್ದು, ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೆರೆದಿದೆ.

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಇದರ ಜೊತೆಗೆ ಗ್ರಾಮೀಣ ಭಾಗಕ್ಕೆ ಸರಿಯಾದ ಸಮಯಕ್ಕೆ ವೈದ್ಯಕೀಯ ಸೌಲಭ್ಯಗಳನ್ನು ತಲುಪಿಸುವುದಕ್ಕಾಗಿ ಬೈಕ್ ಆ್ಯಂಬುಲೆನ್ಸ್ ನೀಡಿದ್ದು, ತುರ್ತು ವೈದ್ಯಕೀಯ ಸೌಲಭ್ಯಗಳನ್ನು ತುಲುಪಿಸಲು ಇವು ಸಾಕಷ್ಟು ಸಹಕಾರಿಯಾಗುವಂತೆ ಸಿದ್ದಪಡಿಸಲಾಗಿದೆ.

MOST READ: ವೈದ್ಯರ ನೆರವಿಗೆ ಬರಲಿದೆ ಮಹೀಂದ್ರಾ ನಿರ್ಮಾಣದ ವಿಶೇಷ ಏರೋಸೊಲ್ ಬಾಕ್ಸ್

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಮೊದಲ ಹಂತವಾಗಿ ದೇಶದ ವಿವಿಧ ಭಾಗಗಳಿಗೆ 60 ಬೈಕ್ ಆ್ಯಂಬುಲೆನ್ಸ್ ನೀಡಲಾಗಿದ್ದು, 150ಸಿಸಿ ಮೇಲ್ಪಟ್ಟ ಬೈಕ್ ಮಾದರಿಗಳಲ್ಲಿ ಅಚ್ಚುಕಟ್ಟಾಗಿ ತುರ್ತು ಚಿಕಿತ್ಸಾ ಉಪಕರಣಗಳನ್ನ ಜೋಡಣೆ ಮಾಡಲಾಗಿದೆ.

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

ಬೈಕ್ ಆ್ಯಂಬುಲೆನ್ಸ್‌ನಲ್ಲಿ ಸಣ್ಣದಾದ ಬೆಡ್, ಆ್ಯಕ್ಸಿಜನ್ ಸಿಲಿಂಡರ್, ಪ್ರಥಮ ಚಿಕಿತ್ಸಾ ಕಿಟ್ ಮತ್ತು ಅಗ್ನಿಶಾಮಕ ಮತ್ತು ಸೈರನ್ ಸೌಲಭ್ಯವಿದ್ದು, ಮುಂಬರುವ ದಿನಗಳಲ್ಲಿ 5 ಸಾವಿರಕ್ಕೂ ಹೆಚ್ಚು ಬೈಕ್ ಆ್ಯಂಬುಲೆನ್ಸ್ ನಿರ್ಮಾಣ ಮಾಡುವ ಗುರಿಹೊಂದಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ದೇಶಾದ್ಯಂತ 5 ಸಾವಿರ ಲೀಟರ್ ಹ್ಯಾಂಡ್ ಸ್ಯಾನಿಟೈಜರ್ ವಿತರಣೆ ಮಾಡಿದ ಹೀರೋ ಮೋಟೊಕಾರ್ಪ್

200ಕ್ಕೂ ಹೆಚ್ಚು ಎನ್‌ಜಿಓ ಸಂಸ್ಥೆಗಳ ಜೊತೆಗೆ ಕಾರ್ಯನಿರ್ವಹಿಸುತ್ತಿರುವ ಹೀರೋ ಕಂಪನಿಯು ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗಿದೆ.

Most Read Articles

Kannada
English summary
Hero MotoCorp Doubles Covid-19 Relief Efforts. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X