ಒಡಿಶಾ ದುರಂತ ಮಾಸುವ ಮುನ್ನವೇ ಆಂಧ್ರದಲ್ಲಿ ಭೀಕರ ರೈಲು ಅಪಘಾತ: 13 ಸಾವು, 50 ಜನರಿಗೆ ಗಾಯ

ಆಂಧ್ರಪ್ರದೇಶದ (Andhra Pradesh) ವಿಜಯನಗರಂ (Vizianagaram) ಜಿಲ್ಲೆಯಲ್ಲಿ ಹೌರಾ - ಚೆನ್ನೈ (Howrah - Chennai) ಮಾರ್ಗದಲ್ಲಿ ಸಂಭವಿಸಿದ ರೈಲು ದುರಂತದಲ್ಲಿ 13 ಮಂದಿ ಸಾವನ್ನಪ್ಪಿದ್ದು, 50 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ವರ್ಷ ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ರೈಲು ದುರಂತದ ಬಳಿಕ, ನಡೆದಿರುವ ಎರಡನೇ ದುರ್ಘಟನೆಯಾಗಿದೆ.

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ವಿಜಯನಗರಂನಿಂದ 40 ಕಿಮೀ ದೂರದಲ್ಲಿರುವ ಕಂಟಕಪಲ್ಲಿಯಲ್ಲಿ ಪಲಾಸ ಪ್ಯಾಸೆಂಜರ್ ರೈಲು (Palasa passenger train) ರಾಯಗಡ ಪ್ಯಾಸೆಂಜರ್ ರೈಲಿಗೆ (Rayagada passenger train) ಹಿಂಬದಿಯಿಂದ ಡಿಕ್ಕಿ ಹೊಡೆದು ಮೂರು ಬೋಗಿಗಳು ಹಳಿತಪ್ಪಿವೆ ಎಂದು ಪೂರ್ವ ಕರಾವಳಿ ರೈಲ್ವೆ (East Coast Railway - ECR) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಡಿಶಾ ದುರಂತ ಮಾಸುವ ಮುನ್ನವೇ ಆಂಧ್ರದಲ್ಲಿ ಭೀಕರ ರೈಲು ಅಪಘಾತ: 13 ಸಾವು, 50 ಜನರಿಗೆ ಗಾಯ

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ವಿಶಾಖಪಟ್ಟಣಂ ಹಾಗೂ ವಿಜಯನಗರಂ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಗೆ ಸಂತಾಪ ಸೂಚಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ (Y S Jagan Mohan Reddy), ಮೃತಪಟ್ಟಿರುವ ರಾಜ್ಯದ ಸ್ಥಳೀಯರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಹಾಗೂ ಗಾಯಗೊಂಡಿರುವವರಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಇತರೆ, ರಾಜ್ಯದವರೂ ಸಾವನ್ನಪ್ಪಿದ್ದರೆ, ಅವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ ರೂ.50,000 ಪರಿಹಾರ ನೀಡುವುದಾಗಿ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ. ಸದ್ಯ ಈ ಮಾರ್ಗದಲ್ಲಿ ಸಂಚರಿಸುವ 18 ರೈಲುಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದ್ದು, 22 ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಗಳು ಹೇಳಿದ್ದಾರೆ.

ಒಡಿಶಾ ದುರಂತ ಮಾಸುವ ಮುನ್ನವೇ ಆಂಧ್ರದಲ್ಲಿ ಭೀಕರ ರೈಲು ಅಪಘಾತ: 13 ಸಾವು, 50 ಜನರಿಗೆ ಗಾಯ

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, 'ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ರೈಲ್ವೆಅಧಿಕಾರಿಗಳು ಒಟ್ಟಾಗಿ ಪರಿಹಾರ ಕಾರ್ಯಗಳಲ್ಲಿ ಭಾಗಿಯಾಗಿದ್ದಾರೆ' ಎಂದು ಹೇಳಿದ್ದಾರೆ.

ಘಟನೆ ಸಂಬಂಧ ನೆರವಾಗಲು ಪೂರ್ವ ಕರಾವಳಿ ರೈಲ್ವೆ (East Coast Railway) ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ (ಭುವನೇಶ್ವರ - 0674 - 2301625, 2301525, 2303069, ಮತ್ತು ವಾಲ್ಟೇರ್ - 0891 - 2885914). ಇನ್ನು, ಆಂಧ್ರಪ್ರದೇಶದಲ್ಲಿ ಈ ರೈಲು ದುರಂತ ಹೇಗೆ ಸಂಭವಿಸಿತು ಎನ್ನುವುದರ ಬಗ್ಗೆ ಅಧಿಕಾರಿಗಳ ತನಿಖೆಯಿಂದ ಬಯಲಾಗಬೇಕಾಗಿದೆ.

ಒಡಿಶಾ ದುರಂತ ಮಾಸುವ ಮುನ್ನವೇ ಆಂಧ್ರದಲ್ಲಿ ಭೀಕರ ರೈಲು ಅಪಘಾತ: 13 ಸಾವು, 50 ಜನರಿಗೆ ಗಾಯ

ಕಳೆದ ಕೆಲವು ತಿಂಗಳ ಹಿಂದೆ, ಒಡಿಶಾದ ಬಾಲಸೋರ್‌ನಲ್ಲಿ ನಡೆದ ಇಂತಹದ್ದೇ ದುರ್ಘಟನೆಯಲ್ಲಿ ಬೆಂಗಳೂರು - ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್ - ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ ಸಂಭವಿಸಿತ್ತು. 288ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 800ಕ್ಕೂ ಹೆಚ್ಚಿನ ಮಂದಿ ಗಾಯಗೊಂಡಿದ್ದರು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, October 30, 2023, 11:21 [IST]
English summary
Horrible train accident andhra pradesh after odisha disaster 13 killed 50 injured
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+