ಬೈಕ್ ಮತ್ತು ಕಾರುಗಳಲ್ಲಿ ಕಡ್ಡಾಯಗೊಳ್ಳಲಿದೆ ಎಬಿಎಸ್ ಟೆಕ್ನಾಲಜಿ..!!
ವಾಹನಗಳಲ್ಲಿನ ಕೆಲವು ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುತ್ತಿರುವ ಕೇಂದ್ರ ಸರ್ಕಾರವು ಇದೀಗ ದ್ವಿಚಕ್ರ ವಾಹನಗಳಲ್ಲಿ ಎಬಿಎಸ್ ತಂತ್ರಜ್ಞಾನವನ್ನು ಕಡ್ಡಾಯಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.
ದೇಶದಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ವಾಹನಗಳಲ್ಲಿನ ಕೆಲವು ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೊಳಿಸುತ್ತಿರುವ ಕೇಂದ್ರ ಸರ್ಕಾರವು ಇದೀಗ ದ್ವಿಚಕ್ರ ವಾಹನಗಳಲ್ಲಿ ಎಬಿಎಸ್ ತಂತ್ರಜ್ಞಾನವನ್ನು ಕಡ್ಡಾಯಗೊಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ.

ಈ ಹಿಂದೆ ಏಪ್ರಿಲ್ 1 ರಿಂದ ಭಾರತದಲ್ಲಿ ಸಂಪೂರ್ಣವಾಗಿ ಬಿಎಸ್ 3 ಎಂಜಿನ್ ವಾಹನಗಳನ್ನು ನಿಷೇಧ ಮಾಡಿರುವ ಕೇಂದ್ರ ಸರ್ಕಾರವು, ಬಿಎಸ್ 4 ಮೇಲ್ಪಟ್ಟ ವಾಹನಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡುತ್ತಿದೆ. ಅಂತೆಯೇ ಇದೀಗ ಎಬಿಎಸ್ (ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್) ತಂತ್ರಜ್ಞಾನವನ್ನು ಕಡ್ಡಾಯಸುವ ನಿಟ್ಟಿನಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದೆ.

ಈಗಾಗಲೇ ಕೆಲವು ಸುಧಾರಿತ ಬೈಕ್ ಮತ್ತು ದುಬಾರಿ ಬೈಕ್‌ಗಳಲ್ಲಿ ಮಾತ್ರ ಈ ಸೌಲಭ್ಯವಿದ್ದು, ಕೇಂದ್ರ ಸರ್ಕಾರ ಹೊಸ ನಿಮಯದಂತೆ 125-ಸಿಸಿ ಮೇಲ್ಪಟ್ಟ ಎಲ್ಲಾ ಬೈಕ್‌ಗಳಲ್ಲೂ ಈ ನಿಯಮವನ್ನು ಕಡ್ಡಾಯವಾಗಿ ಜಾರಿಗೆ ಮಾಡಲಿದೆ.

ಎಬಿಎಸ್‌ನಿಂದ ಏನು ಲಾಭ?
ಹೌದು. ಇದು ಪ್ರತಿಯೊಬ್ಬರ ಮನಸ್ಸಿನಲ್ಲೂ ಮೂಡಬಹುದಾದ ಸಹಜ ಪ್ರಶ್ನೆ. ಒಂದು ವೇಳೆ ಬೈಕ್‌ಗಳಲ್ಲಿ ಎಬಿಎಸ್ ತಂತ್ರಜ್ಞಾನ ಅಳವಡಿಕೆ ಇದ್ದಲ್ಲಿ ಅಪಘಾತಗಳ ತೀವ್ರತೆಯನ್ನು ತಡೆಯಬಹುದಾಗಿದ್ದು, ಜೊತೆಗೆ ಬ್ರೇಕಿಂಗ್ ವ್ಯವಸ್ಥೆ ಮೇಲೆ ಸಂಪೂರ್ಣ ಹಿಡಿದ ಸಾಧಿಸಬಹುದಾಗಿದೆ.

ಎಬಿಎಸ್ ಮತ್ತು ಎಬಿಎಸ್ ಇಲ್ಲದ ಬೈಕ್ ಮಾದರಿಗಳಿಗೂ ಬೆಲೆಗಳಲ್ಲಿ ಸಾಕಷ್ಟು ವ್ಯತ್ಯಾಸವಿದ್ದು, ಬೈಕ್ ಮಾದರಿಗಳಿಗೆ ಅನುಗುಣವಾಗಿ 5 ರಿಂದ 8 ಸಾವಿರ ರೂಪಾಯಿ ಹೆಚ್ಚುವರಿ ದರಗಳು ನಿಗದಿಯಾಗಿರುತ್ತವೆ.
Recommended Video


ಮತ್ತೊಂದು ಮುಖ್ಯ ವಿಚಾರ ಏನೆಂದರೆ ಎಬಿಎಸ್ ತಂತ್ರಜ್ಞಾನವು ಸವಾರಿಗೆ ಸಂಪೂರ್ಣ ಸುರಕ್ಷತೆಯನ್ನು ನೀಡಲಿದ್ದು, ಹೊಸ ನಿಮಯದಿಂದ ನಗರಪ್ರದೇಶಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳ ಸಂಖ್ಯೆಯನ್ನು ಕೂಡಾ ತಡೆಯಬಹುದಾಗಿದೆ.

ಇನ್ನು ಬೈಕ್ ಮಾದರಿಗಳಲ್ಲಿ ಅಷ್ಟೇ ಅಲ್ಲದೇ ಕಾರುಗಳಲ್ಲೂ ಎಬಿಎಸ್ ಟೆಕ್ನಾಲಜಿ ಈಗಾಗಲೇ ಬಳಕೆಯಲ್ಲಿದ್ದು, ಅದು ಪ್ರತಿ ಕಾರು ಮಾದರಿಗಳಲ್ಲೂ ಬಳಕೆ ಮಾಡುವ ನಿಟ್ಟಿನಲ್ಲಿ ಕೆಲವು ತಿದ್ದುಪಡಿಗಳನ್ನು ಕೂಡಾ ಜಾರಿ ಮಾಡುತ್ತಿದೆ. ಇದರಿಂದ ಅಪಘಾತದ ತೀವ್ರತೆ ತಗ್ಗಿಸಬಹುದಾಗಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೊಸ ನಿಯಮವು ದ್ವಿಚಕ್ರ ವಾಹನ ಸವಾರರಿಗೆ ಅನುಕೂಲಕರವಾಗಲಿದ್ದು, 2018ರ ಏಪ್ರಿಲ್ 1ರಿಂದ ಎಬಿಎಸ್ ಕಡ್ಡಾಯವಾಗಿ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಇನ್ಮುಂದೆ ಹೊಸ ಬೈಕ್ ಖರೀದಿದಾರರು ಪ್ರಸ್ತುತ ಮಾರುಕಟ್ಟೆಯಲ್ಲಿ ನಿಯಮಗಳಿಗೆ ಅನುಗುಣವಾಗಿ ಬೈಕ್ ಆಯ್ಕೆ ಮಾಡುವುದು ಸುರಕ್ಷೆ ದೃಷ್ಠಿಯಿಂದ ಒಳ್ಳೆಯದು.
Trending on DriveSpark Kannada:
ಮಾಡಿದ ತಪ್ಪಿಗೆ ರೂ.1.61 ಲಕ್ಷ ದಂಡ ಪಾವತಿ ಮಾಡಿದ ಮಾರುತಿ ಸುಜುಕಿ
ಬಿಡುಗಡೆಗಾಗಿ ಸ್ಪಾಟ್ ಟೆಸ್ಟಿಂಗ್ ನಡೆಸಿದ ಟಿವಿಎಸ್ ಗ್ರಾಫೈಟ್ ಸ್ಕೂಟರ್


Click it and Unblock the Notifications








