ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ದಾಂಪತ್ಯದ ಜೀವನದಲ್ಲಿ ತಮ್ಮ ಮದುವೆ ವರ್ಷೀಕೋತ್ಸವ ಮತ್ತು ಅವರವರ ಹುಟ್ಟುಹಬ್ಬದಂದು ಉಡುಗೊರೆಗಳನ್ನು ವಿನಿಮಯ ಮಾದಿಕೊಳ್ಳುತ್ತಿರುತ್ತಾರೆ ಇದರ ಬಗ್ಗೆ ಪ್ರತ್ಯೇಕವಾಗಿ ಏನು ಹೇಳಬೇಕಿಲ್ಲ. ನಿಮ್ಮ ದಾಂಪತ್ಯದ ಜೀವನದಲ್ಲಿ ನೀವು ಸಹ ಇಂತಹ ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡಿರುತ್ತೀರ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಆದರೆ ಯಾರಿಗಾದರೂ ಸರ್ಪ್ರೈಸ್ ಆಗಿ ಗಿಫ್ಟ್ ನೀಡಿದಾಗ, ಗಿಫ್ಟ್ ಪಡೆದ ಆ ವ್ಯಕ್ತಿಯ ಕಣ್ಣಿನಲ್ಲಿ ಕಾಣುವ ಸಂತೋಷವು ನಮಗೆ ತೃಪ್ತಿಯನ್ನು ನೀಡುತ್ತೆ. ಅದರಲ್ಲಿಯು ನಮ್ಮ ಮನಸಿಗೆ ತುಂಬಾ ಹತ್ತಿರವಾದವರು ನೀಡಿದ ಸರ್ಪ್ರೈಸ್ ಗಿಫ್ಟ್ ನಮ್ಮ ಜೀವನದಲ್ಲಿ ಮರೆಯಲಾಗದ ಉಡುಗೊರೆಯಾಗಿ ಸ್ಥಾನವನ್ನ ಪಡೆದುಕೊಳ್ಳುತ್ತೆ ಅಲ್ವಾ.? ಇಂದು ನಾವು ಹೇಳಲು ಹೊರಟಿರುವ ಘಟನೆ ಕೂಡಾ ಅಂತಾದ್ದೆ. ಇಲ್ಲಿ ಒಬ್ಬ ಪತಿಯು ತನ್ನ ಪತ್ನಿಯ ಹುಟ್ಟು ಹಬ್ಬದಂದು ಹೊಸ ಕಾರನ್ನು ಉಡುಗೊರೆಯಾಗಿ ನೀಡಿದ್ದಾನೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಅಸಲಿಗೆ ಈ ದಂಪತಿಗಳು ಈಗಾಗಲೇ ಒಂದು ಕಾರನ್ನು ತಮ್ಮದಾಗಿಸಿಕೊಂಡಿದ್ದು, ದಿನನಿತ್ಯದ ಓಡಾಟಕ್ಕೆ ಯಾವುದಾದರು ಒಂದು ಸಣ್ಣ ಕಾರು ಖರೀದಿ ಮಾದುವ ಯೋಜನೆಯಲಿದ್ದರು. ಹೀಗಾಗಿ ಹೊಸ ಕಾರನ್ನು ಖರೀದಿ ಮಾಡಲು ಮುಂಡಾದ ದಂಪತಿಗಳು ಮೊದಲಿಗೆ ಶೋರುಂಗೆ ಹೋಗಿ ಎಂಟ್ರಿ ಲೆವೆಲ್ ಪ್ರೀಮಿಯಂ ಹ್ಯಾಚ್‍‍ಬ್ಯಾಕ್ ಆದ ಮಾರುತಿ ಸುಜುಕಿ ಇಗ್ನಿಸ್ ಕಾರನ್ನು ಟೆಸ್ಟ್ ಡ್ರೈವ್ ಮಾಡಿದರು.

ಅಷ್ಟರಲಿಯೇ ಪತಿಯು ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಧಾರಿತ ಬಿಳಿ ಬಣ್ಣದ ಮಾರುತಿ ಸುಜುಕಿ ಸ್ವಿಫ್ಟ್ ಕಾರನ್ನು ಖರೀದಿಸಿ ತನ್ನ ಪತ್ನಿಗೆ ಸರ್ಪ್ರೈಸ್ ನೀಡಲು ಮುಂದಾಗಿದ್ದ. ಟೆಸ್ಟ್ ಡ್ರೈವ್ ಮುಗಿಸಿ ಬಂದ ಆಕೆಗೆ ನಿನಗಾಗಿ ಒಂದು ಹೊಸ ಕಾರು ಕಾಯುತ್ತಿದೆ ಇದನ್ನು ಇನ್ಮುಂದೇ ನೀನೆ ಡ್ರೈವ್ ಮಾಡಬೇಕು ಎಂದು ಹೇಳಿ ಉಡುಗೊರೆಯನ್ನು ನೀಡಿಯೇ ಬಿಟ್ಟ. ಈ ಕುರಿತಾದ ವಿಡಿಯೋವನ್ನು ಪ್ರತೀಕ್ ರಥಿ ಎಂಬುವವರು ತಮ್ಮ ಯೂಟ್ಯೂಬ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಆ ವಿಡಿಯೋ ಇಲ್ಲಿದೆ ನೋಡಿ..

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಬಗ್ಗೆ ಯಾರಿಗೇ ತಾನೇ ಗೊತ್ತಿಲ್ಲಾ ಹೇಳಿ. ಪ್ರತೀ ತಿಂಗಳ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಈ ಕಾರಿನ ಹೆಸರು ಇದ್ದೇ ಇರುತ್ತೆ. ಏಕೆಂದರೆ ಈ ಕಾರು ನೀಡುವ ಮೈಲೇಜ್ ಮತ್ತು ಈ ಕಾರಿನ ಬೆಲೆ ಹಾಗು ವೈಶಿಷ್ಟ್ಯತೆಗಳಿಗೆ ಅದೆಷ್ಟೋ ಮಂದಿ ಫಿದಾ ಆಗಿದ್ದಾರೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ತಮ್ಮ ಜನಪ್ರಿಯ ಮೊದಲನೆಯ ತಲೆಮಾರಿನ ಸ್ವಿಫ್ಟ್ ಹ್ಯಾಚ್‍‍ಬ್ಯಾಕ್ ಕಾರನ್ನು 2005 ರಲ್ಲಿ ಬಿಡುಗಡೆಗೊಳಿಸಿದ್ದು, ಮೂರನೆಯ ತಲೆಮಾರಿನ ಸ್ವಿಫ್ಟ್ ಕಾರನ್ನು ಕಳೆದ ವರ್ಷ ದೆಹಲಿಯಲ್ಲಿ ನಡೆದ 2018ರ ಆಟೋ ಎಕ್ಸ್ ಪೋ ಮೇಳದಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಬಿಡುಗಡೆಗೊಂಡಾಗಿನಿಂದಲೂ ಗ್ರಾಹಕರಲ್ಲಿ ಹಾಟ್ ಫೇವರೇಟ್ ಹ್ಯಾಚ್‍ಬ್ಯಾಕ್ ಎಂಬ ಖ್ಯಾತಿಯನ್ನು ಪಡೆದಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರು 2018ರ 'ಇಂಡಿಯನ್ ಕಾರ್ ಆಫ್ ದಿ ಇಯರ್' ಎಂಬ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದು, ಕಳೆದ ವರ್ಷ ಈ ಪ್ರಶಸ್ತಿಯನ್ನು ಹ್ಯುಂಡೈ ವೆರ್ನಾ ಸೆಡಾನ್ ಕಾರು ತನ್ನದಾಗಿಸಿಕೊಂಡಿತ್ತು. ಇಂದಿಗೂ ಸಹ ಹೆಚ್ಚಿನ ಜನಪ್ರಿಯತೆಯನ್ನು ಈ ಕಾರು ಪಡೆದುಕೊಳ್ಳುತ್ತಿದೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಐದನೇ ತಲೆಮಾರಿನ ಹರ್ಟೆಕ್ಟ್ (Heartect) ತಳಹದಿಯಲ್ಲಿ ನೂತನ ಸ್ವಿಫ್ಟ್ ನಿರ್ಮಾಣ ಮಾಡಲಾಗಿದ್ದು, ಇದು ಹೆಚ್ಚು ಶಕ್ತಿಶಾಲಿ, ಬಿಗಿತವನ್ನು ಪಡೆಯಲಿದೆ. ಜೊತೆಗೆ ಅತ್ಯುತ್ತಮ ಚಾಲನಾ ಅನುಭವದೊಂದಿಗೆ ಗರಿಷ್ಠ ಇಂಧನ ಕ್ಷಮತೆಯನ್ನು ಕಾಪಾಡಿಕೊಳ್ಳಲಿದೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಎಂಜಿನ್ ಸಾಮರ್ಥ್ಯ

ಹೊಸ ಸ್ವಿಫ್ಟ್ ವಿನೂತನ ಕಾರುಗಳು 1.2-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 1.3-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಗಳು 83 ಬಿಎಚ್‌ಪಿ ಮತ್ತು 115ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಡೀಸೆಲ್ ಆವೃತ್ತಿಯು 74 ಬಿಎಚ್‌ಪಿ ಮತ್ತು 190 ಎನ್ಎಂ ಟಾರ್ಕ್ ಉತ್ಪಾದಿಸುತ್ತವೆ.

MOST READ: ಹೇಗಿರಲಿದೆ ನೋಡಿ ಬಿಡುಗಡೆಯಾಗಲಿರುವ ಹೊಸ ಮಾರುತಿ ಸುಜುಕಿ ಎರ್ಟಿಗಾ ಸ್ಪೋರ್ಟ್

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಜೊತಗೆ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಮಾಡಬಹುದಾಗಿದ್ದು, ಡಿಜೈರ್ ಮತ್ತು ಬಲೆನೊ ಕಾರುಗಳಿಂತಲೂ ಹೆಚ್ಚು ಆಕರ್ಷಣೆ ಪಡೆದುಕೊಂಡಿದೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಕಾರಿನ ಒಳ ಮತ್ತು ಹೊರ ವಿನ್ಯಾಸ

ಸ್ಪೋರ್ಟಿ ಇಂಟಿರಿಯರ್ ಲುಕ್ ಪಡೆದಿರುವ ಹೊಸ ಸ್ವಿಫ್ಟ್ ಕಾರುಗಳು ಅತ್ಯಾಕರ್ಷಕ ಹೆಕ್ಷಾಗೊನಲ್ ಗ್ರಿಲ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ನ್ಯೂ ಫ್ರಂಟ್ ಬಂಪರ್, ಫಾಗ್ ಲ್ಯಾಂಪ್, ಎಲ್‌ಇಡಿ ಸಿಗ್ನಿಚರ್ ಟೈಲ್ ಲೈಟ್ ಕೂಡಾ ನೀಡಲಾಗಿದೆ.

MOST READ: ಭಾರತದಲ್ಲಿ ಮುಂದಿನ ವರ್ಷದಿಂದ ಸುಜುಕಿ ಜಿಮ್ನಿ ಉತ್ಪಾದನೆ ಪ್ರಾರಂಭ..

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಇನ್ನು ಸ್ಮಾರ್ಟ್ ಕನೆಕ್ಟಿವಿಟಿಗೂ ಹೊಸ ಕಾರುಗಳಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, 7 ಇಂಚಿನ ಇನ್ಪೋಟೈನ್‌ಮೆಂಟ್, ಆಪಲ್ ಕಾರ್ ಪ್ಲೇ, ಅಂಡ್ರಾಯ್ಡ್ ಆಟೋ, ಮಿರರ್ ಲಿಂಕ್ ಮತ್ತು ಕ್ಲೈಮೆಟ್ ಕಂಟ್ರೋಲರ್ ಸಿಸ್ಟಂ ಒದಗಿಸಲಾಗಿದೆ.

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

ಸುರಕ್ಷಾ ಸಾಧನಗಳು

ಎಂಜಿನ್ ಸ್ಟಾರ್ಟ್ ಆ್ಯಂಡ್ ಸ್ಟಾಪ್ ಬಟನ್ ಒದಗಿಸಲಾಗಿದ್ದು, ಆಟೋ ಹೆಡ್‌ಲ್ಯಾಂಪ್, ಆಟೋ ಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಕೀ ಲೇಸ್ ಎಂಟ್ರಿ, ಎಲೆಕ್ಟ್ರಿಕ್ ಆಪರೇಟಿಂಗ್ ರಿಯರ್ ವ್ಯೂವ್ ಮಿರರ್, ಎಬಿಎಸ್ ಸೇರಿದಂತೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್ ಸೌಲಭ್ಯವಿದೆ.

MOST READ: ಮಾರುಕಟ್ಟೆಯಿಂದ ಹೊರ ಬಂದರೂ ಸೇನೆಯಿಂದ ಭಾರೀ ಬೇಡಿಕೆ ಪಡೆಯುತ್ತಿರುವ ಮಾರುತಿ ಸುಜುಕಿ ಜಿಪ್ಸಿ

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಗಿಫ್ಟ್ ನೀಡಿದ ಪತಿ

2018ರ ಸ್ವಿಫ್ಟ್ ಕಾರಿನ ಬೆಲೆಗಳನ್ನು ದೆಹಲಿ ಎಕ್ಸ್ ಶೋರಂ ಪ್ರಕಾರ ಆರಂಭಿಕ ಕಾರು ಮಾದರಿಯನ್ನು ರೂ. 4.99 ಲಕ್ಷಕ್ಕೆ ಮತ್ತು ಟಾಪ್ ಕಾರು ಮಾದರಿಯನ್ನು ರೂ. 8.39 ಲಕ್ಷಕ್ಕೆ ನಿಗದಿ ಮಾಡಲಾಗಿದ್ದು, ಥರ್ಡ್ ಜನರೇಷನ್ ವೈಶಿಷ್ಟ್ಯತೆಗಳೊಂದಿಗೆ ಹೊಸ ಕಾರುಗಳನ್ನು ಅಭಿವೃದ್ಧಿ ಮಾಡಿದೆ.

Most Read Articles

Kannada
English summary
Husband Gifts New Maruti Suzuki Swift As Birthday Gift To His Wife. Read In Kannada
Story first published: Wednesday, June 12, 2019, 16:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X