22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ಭಾರತದ ಪ್ರತಿಯೊಬ್ಬ ಪ್ರಜೆಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಹಕ್ಕಿದೆ. ಇದರ ಜೊತೆಗೆ ಸರ್ಕಾರದ ಕಾನೂನುಗಳನ್ನು ಹಾಗೂ ನಿಯಮಗಳನ್ನು ಪಾಲಿಸುವ ಕರ್ತವ್ಯವಿದೆ. ಜನರು ಇದನ್ನು ಅರ್ಥಮಾಡಿಕೊಂಡರೆ ನಿಯಮ ಉಲ್ಲಂಘನೆಗಳ ಸಂಖ್ಯೆ ಕಡಿಮೆಯಾಗುತ್ತದೆ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ಭಾರತದಲ್ಲಿ ಪ್ರತಿ ವರ್ಷ ಸಂಭವಿಸುವ ರಸ್ತೆ ಅಪಘಾತಗಳಲ್ಲಿ ಸುಮಾರು 1.50 ಲಕ್ಷ ಜನರು ಸಾವನ್ನಪ್ಪುತ್ತಾರೆ ಎಂಬುದು ಅಂಕಿ ಅಂಶಗಳಿಂದ ದೃಢ ಪಟ್ಟಿದೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

2019ಕ್ಕೂ ಮುನ್ನ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಅಲ್ಪ ಪ್ರಮಾಣದಲ್ಲಿ ದಂಡ ವಿಧಿಸಲಾಗುತ್ತಿತ್ತು. 2019ರ ಸೆಪ್ಟೆಂಬರ್'ನಿಂದ ಜಾರಿಯಾಗಿರುವ ಹೊಸ ಮೋಟಾರು ವಾಹನ ಕಾಯ್ದೆಯನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ವಾಹನಗಳು ನಿಗದಿತ ವೇಗಕ್ಕಿಂತ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ಇದರ ಜೊತೆಗೆ ಡಿ‌ಎಲ್, ಆರ್‌ಸಿ ಬುಕ್ ಇಲ್ಲದೇ ವಾಹನ ಚಾಲನೆ ಮಾಡಿದರೆ, ಡ್ರಿಂಕ್ ಅಂಡ್ ಡ್ರೈವ್ ಮಾಡಿದರೆ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತದೆ. ಕಳೆದ ಒಂದೂವರೆ ವರ್ಷದಿಂದ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ದೇಶದ ವಿವಿಧ ಭಾಗಗಳಲ್ಲಿ ಲಾಕ್‌ಡೌನ್ ಜಾರಿಗೊಳಿಸಿರುವುದೇ ಇದಕ್ಕೆ ಪ್ರಮುಖ ಕಾರಣ. ಹಲವು ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಹೈದರಾಬಾದ್‌ನ ನಿಜಾಂಪೆಟ್‌ನ ಯುವತಿಯೊಬ್ಬಳನ್ನು ಅಲ್ಲಿನ ಪೊಲೀಸರು ಬಂಧಿಸಿದ್ದಾರೆ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ನಿಜಾಂಪೇಟ್‌ನ ಈ ಯುವತಿ ವಾಹನ ಚಾಲನೆ ಮಾಡುತ್ತಾ ಮೊಬೈಲ್ ಬಳಕೆ, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಸೇರಿದಂತೆ ಒಟ್ಟು 22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಳು.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ಇತ್ತೀಚಿಗೆ ಮತ್ತೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಆಕೆಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಆಕೆಯ ಪೋಷಕರನ್ನು ಪೊಲೀಸ್ ಠಾಣೆಗೆ ಕರೆದು ಎಚ್ಚರಿಕೆ ನೀಡಿದ ನಂತರ ಆಕೆಯನ್ನು ಬಿಡುಗಡೆಗೊಳಿಸಲಾಗಿದೆ.

22 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ ಹೈದರಾಬಾದ್ ಯುವತಿ

ವರದಿಗಳ ಪ್ರಕಾರ, ಆ ಯುವತಿಗೆ ಇದುವರೆಗೂ ಒಟ್ಟು ರೂ.9,000 ದಂಡ ವಿಧಿಸಲಾಗಿದೆ. ಪೊಲೀಸರು ದಂಡ ವಿಧಿಸುತ್ತಾರೆ ಎಂಬ ಕಾರಣಕ್ಕೆ ಮಾತ್ರ ಹೆಲ್ಮೆಟ್ ಧರಿಸದೇ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವುದು ಒಳ್ಳೆಯದು.

ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Hyderabad lady violates traffic rules 22 times. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X