ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಖ್ಯಾತ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಎಲೆಕ್ಟ್ರಿಕ್ ವಾಹನಗಳಿಗಾಗಿ ಐಯಾನಿಕ್ ಹೆಸರಿನ ಹೊಸ ಉಪ ಬ್ರಾಂಡ್ ಅನ್ನು ಪರಿಚಯಿಸಿದೆ. ಮುಂದಿನ ವರ್ಷ ಈ ಬ್ರಾಂಡ್ ಅನ್ನು ಬಿಡುಗಡೆಗೊಳಿಸಿ ಅದರಡಿಯಲ್ಲಿ ಕೆಲವು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗುವುದು.

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಈ ಕಾರುಗಳು ಕಂಪನಿಯ ಎಲೆಕ್ಟ್ರಿಕ್ ಎಸ್‌ಯುವಿ ಹಾಗೂ ಎಲೆಕ್ಟ್ರಿಕ್ ಸೆಡಾನ್ ಕಾರುಗಳಾಗಿರಲಿವೆ. ಈ ಬ್ರಾಂಡ್ ಅಡಿಯಲ್ಲಿ ಹ್ಯುಂಡೈ ಕಂಪನಿಯು ಹೊಸ ಸರಣಿಯ ವಾಹನಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ 2021ರ ಆರಂಭದಲ್ಲಿ ಬಿಡುಗಡೆಯಾಗುವ ಮಿಡ್ ಸೈಜ್ ನ ಐಯಾನಿಕ್ 5 ಎಲೆಕ್ಟ್ರಿಕ್ ಎಸ್‌ಯುವಿ ಸಹ ಸೇರಿದೆ.

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಇದರ ಜೊತೆಗೆ ಪ್ರೊಫೆಸಿ ಕಾನ್ಸೆಪ್ಟ್ ಕಾರಿನ ಮೇಲೆ ಆಧಾರಿತವಾಗಿರುವ ಐಯಾನಿಕ್ 6 ಸೆಡಾನ್ ಕಾರನ್ನು ಸಹ ಬಿಡುಗಡೆಗೊಳಿಸಲಾಗುವುದು. ಈ ಕಾರು 2022ರಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಬ್ರಾಂಡ್ ನ ಮೂರನೇ ಕಾರ್ ಆದ ಐಯಾನಿಕ್ 7 ಕಾರನ್ನು 2024ರಲ್ಲಿ ಬಿಡುಗಡೆಗೊಳಿಸಲಾಗುವುದು.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಐಯಾನಿಕ್ ಸರಣಿಯ ಎಲೆಕ್ಟ್ರಿಕ್ ಕಾರುಗಳನ್ನು ಹ್ಯುಂಡೈನ ಎಲೆಕ್ಟ್ರಿಕ್ ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರಂನಲ್ಲಿ (ಇ-ಜಿಎಂಪಿ) ತಯಾರಿಸಲಾಗುವುದು. ಈ ಕಾರುಗಳಲ್ಲಿ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಅಳವಡಿಸಲಾಗುತ್ತದೆ.

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ 5-ಡೋರುಗಳ ಹೈಬ್ರಿಡ್, ಪ್ಲಗ್-ಇನ್ ಹೈಬ್ರಿಡ್ ಹಾಗೂ ಎಲೆಕ್ಟ್ರಿಕ್ ಕಾರಿಗಾಗಿ ಐಯಾನಿಕ್ ಹೆಸರನ್ನು ಬಳಸಿತ್ತು. 2018ರ ಆಟೋ ಎಕ್ಸ್‌ಪೋದಲ್ಲಿ ಐಯಾನಿಕ್ ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳನ್ನು ಪ್ರದರ್ಶಿಸಲಾಗಿತ್ತು.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಮಾಹಿತಿಗಳ ಪ್ರಕಾರ ಐಯಾನಿಕ್ ಎಲೆಕ್ಟ್ರಿಕ್ ಕಾರಿನಲ್ಲಿ 38.3 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯು ಎಲೆಕ್ಟ್ರಿಕ್ ಮೋಟರ್ ಗೆ ಪವರ್ ನೀಡುತ್ತದೆ. ಈ ಎಲೆಕ್ಟ್ರಿಕ್ ಮೋಟರ್ 134 ಬಿಹೆಚ್‌ಪಿ ಪವರ್ ಹಾಗೂ 295 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ

ಐಯಾನಿಕ್ ಹೈಬ್ರಿಡ್ ಕಾರಿನಲ್ಲಿ 1.6-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಮೋಟರ್ 43 ಬಿಹೆಚ್‌ಪಿ ಪವರ್ ಉತ್ಪಾದಿಸುತ್ತದೆ. ಈ ಕಾರಿನಲ್ಲಿ 6 ಸ್ಪೀಡಿನ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಅಳವಡಿಸಲಾಗಿದೆ.

Most Read Articles

Kannada
English summary
Hyundai to launch electric cars under Ioniq brand. Read in Kannada.
Story first published: Monday, August 10, 2020, 18:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X