Just In
- 17 min ago
ಭಾರತದ ನಂತರ ಜಪಾನ್ ಮಾರುಕಟ್ಟೆಯಲ್ಲೂ ಬಿಡುಗಡೆಯಾಗುತ್ತಿದೆ ಹೋಂಡಾ ಹೈನೆಸ್ ಸಿಬಿ 350
- 10 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 12 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 12 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
Don't Miss!
- News
ಬೈಡನ್ ಪದಗ್ರಹಣಕ್ಕೆ ಸಕಲ ಸಿದ್ಧತೆ, ಮದುಮಗಳಂತೆ ಸಿಂಗಾರಗೊಳ್ಳುತ್ತಿದೆ ಸಂಸತ್
- Movies
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಎಲೆಕ್ಟ್ರಿಕ್ ಕಾರುಗಳಿಗಾಗಿ ಹೊಸ ಬ್ರಾಂಡ್ ಬಿಡುಗಡೆಗೊಳಿಸಿದ ಹ್ಯುಂಡೈ
ಖ್ಯಾತ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ಎಲೆಕ್ಟ್ರಿಕ್ ವಾಹನಗಳಿಗಾಗಿ ಐಯಾನಿಕ್ ಹೆಸರಿನ ಹೊಸ ಉಪ ಬ್ರಾಂಡ್ ಅನ್ನು ಪರಿಚಯಿಸಿದೆ. ಮುಂದಿನ ವರ್ಷ ಈ ಬ್ರಾಂಡ್ ಅನ್ನು ಬಿಡುಗಡೆಗೊಳಿಸಿ ಅದರಡಿಯಲ್ಲಿ ಕೆಲವು ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗುವುದು.

ಈ ಕಾರುಗಳು ಕಂಪನಿಯ ಎಲೆಕ್ಟ್ರಿಕ್ ಎಸ್ಯುವಿ ಹಾಗೂ ಎಲೆಕ್ಟ್ರಿಕ್ ಸೆಡಾನ್ ಕಾರುಗಳಾಗಿರಲಿವೆ. ಈ ಬ್ರಾಂಡ್ ಅಡಿಯಲ್ಲಿ ಹ್ಯುಂಡೈ ಕಂಪನಿಯು ಹೊಸ ಸರಣಿಯ ವಾಹನಗಳನ್ನು ಬಿಡುಗಡೆಗೊಳಿಸಲಿದೆ. ಇದರಲ್ಲಿ 2021ರ ಆರಂಭದಲ್ಲಿ ಬಿಡುಗಡೆಯಾಗುವ ಮಿಡ್ ಸೈಜ್ ನ ಐಯಾನಿಕ್ 5 ಎಲೆಕ್ಟ್ರಿಕ್ ಎಸ್ಯುವಿ ಸಹ ಸೇರಿದೆ.

ಇದರ ಜೊತೆಗೆ ಪ್ರೊಫೆಸಿ ಕಾನ್ಸೆಪ್ಟ್ ಕಾರಿನ ಮೇಲೆ ಆಧಾರಿತವಾಗಿರುವ ಐಯಾನಿಕ್ 6 ಸೆಡಾನ್ ಕಾರನ್ನು ಸಹ ಬಿಡುಗಡೆಗೊಳಿಸಲಾಗುವುದು. ಈ ಕಾರು 2022ರಲ್ಲಿ ಬಿಡುಗಡೆಯಾಗಲಿದೆ. ಇನ್ನು ಈ ಬ್ರಾಂಡ್ ನ ಮೂರನೇ ಕಾರ್ ಆದ ಐಯಾನಿಕ್ 7 ಕಾರನ್ನು 2024ರಲ್ಲಿ ಬಿಡುಗಡೆಗೊಳಿಸಲಾಗುವುದು.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ಐಯಾನಿಕ್ ಸರಣಿಯ ಎಲೆಕ್ಟ್ರಿಕ್ ಕಾರುಗಳನ್ನು ಹ್ಯುಂಡೈನ ಎಲೆಕ್ಟ್ರಿಕ್ ಗ್ಲೋಬಲ್ ಮಾಡ್ಯುಲರ್ ಪ್ಲಾಟ್ಫಾರಂನಲ್ಲಿ (ಇ-ಜಿಎಂಪಿ) ತಯಾರಿಸಲಾಗುವುದು. ಈ ಕಾರುಗಳಲ್ಲಿ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಅಳವಡಿಸಲಾಗುತ್ತದೆ.

ಹ್ಯುಂಡೈ ಕಂಪನಿಯು ತನ್ನ 5-ಡೋರುಗಳ ಹೈಬ್ರಿಡ್, ಪ್ಲಗ್-ಇನ್ ಹೈಬ್ರಿಡ್ ಹಾಗೂ ಎಲೆಕ್ಟ್ರಿಕ್ ಕಾರಿಗಾಗಿ ಐಯಾನಿಕ್ ಹೆಸರನ್ನು ಬಳಸಿತ್ತು. 2018ರ ಆಟೋ ಎಕ್ಸ್ಪೋದಲ್ಲಿ ಐಯಾನಿಕ್ ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳನ್ನು ಪ್ರದರ್ಶಿಸಲಾಗಿತ್ತು.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ಮಾಹಿತಿಗಳ ಪ್ರಕಾರ ಐಯಾನಿಕ್ ಎಲೆಕ್ಟ್ರಿಕ್ ಕಾರಿನಲ್ಲಿ 38.3 ಕಿ.ವ್ಯಾ ಬ್ಯಾಟರಿಯನ್ನು ಅಳವಡಿಸಲಾಗಿದೆ. ಈ ಬ್ಯಾಟರಿಯು ಎಲೆಕ್ಟ್ರಿಕ್ ಮೋಟರ್ ಗೆ ಪವರ್ ನೀಡುತ್ತದೆ. ಈ ಎಲೆಕ್ಟ್ರಿಕ್ ಮೋಟರ್ 134 ಬಿಹೆಚ್ಪಿ ಪವರ್ ಹಾಗೂ 295 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಐಯಾನಿಕ್ ಹೈಬ್ರಿಡ್ ಕಾರಿನಲ್ಲಿ 1.6-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ ಎಲೆಕ್ಟ್ರಿಕ್ ಮೋಟರ್ ಅಳವಡಿಸಲಾಗಿದೆ. ಈ ಎಲೆಕ್ಟ್ರಿಕ್ ಮೋಟರ್ 43 ಬಿಹೆಚ್ಪಿ ಪವರ್ ಉತ್ಪಾದಿಸುತ್ತದೆ. ಈ ಕಾರಿನಲ್ಲಿ 6 ಸ್ಪೀಡಿನ ಡ್ಯುಯಲ್-ಕ್ಲಚ್ ಗೇರ್ ಬಾಕ್ಸ್ ಅಳವಡಿಸಲಾಗಿದೆ.