Just In
Don't Miss!
- News
Breaking; ತೈಲ ಕೊರತೆ, ಶ್ರೀಲಂಕಾದಲ್ಲಿ ವಾಹನ ಸಂಚಾರಕ್ಕೆ ಹೊಸ ನಿಯಮ
- Movies
ಕೌಟುಂಬಿಕ ಸಮಸ್ಯೆ ಬದಿಗೊತ್ತಿ 'ಮಾವು-ಬೇವು' ಕಥೆ ಹೇಳಲು ಹೊರಟ ಸುಚೇಂದ್ರ ಪ್ರಸಾದ್!
- Sports
ಕಿವೀಸ್ ವಿರುದ್ಧ ಮತ್ತೊಂದು ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್: ನ್ಯೂಜಿಲೆಂಡ್ಗೆ ವೈಟ್ವಾಶ್ ಮುಖಭಂಗ
- Lifestyle
ನಿಮ್ಮಿಬ್ಬರ ಸಂಬಂಧ ಹೀಗಿದ್ದರೆ ಒಟ್ಟಿಗಿದ್ದು ಪಡುವ ನರಕಕ್ಕಿಂತ ಗುಡ್ಬೈ ಹೇಳುವುದೇ ಬೆಸ್ಟ್!
- Finance
ಜೂ.27ರಂದು ವಾಣಿಜ್ಯ ಬೆಳೆ ಅಡಿಕೆ, ಕಾಫಿ, ಮೆಣಸು, ಏಲಕ್ಕಿ ಪೇಟೆ ಧಾರಣೆ
- Education
UAS Dharwad Recruitment 2022 : ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ಜು.2ಕ್ಕೆ ನೇರ ಸಂದರ್ಶನ
- Technology
‘ಫಾಸ್ಟ್ಯಾಗ್' ನಲ್ಲಿರುವ ಹಣವನ್ನು ಕದಿಯಬಹುದಾ? ವೈರಲ್ ವೀಡಿಯೊದ ಅಸಲಿಯತೆ ಏನು?
- Travel
ನಾಡ ಹಬ್ಬ ಮೈಸೂರು ದಸರಾ - ನವರಾತ್ರಿ ಉತ್ಸವ 2022
ಉದ್ಯಮ ಬೆಳವಣಿಗೆಗೆ ಕಾರಣರಾದ ಉದ್ಯೋಗಿಗಳಿಗೆ 100 ಕಾರುಗಳನ್ನು ಉಡುಗೊರೆಯಾಗಿ ನೀಡಿದ ಖಾಸಗಿ ಕಂಪನಿ
ಉದ್ಯಮದ ಬೆಳವಣಿಗೆ ಸತತ ಪರಿಶ್ರಮ ವಹಿಸಿದ ಉದ್ಯೋಗಿಗಳಿಗೆ ಖಾಸಗಿ ಕಂಪನಿಗಳು ಉಡುಗೊರೆ ನೀಡುವುದು ಸಾಮಾನ್ಯ. ಆದರೆ ಇಲ್ಲೊಂದು ಐಟಿ ಕಂಪನಿ ತನ್ನ ಉದ್ಯಮ ಬೆಳವಣಿಗೆಗೆ ಕಾರಣರಾದ ಉದ್ಯೋಗಿಗಳಿಗೆ ದುಬಾರಿ ಬೆಲೆಯ ಕಾರುಗಳನ್ನು ಉಡುಗೊರೆಯಾಗಿ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಐಟಿ ಕಂಪನಿಗಳು ತಮ್ಮ ವಾರ್ಷಿಕ ಬೆಳವಣಿಗೆ ಮತ್ತು ಲಾಭಾಂಶವನ್ನು ಆಧರಿಸಿ ಉದ್ಯೋಗಿಗಳಿಗೆ ಉಡುಗೊರೆಯಾಗಿ ನೀಡುವ ಸಂಸ್ಕೃತಿ ಪ್ರಸ್ತುತ ವೇಗವಾಗಿ ಹರಡುತ್ತಿದೆ. ಇತ್ತೀಚೆಗೆ ಚೆನ್ನೈ ಮೂಲದ ಕಿಸ್‌ಫ್ಲೋ ಕಂಪನಿಯು ತನ್ನ ಐವರು ಉದ್ಯೋಗಿಗಳಿಗೆ ಬರೋಬ್ಬರಿ 1 ಕೋಟಿ ಮೌಲ್ಯ ಬಿಎಂಡಬ್ಲ್ಯು 5 ಸರಣಿ ಕಾರುಗಳನ್ನು ನೀಡಿ ಸುದ್ದಿಯಾಗಿತ್ತು. ಇದೀಗ ಚೆನ್ನೈನಲ್ಲಿಯೇ ಮತ್ತೊಂದು ಕಂಪನಿ ಕೂಡಾ ತನ್ನ 100 ಉದ್ಯೋಗಿಗಳಿಗೆ ಕಾರುಗಳನ್ನು ಉಡುಗೊರೆಯಾಗಿ ನೀಡಿ ಸುದ್ದಿಯಾಗಿದೆ.

ಹೌದು, ಚೆನ್ನೈ ಮೂಲದ ಐಡಿಯಾಸ್2ಐಟಿ(Ideas2IT) ಐಟಿ ಕಂಪನಿಯು ತನ್ನ ಕಚೇರಿಯಲ್ಲಿ ಬಹುದಿನಗಳಿಂದ ಕಾರ್ಯನಿರ್ವಹಿಸುತ್ತಿರುವ ನೂರು ಉದ್ಯೋಗಿಗಳಿಗೆ ಮಾರುತಿ ಸುಜುಕಿ ನಿರ್ಮಾಣದ ನೂರು ಕಾರುಗಳನ್ನು ಉಡುಗೊರೆಯಾಗಿ ನೀಡಿದೆ.

ಚೆನ್ನೈನಲ್ಲಿ ಪ್ರಧಾನ ಕಛೇರಿ ಹೊಂದಿರುವ ಐಡಿಯಾಸ್2ಐಟಿ ಇತ್ತೀಚಿನ ದಿನಗಳಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿದ್ದು, ಕಂಪನಿಯು ಆದಾಯದಲ್ಲಿನ ಬೆಳವಣಿಗೆಯು ಉದ್ಯೋಗಿಗಳ ಮಹೋನ್ನತ ಕೊಡುಗೆ ಪ್ರಮುಖ ಕಾರಣವೆಂದು ಪರಿಗಣಿಸಿದೆ.

ಹೀಗಾಗಿ ಕಂಪನಿಯು ಉದ್ಯೋಗಿಗಳನ್ನು ಪ್ರೇರೇಪಿಸುವ ಸಲುವಾಗಿ ದೀರ್ಘಾವಧಿ ಸೇವೆ ಸಲ್ಲಿಸಿದ 100 ಉದ್ಯೋಗಿಗಳಿಗೆ 100 ಕಾರುಗಳನ್ನು ಉಡುಗೊರೆಯಾಗಿ ನೀಡಿದ್ದು, ಕಾರಿನ ಜೊತೆಗೆ ಇತರೆ ಉದ್ಯೋಗಿಗಳಿಗೂ ವಿವಿಧ ದುಬಾರಿ ಉಡುಗೊರೆಯಾಗಿ ನೀಡಿದೆ.

ಉದ್ಯೋಗಿಗಳಿಗೆ ಕಾರು ಉಡುಗೊರೆ ಕುರಿತಂತೆ ಮಾತನಾಡಿದ ಐಡಿಯಾಸ್2ಐಟಿ ಕಂಪನಿಯ ಮುಖ್ಯಸ್ಥ ಹರಿ ಸುಬ್ರಮಣಿಯನ್ ಅವರು ನಮ್ಮ ಸಂಸ್ಥೆಯಲ್ಲಿ 500ಕ್ಕೂ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಕಂಪನಿಯು ಉನ್ನತಿಗಾಗಿ ಶ್ರಮಿಸಿರುವ 100 ಹಿರಿಯ ಉದ್ಯೋಗಿಗಳಿಗೆ ಅವರ ಶ್ರಮದಿಂದ ನಾವು ಪಡೆದ ಸಂಪತ್ತಿನಲ್ಲಿ ಒಂದಿಷ್ಟು ಉಡುಗೊರೆಯಾಗಿ ನೀಡಲಾಗಿದೆ ಎಂದಿದ್ದಾರೆ.

ಅಷ್ಟಕ್ಕೂ ಇದು ಅವರ ತಮ್ಮ ಪರಿಶ್ರಮದಿಂದ ಗಳಿಸಿದ ಸಂಪತ್ತು. ಹೀಗಾಗಿ ಇದು ಉಡುಗೊರೆ ಅಲ್ಲ, ಅವರ ಪರಿಶ್ರಮ ಫಲವೆಂದು ಐಡಿಯಾಸ್2ಐಟಿ ಸಂಸ್ಥಾಪಕ ಮತ್ತು ಅಧ್ಯಕ್ಷ ಮುರಳಿ ವಿವೇಕಾನಂದನ್ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ನಮ್ಮ ಉದ್ಯೋಗಿಗಳಿಗೆ ಇನ್ನು ಹೆಚ್ಚಿನ ಮಟ್ಟದ ಉಡುಗೊರೆಗಳು ಸಿಗಲಿವೆ ಎಂದಿದ್ದಾರೆ.

ಐಡಿಯಾಸ್2ಐಟಿ ಕಂಪನಿಯ ಉದ್ಯೋಗಿಗಳಿಗೆ ನೀಡಲಾಗಿರುವ ಹೊಸ ಕಾರುಗಳು ಬಹುತೇಕ ಮಾರುತಿ ಸುಜುಕಿ ನಿರ್ಮಾಣದ ಕಾರು ಮಾದರಿಗಳಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ಬಲೆನೊ ಮಾದರಿಯನ್ನು ಹೆಚ್ಚಿನ ಸಂಖ್ಯೆಯ ಉದ್ಯೋಗಿಗಳಿಗೆ ವಿತರಿಸಲಾಗಿದೆ.

ದೇಶದ ಅತಿದೊಡ್ಡ ಕಾರು ಮಾರಾಟ ಕಂಪನಿಯಾಗಿ ಹೊರಹೊಮ್ಮಿರುವ ಮಾರುತಿ ಸುಜುಕಿಯು ತನ್ನ ಪ್ರಮುಖ ಕಾರು ಮಾದರಿಗಳ 2022ರ ಆವೃತ್ತಿಗಳನ್ನು ವಿನೂತನ ಫೀಚರ್ಸ್‌ಗಳೊಂದಿಗೆ ಉನ್ನತೀಕರಿಸಿ ಬಿಡುಗಡೆಗೊಳಿಸುತ್ತಿದ್ದು, ಕಂಪನಿಯು ಬಲೆನೊ ಹೊಸ ಆವೃತ್ತಿಯನ್ನು ಸಹ ವಿನೂತನ ಫೀಚರ್ಸ್‌ಗಳೊಂದಿಗೆ ಬಿಡುಗಡೆಗೊಳಿಸಿದೆ.

ಬಲೆನೊ ಹ್ಯಾಚ್‌ಬ್ಯಾಕ್ ಕಾರು ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.49 ಲಕ್ಷ ಬೆಲೆ ಹೊಂದಿದ್ದು, ಸಿಗ್ಮಾ, ಡೆಲ್ಟಾ, ಜೆಟಾ ಮತ್ತು ಅಲ್ಫಾ ಎಂಬ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದೆ.

ಹೊಸ ಕಾರು ಈ ಹಿಂದಿನ ಮಾದರಿಯಲ್ಲಿರುವಂತೆ ಎಂಜಿನ್ ಆಯ್ಕೆ ಹೊಂದಿದ್ದರೂ ಪ್ರೀಮಿಯಂ ಫೀಚರ್ಸ್ ಮತ್ತು ಬದಲಾವಣೆಗೊಳಿಸಲಾದ ವಿನ್ಯಾಸವು ಗ್ರಾಹಕರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಕಾರಿನಲ್ಲಿ ಈ ಹಿಂದಿನಂತೆಯೇ 1.2 ಲೀಟರ್ ಡ್ಯುಯಲ್ ಜೆಟ್ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

1.2 ಲೀಟರ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಮತ್ತು 5 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 90 ಬಿಎಚ್‌ಪಿ ಮತ್ತು 115 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಿದ್ದು, ಹೊಸ ಕಾರಿನಲ್ಲಿ ಮಾರುತಿ ಸುಜುಕಿಯು ಈ ಬಾರಿ ಹಿಂದಿನ ಮಾದರಿಯಲ್ಲಿನ 4 ಸ್ಪೀಡ್ ಆಟೋ ಕನ್ವರ್ಟ್ ಗೇರ್‌ಬಾಕ್ಸ್ ಬದಲಾಗಿ 5-ಸ್ಪೀಡ್ ಆಟೋಮ್ಯಾಟಿಕ್ ಸಿವಿಟಿ ಗೇರ್‌ಬಾಕ್ಸ್ ಆಯ್ಕೆ ನೀಡಿದೆ.

ಹೊಸ ಕಾರು ಪ್ರತಿ ಲೀಟರ್ ಪೆಟ್ರೋಲ್‌ಗೆ 22.35 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದರ ಜೊತೆಗೆ ಹೊಸದಾಗಿ ಹೊಸ ಸಸ್ಷೆಷನ್ ಸೆಟಪ್‌ನೊಂದಿಗೆ ಹೈ ಎಂಡ್ ಮಾದರಿಯಲ್ಲಿ 14 ಇಂಚಿನ ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಜೋಡಿಸಿದೆ.

ಹಾಗೆಯೇ ಹೊಸ ಹ್ಯಾಚ್‌ಬ್ಯಾಕ್ ಮಾದರಿಯಲ್ಲಿ ಮಾರುತಿ ಸುಜುಕಿಯು ಈ ಬಾರಿ ಹೆಚ್ಚಿನ ಸುರಕ್ಷತೆಗೆ ಒತ್ತು ನೀಡಿದ್ದು, ಹೊಸ ಸುರಕ್ಷತಾ ವೈಶಿಷ್ಟ್ಯಗಳಲ್ಲಿ 6 ಏರ್‌ಬ್ಯಾಗ್, ಹಿಲ್ ಹೋಲ್ಡ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಎಬಿಎಸ್, ಕೀ ಲೆಸ್ ಎಂಟ್ರಿ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಇಎಸ್‌ಪಿ ಮತ್ತು ಇಬಿಡಿ ಸಹ ಸೇರ್ಪಡೆಯಾಗಲಿದ್ದು, ಸುಜುಕಿ ಕಾರ್ ಕನೆಕ್ಟ್ ತಂತ್ರಜ್ಞಾನದಲ್ಲೂ ಸಹ ಸುಧಾರಿತ ವೈಶಿಷ್ಟ್ಯತೆಗಳನ್ನು ಸೇರ್ಪಡೆಗೊಳಿಸಿದೆ.

ಹಾಗೆಯೇ ಹೊಸ ಕಾರು ಕನೆಕ್ಟೆಡ್ ಕಾರ್ ಟೆಕ್ ವೈಶಿಷ್ಟ್ಯದ ಜೊತೆಗೆ ಮಾರುತಿ ಕಂಪನಿಯು ಹೊಸ ಬಲೆನೊದಲ್ಲಿ 9-ಇಂಚಿನ ಡಿಜಿಟಲ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಈ ವಿಭಾಗದ ಮೊದಲ ವೈಶಿಷ್ಟ್ಯಗಳನ್ನು ಸಹ ನೀಡುತ್ತದೆ.