ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ರಸ್ತೆಗಳು ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಕಾರಣಕ್ಕೆ ಬಹುತೇಕ ದೇಶಗಳಲ್ಲಿ ಹೆದ್ದಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ಭಾರತದಲ್ಲಿಯೂ ಹಲವು ನಗರಗಳ ನಡುವೆ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಈ ಹೆದ್ದಾರಿಗಳು ನಗರಗಳ ನಡುವಿನ ಸಂಚಾರ ಅವಧಿಯನ್ನು ಕಡಿಮೆ ಮಾಡುತ್ತವೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ ಶೀಘ್ರದಲ್ಲೇ ದೆಹಲಿ ಹಾಗೂ ಜೈಪುರ ನಗರಗಳ ನಡುವೆ ಆರಂಭವಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳು ದೆಹಲಿ - ಜೈಪುರ ನಗರಗಳ ನಡುವೆ ಎಲೆಕ್ಟ್ರಿಕ್ ಹೆದ್ದಾರಿ ಸ್ಥಾಪಿಸಲು ವಿದೇಶಿ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ದೆಹಲಿ - ಜೈಪುರ ನಗರಗಳು ಮಾತ್ರವಲ್ಲದೆ ದೆಹಲಿ - ಮುಂಬೈ ನಗರಗಳ ನಡುವೆಯೂ ಎಲೆಕ್ಟ್ರಿಕ್ ಹೆದ್ದಾರಿಯನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಸ್ವೀಡಿಷ್ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಭಾರತದ ಹೆದ್ದಾರಿ ವಲಯದಲ್ಲಿ ವಿದೇಶಿ ಹೂಡಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಭಾರತದಲ್ಲಿ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ನಿರ್ಮಿಸಲು ಈ ಹಿಂದೆ ನಿತಿನ್ ಗಡ್ಕರಿರವರು ಯುರೋಪಿಯನ್ ಒಕ್ಕೂಟಕ್ಕೆ ಆಹ್ವಾನ ನೀಡಿದ್ದರು ಎಂಬುದು ಗಮನಾರ್ಹ. ದೆಹಲಿ - ಜೈಪುರ ನಗರಗಳ ನಡುವೆ ಎಲೆಕ್ಟ್ರಿಕ್ ಹೆದ್ದಾರಿ ನಿರ್ಮಿಸುವುದು ನನ್ನ ಕನಸು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದು ಉದ್ದೇಶಿತ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ನಾವು ವಿದೇಶಿ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದರು.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ನಿತಿನ್ ಗಡ್ಕರಿರವರು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ಬಯಸಿದ್ದಾರೆ. ಬಸ್ಸುಗಳಂತಹ ಸಾರ್ವಜನಿಕ ಸಾರಿಗೆ ವಾಹನಗಳನ್ನು ಶೀಘ್ರವೇ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಬಯಸುವುದಾಗಿ ಅವರು ತಿಳಿಸಿದ್ದಾರೆ. ಸಚಿವ ನಿತಿನ್ ಗಡ್ಕರಿರವರು ಹಲವು ವರ್ಷಗಳಿಂದ ಪರ್ಯಾಯ ಇಂಧನಗಳ ಅಗತ್ಯದ ಬಗ್ಗೆ ಹೇಳುತ್ತಿದ್ದಾರೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಪೆಟ್ರೋಲ್, ಡೀಸೆಲ್ ಬದಲಿಗೆ ಸಿ‌ಎನ್‌ಜಿ ಹಾಗೂ ಎಥೆನಾಲ್ ನಂತಹ ಪರ್ಯಾಯ ಇಂಧನಗಳನ್ನು ಬಳಸುವ ಮೂಲಕ ವಿದೇಶದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವನ್ನು ಕಡಿಮೆ ಮಾಡುವಂತೆ ನಿತಿನ್ ಗಡ್ಕರಿರವರು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದರಿಂದ ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂಬುದು ಅವರ ಅಭಿಪ್ರಾಯ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಈಗ ಭಾರತದಲ್ಲಿ ಎಥೆನಾಲ್ ಮಿಶ್ರಿತ ಪೆಟ್ರೋಲ್‌ ಬಳಕೆ ಪ್ರಮಾಣವು ನಿಧಾನವಾಗಿ ಹೆಚ್ಚಾಗುತ್ತಿದೆ. ಬ್ರೆಜಿಲ್ ನಂತಹ ಕೆಲವು ದೇಶಗಳಲ್ಲಿ ಎಥೆನಾಲ್ ಇಂಧನದ ಬಳಕೆ ಈಗಾಗಲೇ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ಭಾರತವು ಈ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿದೆ. ಭಾರತದಲ್ಲಿಯೂ ಎಥೆನಾಲ್ ಇಂಧನದ ಬಳಕೆ ಪ್ರಮಾಣ ಶೀಘ್ರದಲ್ಲಿಯೇ ಹೆಚ್ಚಾಗುವ ನಿರೀಕ್ಷೆಗಳಿವೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಕೇಂದ್ರ ಸರ್ಕಾರವು ತೆಗೆದುಕೊಳ್ಳುತ್ತಿರುವ ಕ್ರಮಗಳಿಂದಾಗಿ ಸಿಎನ್‌ಜಿ ಹಾಗೂ ಎಥೆನಾಲ್‌ನಂತಹ ಪರ್ಯಾಯ ಇಂಧನಗಳ ಬಳಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬಹುದು. ಜೊತೆಗೆ ಪರಿಸರ ಮಾಲಿನ್ಯವಾಗುವುದನ್ನು ಸಹ ತಡೆಯಬಹುದು. ಸಿ‌ಎನ್‌ಜಿ ವಾಹನಗಳು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿವೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಪೆಟ್ರೋಲ್ ಹಾಗೂ ಡೀಸೆಲ್ ಗೆ ಹೋಲಿಸಿದರೆ ಸಿ‌ಎನ್‌ಜಿ ಇಂಧನದ ಬೆಲೆ ಕಡಿಮೆ ಎಂಬುದು ಇದಕ್ಕೆ ಪ್ರಮುಖ ಕಾರಣ. ಇದರಿಂದ ಸಿ‌ಎನ್‌ಜಿ ವಾಹನಗಳ ನಿರ್ವಹಣಾ ವೆಚ್ಚವೂ ಕಡಿಮೆಯಾಗಲಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ಕೇಂದ್ರ ಸರ್ಕಾರ ಹಾಗೂ ಕೆಲವು ರಾಜ್ಯ ಸರ್ಕಾರಗಳು ಜನರನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ. ಜೊತೆಗೆ ಕೆಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡುತ್ತವೆ.

ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ

ದೆಹಲಿ, ಗುಜರಾತ್ ನಂತಹ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗಾಗಿಯೇ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಿವೆ. ಇದರಿಂದ ಈ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಬೆಲೆ ಉಳಿದ ರಾಜ್ಯಗಳಿಗೆ ಹೊಲಿಸಿದರೆ ತೀರಾ ಕಡಿಮೆ ಎಂದೇ ಹೇಳಬಹುದು. ದೆಹಲಿ ಸರ್ಕಾರವು 2020 ರ ಆಗಸ್ಟ್ ತಿಂಗಳಿನಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿತು. ಈ ನೀತಿ ಜಾರಿಗೆ ಬಂದ ನಂತರ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿವೆ. ಇದರ ಜೊತೆಗೆ ದೆಹಲಿಯ ಹಲವು ಇಲಾಖೆಗಳ ಅಧಿಕಾರಿಗಳು ತಮ್ಮ ಪ್ರಯಾಣಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನೇ ಬಳಸುತ್ತಿದ್ದಾರೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
India s first electric highway to open soon between delhi jaipur cities details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X