ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ವಾಯುಪಡೆ

ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ವಿಧಿಸಲಾಗಿದ್ದು, ವೈಸರ್ ಭೀತಿ ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹರಸಾಹಸಪಡುತ್ತಿವೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ವೈರಸ್ ಹರಡುವಿಕೆಯನ್ನು ತಡೆಯಲು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜ್ ಮತ್ತು ಫೇಸ್-ಶೀಲ್ಡ್‌ಗಳ ಬಳಕೆಯು ಹೆಚ್ಚಿಸಲಾಗುತ್ತಿದ್ದರೂ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಅದರಲ್ಲೂ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿರುವ ಕೋವಿಡ್ ಸೋಂಕಿತರಿಗೆ ಅಗತ್ಯವಾಗಿರುವ ಆಕ್ಸಿಜನ್ ಕೊರತೆಯು ಸಾವಿನ ಸಂಖ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಆಕ್ಸಿಜನ್ ಉತ್ಪಾದನಾ ಕಂಪನಿಗಳಿಗೆ ಉತ್ಪಾದನಾ ಸಾಮಾರ್ಥ್ಯಕ್ಕಿಂತ ಹತ್ತು ಪಟ್ಟು ಬೇಡಿಕೆ ಬರುತ್ತಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಹೀಗಾಗಿ ಆಕ್ಸಿಜನ್ ಪೂರೈಕೆ ಮಾಡಲು ಪರದಾಡುತ್ತಿರುವ ಆಕ್ಸಿಜನ್ ಕಂಪನಿಗಳು ಸಾಮಾರ್ಥ್ಯ ಮೀರಿ ಉತ್ಪಾದನಾ ಪ್ರಮಾಣವನ್ನು ಹೆಚ್ಚಿಸಿದ್ದರೂ ಉತ್ಪಾದನೆಗೊಂಡಿರುವ ಆಕ್ಸಿಜನ್ ಅನ್ನು ದೇಶದ ವಿವಿಧ ನಗರಗಳಲ್ಲಿ ಸರಿಯಾದ ಸಮಯಕ್ಕೆ ತಲುಪಿಸುವುದು ಹೊಸ ಸವಾಲಾಗಿ ಪರಿಣಮಿಸಿದೆ. ಇದಕ್ಕಾಗಿಯೇ ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರವು ಆಕ್ಸಿಜನ್ ಸಾಗಾಣಿಕೆಗೆ ರೈಲ್ವೆ ಇಲಾಖೆಯನ್ನು ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇದೀಗ ವಾಯುಪಡೆ ಕೂಡಾ ಆಕ್ಸಿಜನ್ ಪೂರೈಕೆಗೆ ಕೈಜೋಡಿಸಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಹೌದು, ಆಕ್ಸಿಜನ್ ಪೂರೈಕೆಯ ಸಮಯವನ್ನು ತಗ್ಗಿಸಲು ಟ್ಯಾಂಕರ್‌ಗಳನ್ನೇ ಏರ್‌ಲಿಫ್ಟ್ ಮಾಡಲಾಗುತ್ತಿದ್ದು, ಭಾರತೀಯ ವಾಯುಪಡೆಯು ತನ್ನ ಸಿ -17 ಗ್ಲೋಬ್‌ಮಾಸ್ಟರ್ -3 ಮತ್ತು ಐಎಲ್ -76 ಸರಕು ವಿಮಾನಗಳನ್ನು ಜೀವ ರಕ್ಷಕ ಸಾಗಾಣಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಆಕ್ಸಿಜನ್ ಟ್ಯಾಂಕರ್‌ಗಳ ಸಾರಿಗೆ ಸಮಯವನ್ನು ಕಡಿಮೆ ಮಾಡಲು ರೈಲ್ವೆ ಮತ್ತು ವಾಯುಪಡೆಯ ವಿಮಾನಗಳನ್ನು ನಿಯೋಜಿಸುವ ಕುರಿತು ನಿನ್ನೆಯಷ್ಟೇ ಮಾಹಿತಿ ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಏರ್‌ಲಿಫ್ಟ್ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

MOST READ: ಟಿಬೆಟ್ ಮಾರ್ಗವಾಗಿ ವಿಮಾನಗಳ ಹಾರಾಟವನ್ನು ನಿಷೇಧ ಮಾಡಿರುವುದು ಏಕೆ ಗೊತ್ತಾ?

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಆಕ್ಸಿಜನ್ ಪೂರೈಕೆಯ ಸಮಯವನ್ನು ತಗ್ಗಿಸಲು ಸಾಧ್ಯವಿರುವ ಎಲ್ಲಾ ಅವಕಾಶಗಳನ್ನು ಬಳಕೆ ಮಾಡಿಕೊಳ್ಳುವುದಾಗಿ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರವು ಇದೀಗ ಏರ್‌ಲಿಫ್ಟ್ ಮೂಲಕ ಆಕ್ಸಿಜನ್ ಪೂರೈಕೆ ಮಾಡುತ್ತಿರುವುದು ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಇನ್ನು ಸಂಕಷ್ಟ ಸಮಯದಲ್ಲಿ ಆಕ್ಸಿಜನ್ ಉತ್ಪಾದನೆಗಾಗಿ ಕೈಜೋಡಿಸಿರುವ ಆಟೋ ಕಂಪನಿಗಳು ಕೂಡಾ ತನ್ನ ಕಾರು ಉತ್ಪಾದನಾ ಘಟಕದಲ್ಲೇ ತಾತ್ಕಾಲಿಕವಾಗಿ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ತೆರೆಯುತ್ತಿರುವುದು ಕೂಡಾ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

MOST READ: ವಿಮಾನಗಳಲ್ಲಿ ಬಿಳಿ ಬಣ್ಣವನ್ನೇ ಬಳಕೆ ಮಾಡುವುದರ ಹಿಂದಿನ ವೈಜ್ಞಾನಿಕ ಕಾರಣವೇನು?

ಕೋವಿಡ್ ಸಂಕಷ್ಟ: ಆಕ್ಸಿಜನ್ ಟ್ಯಾಂಕರ್‌ಗಳನ್ನು ಏರ್‌ಲಿಫ್ಟ್ ಮಾಡಿದ ಸೇನಾಪಡೆ

ಅದರಲ್ಲೂ ವಿಪತ್ತು ನಿರ್ವಹಣಾ ವಿಚಾರದಲ್ಲಿ ಜನರ ಜೀವ ಕಾಪಾಡಲು ಹಲವಾರು ಸಾಹಸಗಳನ್ನು ಎದರಿಸುವ ಭಾರತೀಯ ವಾಯುಪಡೆಯು ಇದೀಗ ಮತ್ತೊಮ್ಮೆ ದೇಶದ ನಾಗರಿಕರಲ್ಲಿ ಹೊಸ ಭರವಸೆ ಹುಟ್ಟುಹಾಕಿದ್ದು, ಅತಿ ಕಡಿಮೆ ಅವಧಿಯಲ್ಲಿ ಆಕ್ಸಿಜನ್ ಪೂರೈಕೆ ಸಾಧ್ಯವಾಗುತ್ತಿರುವುದು ಸಾವಿರಾರು ಜನರ ಜೀವ ಉಳಿದುಕೊಳ್ಳಲಿವೆ.

Most Read Articles

Kannada
English summary
Indian Air Force C-17 & IL-76 Aircraft Transport Oxygen Trucks For COVID-19 Relief Operations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X