ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಕೋವಿಡ್ -19 ವೈರಸ್ ಸದ್ಯ ಇಡೀ ಪ್ರಪಂಚವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕರೋನಾ ವೈರಸ್ ಮೊದಲು ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿತು. ಕೋವಿಡ್ -19ನಿಂದಾಗಿ ಚೀನಾ, ಇಟಲಿ, ಅಮೆರಿಕಾ, ಸ್ಪೇನ್, ಇಂಗ್ಲೆಂಡ್ ಹಾಗೂ ಇರಾನ್‌ ದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಹಾನಿಯುಂಟಾಗಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಕೋವಿಡ್ -19 ವೈರಸ್ ವಿಶ್ವದಾದ್ಯಂತ 34,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 7 ಲಕ್ಷಕ್ಕೂ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಕೋವಿಡ್ -19 ವೈರಸ್ ಭಾರತದಲ್ಲಿಯೂ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈವರೆಗೆ 1,071 ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದು, 29 ಜನರು ಸಾವನ್ನಪ್ಪಿದ್ದಾರೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಹೆಚ್ಚಿನ ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತೆಗಳನ್ನು ಸಜ್ಜುಗೊಳಿಸಲಾಗಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಭಾರತೀಯ ಸೇನೆಯು ಸಹ ಈ ಮಹಾಮಾರಿ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ. ಭಾರತೀಯ ಸೇನೆಯು ವಿಶೇಷ ರೀತಿಯ ಬಸ್ ಅನ್ನು ಅಭಿವೃದ್ಧಿಪಡಿಸಿದೆ. ಕರೋನಾ ವೈರಸ್ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಚಿಕಿತ್ಸೆ ನೀಡಲು ಭಾರತೀಯ ಸೇನೆಯು ಈ ಬಸ್ ಅನ್ನು ಅಭಿವೃದ್ಧಿಪಡಿಸಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಈ ಬಸ್ ಅನ್ನು ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ತಯಾರಿಸಿದೆ. ಈ ಬಗ್ಗೆ ಭಾರತೀಯ ಸೇನೆಯ ಸಾಮಾನ್ಯ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶಕರು ಟ್ವೀಟ್ ಮಾಡಿದ್ದಾರೆ. ಈ ಬಸ್ಸಿನಲ್ಲಿ ಕೇವಲ ಒಂದು ಡೋರ್ ಅನ್ನು ನೀಡಲಾಗಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಈ ಬಸ್ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯಗಳನ್ನು ಹೊಂದಿದೆ. ಬಸ್ಸಿನಲ್ಲಿ ವೆಂಟಿಲೇಟರ್‌ಗಳನ್ನು ನೀಡಲಾಗಿದೆ. ಕರೋನಾ ವೈರಸ್ ನಿಂದಾಗಿ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ವೆಂಟಿಲೇಟರ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಲಾಗುತ್ತಿದೆ.

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ವಿವಿಧ ದೇಶಗಳ ಸರ್ಕಾರಗಳು ವೆಂಟಿಲೇಟರ್‌ಗಳನ್ನು ತಯಾರಿಸಿ, ಪೂರೈಸಲು ಆಟೋಮೊಬೈಲ್ ಕಂಪನಿಗಳನ್ನು ಕೋರಿವೆ. ಟೆಸ್ಲಾ, ಫೋರ್ಡ್, ಜನರಲ್ ಮೋಟಾರ್ಸ್ ಹಾಗೂ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋಮೊಬೈಲ್ ಕಂಪನಿಗಳು ವೆಂಟಿಲೇಟರ್ ಉತ್ಪಾದನೆಯಲ್ಲಿ ತೊಡಗಿವೆ.

MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಈ ಬಸ್‌ ಅನ್ನು ಚಾಲಕ ಹಾಗೂ ಸಹ-ಚಾಲಕ ಪ್ರತ್ಯೇಕವಾಗಿರುವಂತೆ ಮಾಡಿಫೈಗೊಳಿಸಲಾಗಿದೆ. ರೈಲ್ವೆ ಇಲಾಖೆಯೂ ಸಹ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ರೈಲು ಬೋಗಿಗಳನ್ನು ಐಸೊಲೇಷನ್ ವಾರ್ಡ್ ಗಳನ್ನಾಗಿ ಬದಲಿಸಲಾಗಿದೆ.

MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಅಂದರೆ ರೈಲು ಬೋಗಿಗಳನ್ನು ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವಾರ್ಡ್‌ಗಳಾಗಿ ಬದಲಿಸಲಾಗಿದೆ. ಈಗ ಭಾರತೀಯ ಸೇನೆಯು ಸಹ ಕರೋನಾ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ.

MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ

ಅಮೆರಿಕಾದಂತಹ ದೇಶಗಳು ಕೋವಿಡ್ -19 ವೈರಸ್ ನಿಂದಾಗಿ ತತ್ತರಿಸಿವೆ. ಭಾರತದಲ್ಲಿ ಹೆಚ್ಚು ಜನರು ಬಾಧಿತರಾದರೆ, ಹೆಚ್ಚು ಪರಿಣಾಮಗಳಾಗುವ ಸಾಧ್ಯತೆಗಳಿವೆ. ಭಾರತೀಯ ಸೇನೆಯ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ.

Most Read Articles

Kannada
English summary
Indian army modifies bus to carry Corona virus patients. Read in Kannada.
Story first published: Monday, March 30, 2020, 17:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X