682 ಕಿ.ಮೀ ರೇಂಜ್.. 5-ಸೀಟರ್, ಸ್ವದೇಶಿ Mahindra SUV ಖರೀದಿಸಿದ ಪ್ರಮುಖ ಕ್ರಿಕೆಟಿಗ!
ಗೋವಾ ಮೂಲದ ಕ್ರಿಕೆಟಿಗ ಗಣೇಶರಾಜ್ ನಾರ್ವೇಕರ್ (Ganeshraj Narvekar), ಹೊಚ್ಚ ಹೊಸ ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ (Mahindra BE 6 Batman Edition) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ಶೋರೂಂಗೆ ತೆರಳಿ ನೂತನ ಕಾರನ್ನು ಖುಷಿಯಿಂದ ವಿತರಣೆ ಪಡೆದಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿಯೂ ಪೋಸ್ಟ್ ಮಾಡಿದ್ದು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಮಹೀಂದ್ರಾ ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್ ವಿಶೇಷತೆಗಳೇನು:
ಹೊಸ 'ಬ್ಯಾಟ್‌ಮ್ಯಾನ್ ಎಡಿಷನ್' ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದ್ದು, ರೂ.27.79 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ಬೆಲೆಯನ್ನು ಹೊಂದಿದೆ. ಈ ಕಾರನ್ನು ಆಗಸ್ಟ್ ತಿಂಗಳಲ್ಲಿ ಮಾರಾಟಕ್ಕೆ ತರಲಾಗಿದ್ದು, ಒಟ್ಟು 999 ಯುನಿಟ್‌ಗಳನ್ನು ಮಾತ್ರ ಉತ್ಪಾದಿಸುವುದಾಗಿ ಕಂಪನಿಯು ಘೋಷಣೆ ಮಾಡಿತ್ತು. ಸೆಪ್ಟೆಂಬರ್ 20 ರಿಂದ ವಿತರಣೆಯನ್ನು ಶುರು ಮಾಡಲಾಗಿದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಮಹೀಂದ್ರಾ ಮತ್ತು ಡಿಸಿ ಕಾಮಿಕ್ಸ್ ಸಿನಿಮಾ ನಿರ್ಮಾಣ ಸಂಸ್ಥೆ ವಾರ್ನರ್ ಬ್ರದರ್ಸ್ ಒಪ್ಪಂದ ಮಾಡಿಕೊಂಡಿವೆ. ಇದರಿಂದಾಗಿ ನೂತನ 'ಬಿಇ 6 ಬ್ಯಾಟ್‌ಮ್ಯಾನ್ ಎಡಿಷನ್' ಹೊರಭಾಗದ ವಿನ್ಯಾಸದಲ್ಲಿ ಬ್ಯಾಟ್‌ಮ್ಯಾನ್ ಸಿನಿಮಾ & ಕಾಮಿಕ್ಸ್‌ಗಳಲ್ಲಿ ಕಂಡುಬರುವ ಅಂಶಗಳನ್ನು ಹೆಚ್ಚಾಗಿ ಬಳಕೆ ಮಾಡಲಾಗಿದೆ.
ಇದು ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫ್ಲಶ್-ಪಾಪ್ ಔಟ್ ಡೋರ್ ಹ್ಯಾಂಡಲ್‌ಗಳು, ಫಂಕಿ ಸ್ಪಾಯ್ಲರ್, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 20 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಕಸ್ಟಮ್ ಸ್ಯಾಟಿನ್ ಬ್ಲ್ಯಾಕ್ ಬಾಡಿ ಕಲರ್, ಫ್ರಂಟ್ ಡೋರ್‌ನಲ್ಲಿ ಕಸ್ಟಮ್ ಬ್ಯಾಟ್‌ಮ್ಯಾನ್ ಡೆಕಲ್‌ಗಳು & ಟೈಲ್‌ಗೇಟ್‌ನಲ್ಲಿ ಡಾರ್ಕ್ ನೈಟ್ ಬ್ಯಾಡ್ಜ್‌ನ್ನು ತನ್ನದಾಗಿಸಿಕಂಡಿದೆ.
ನೂತನ 'ಬ್ಯಾಟ್‌ಮ್ಯಾನ್ ಎಡಿಷನ್' ಹೆಚ್ಚು ವಿಶಾಲವಾಗಿದೆ. 4,371 ಮಿ.ಮೀ ಉದ್ದ, 1,907 ಮಿ.ಮೀ ಅಗಲ ಮತ್ತು 1,627 ಮಿ.ಮೀ ಎತ್ತರವಿದೆ. 207 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 2,775 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 2,070 ಕೆಜಿ ತೂಕವಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯವನ್ನು ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ದೂರದ ಊರುಗಳಿಗೆ ಪ್ರಯಾಣಿಸಲು ಸಾಧ್ಯವಾಗುವಂತೆ ಪೂರ್ತಿ ಚಾರ್ಜ್‌ನಲ್ಲಿ 682 ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಬಲಿಷ್ಠ ಎಲೆಕ್ಟ್ರಿಕ್ ಮೋಟಾರ್, 285 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಹೊಸ 'ಬ್ಯಾಟ್‌ಮ್ಯಾನ್ ಎಡಿಷನ್' ಕಾರಿನ ಒಳಭಾಗವು ಚೆನ್ನಾಗಿದ್ದು, ಆಲ್-ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಹೊಂದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ದೊಡ್ಡ ಗಾತ್ರದ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಹಾಗೂ ಇನ್ಸ್ಟ್ರುಮೆಂಟೇಶನ್ ಸ್ಕ್ರೀನ್ ಕಸ್ಟಮ್ ಬ್ಯಾಟ್‌ಮ್ಯಾನ್ ಅನಿಮೇಷನ್‌ನ್ನು ಹೊಂದಿವೆ. ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ಮ್ಯಾಗ್ನೆಟಿಕ್ ಕೀ ಫಾಬ್‌ಗಳು ಹಾಗೂ ಹರ್ಮನ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಇದು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








